Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇದು ನನ್ನ ವೈಯಕ್ತಿಕ ಗೆಲುವಲ್ಲ, ಪಕ್ಷದ ಗೆಲುವು : ಕೆ.ಎಸ್.ನವೀನ್

Facebook
Twitter
Telegram
WhatsApp

ವರದಿ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್

ಚಿತ್ರದುರ್ಗ, (ಡಿ.14) : ಕಾಂಗ್ರೆಸ್ ಹಣ ಬಲದ ಮೇಲೆ ಚುನಾವಣೆ ನಡೆಸಿದರೆ, ಬಿಜೆಪಿ.ಸಂಘಟನೆ ಬಲದ ಮೇಲೆ ವಿಶ್ವಾಸವಿಟ್ಟು ಚುನಾವಣೆಯನ್ನು ಎದುರಿಸಿದ್ದರಿಂದ ನನಗೆ ಸಿಕ್ಕ ಗೆಲುವಿನಿಂದ ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ ಧೂಳಿಪಟವಾಗಿದ್ದಾರೆಂದು ವಿಧಾನಪರಿಷತ್ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ ಕೆ.ಎಸ್.ನವೀನ್ ತಮ್ಮ ಮನದಾಳದ ಮಾತನ್ನು ಪಕ್ಷದ ಕಾರ್ಯಕರ್ತರು, ಮುಖಂಡರೊಡನೆ ಹಂಚಿಕೊಂಡರು.

ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‍ಗೆ ಕಳೆದ ಹತ್ತರಂದು ನಡೆದ ಚುನಾವಣೆಯಲ್ಲಿ ಚಿತ್ರದುರ್ಗ-ದಾವಣಗೆರೆ ಕ್ಷೇತ್ರದಿಂದ ಬಿಜೆಪಿ.ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಾಂಗ್ರೆಸ್ ಬಿ.ಸೋಮಶೇಖರ್ ವಿರುದ್ದ 350 ಕ್ಕು ಹೆಚ್ಚು ಮತಗಳ ಅಂತರದಿಂದ ಜಯಸಾಧಿಸಿ ಸಹಸ್ರಾರು ಕಾರ್ಯಕರ್ತರು, ಮುಖಂಡರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಮಹಿಳಾ ಮೋರ್ಚ ಪದಾಧಿಕಾರಿಗಳೊಡನೆ ಮೆರವಣಿಗೆ ಮೂಲಕ ಆಗಮಿಸಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಹಾಗೂ ಒನಕೆ ಓಬವ್ವ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ ನಂತರ ಬಿಜೆಪಿ.ಕಚೇರಿಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.

ಚಿತ್ರದುರ್ಗ ಜಿಲ್ಲೆಯ ಶಾಸಕರುಗಳಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಂ.ಚಂದ್ರಪ್ಪ, ಗೂಳಿಹಟ್ಟಿ ಡಿ.ಶೇಖರ್, ಪೂರ್ಣಿಮ ಶ್ರೀನಿವಾಸ್, ಕೇಂದ್ರ ಮಂತ್ರಿ ಎ.ನಾರಾಯಣಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು, ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ, ಎಸ್.ವಿ.ರಾಮಚಂದ್ರ, ರವೀಂದ್ರನಾಥ್, ಮಾಜಿ ಶಾಸಕ ಬಿ.ಪಿ.ಹರೀಶ್ ಇವರುಗಳು ಅವಿರತ ಹೋರಾಟ ಪರಿಶ್ರಮ, ಬದ್ದತೆಯಿಂದ ನಾನು ಈ ಚುನಾವಣೆಯಲ್ಲಿ ಗೆಲ್ಲಲು ಕಾರಣ. ಎರಡು ಜಿಲ್ಲೆಗಳ ಮಂಡಲ ಅಧ್ಯಕ್ಷರುಗಳು, ಪದಾಧಿಕಾರಿಗಳು, ಕಾರ್ಯಕರ್ತರು, ಚುನಾಯಿತ ಎಲ್ಲಾ ಜನಪ್ರತಿನಿಧಿಗಳ ಶ್ರಮ ಕೂಡ ಅಡಗಿದೆ ಎಂದು ಹೇಳಿದರು.

ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳ ಶಾಸಕರು, ಸಂಸದರು, ಮಾಜಿ ಶಾಸಕರುಗಳು, ಕಾರ್ಯಕರ್ತರು, ಪದಾಧಿಕಾರಿಗಳು. ಮಹಿಳಾ ಮೋರ್ಚದವರು ಪ್ರತಿ ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಮಹಾನಗರ ಪಾಲಿಕೆ ಸದಸ್ಯರುಗಳ ಬಳಿ ಹೋಗಿ ಮತಯಾಚನೆ ಮಾಡಿದ್ದರ ಫಲವಾಗಿ ಈ ಚುನಾವಣೆಯಲ್ಲಿ ನಾನು ಗೆಲ್ಲಲು ಸಾಧ್ಯವಾಯಿತು. ಇದು ನನ್ನ ಗೆಲುವಲ್ಲ. ಕಾರ್ಯಕರ್ತರ ಹಾಗೂ ಪಕ್ಷದ ಗೆಲುವು ಹಾಗಾಗಿ ನನ್ನ ಕೊನೆಯುಸಿರಿರುವತನಕ ಪಕ್ಷಕ್ಕೆ ನಿಷ್ಟಾವಂತನಾಗಿ ದುಡಿಯುತ್ತೇನೆಂದು ಭರವಸೆ ನೀಡಿದರು.

ವಿಭಾಗೀಯ ಸಂಘಟನಾ ಕಾರ್ಯದರ್ಶಿ ಜೇಷ್ಟ ಪಡಿವಾಳ್‍ಜಿರವರ ಸಂಘಟನಾ ಶಕ್ತಿ, ತಂತ್ರಗಾರಿಕೆಯ ಫಲವಾಗಿ ಈ ಚುನಾವಣೆಯಲ್ಲಿ ನನಗೆ ಜಯ ಸಿಕ್ಕಿದೆ. ಅದಕ್ಕಾಗಿ ಕಾರ್ಯಕರ್ತರಿಗೆ ಮತ್ತು ಪಕ್ಷಕ್ಕೆ ಯಾವುದೇ ಚ್ಯುತಿ ಬಾರದಂತೆ ನಿಮ್ಮಗಳ ಮನೆಯ ಮಗನಾಗಿ, ಸೋದರನಾಗಿ ಪಕ್ಷದ ಕೆಲಸ ಮಾಡುತ್ತೇನೆ. ಕಳೆದ ಎರಡು ಚುನಾವಣೆಯಲ್ಲಿ ಸೋತಿದ್ದರೂ ರಾಜ್ಯ ಹಾಗೂ ರಾಷ್ಟ್ರದ ನಾಯಕರು ನನಗೆ ಧೈರ್ಯ ತುಂಬಿ ಮೂರನೆ ಬಾರಿಗೆ ಸ್ಪರ್ಧಿಸಲು ಅವಕಾಶ ನೀಡಿದ್ದಲ್ಲದೆ ಕೊಟ್ಟ ಮಾತಿನಂತೆ ನನ್ನನ್ನು ಗೆಲ್ಲಿಸಿಕೊಂಡಿರುವುದಕ್ಕೆ ನಾನು ಎಲ್ಲರಿಗೂ ಅಭಾರಿಯಾಗಿದ್ದೇನೆ. ಎರಡು ಜಿಲ್ಲೆಗಳಿಂದ ದೊಡ್ಡ ಪಡೆ ನನ್ನ ಗೆಲುವಿಗೆ ಶ್ರಮಿಸಿದೆ.
ಆದ್ದರಿಂದ ಇದು ನನ್ನ ವೈಯಕ್ತಿಕ ಗೆಲುವಲ್ಲ. ಪಕ್ಷದ ಗೆಲುವು ಎಂದು ಸಂತಸದಿಂದ ನುಡಿದರು.

ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ ಮಾತನಾಡಿ ಚಿತ್ರದುರ್ಗ-ದಾವಣಗೆರೆ ಕ್ಷೇತ್ರಗಳಲ್ಲಿ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ಈ ಬಾರಿಯ ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು, ಮಹಿಳಾ ಮೋರ್ಚಾ ಪದಾಧಿಕಾರಿಗಳು, ವಿವಿಧ ಮಂಡಲಗಳ ಅಧ್ಯಕ್ಷರುಗಳು ಪ್ರತಿ ಮತದಾರನ ಹತ್ತಿರ ಹೋಗಿ ಅಭ್ಯರ್ಥಿ ಕೆ.ಎಸ್.ನವೀನ್ ಪರ ಮತ ಭಿಕ್ಷೆ ಕೇಳಿದ್ದರಿಂದ ಈ ಚುನಾವಣೆಯಲ್ಲಿ ಪಕ್ಷಕ್ಕೆ ಗೆಲುವು ಸಿಕ್ಕಿದೆ. ಗ್ರಾಮ ಪಂಚಾಯಿತಿ ಸದಸ್ಯರುಗಳ ನೋವನ್ನು ಹತ್ತಿರದಿಂದ ಕಂಡು ಅಭಿವೃದ್ದಿ ಬಗ್ಗೆ ತೊಳಲಾಟ, ಚಿಂತನೆಯಿಟ್ಟುಕೊಂಡಿದ್ದ ವ್ಯಕ್ತಿಯನ್ನು ಚುನಾಯಿಸಿರುವುದು ನಿಜಕ್ಕೂ ನಮಗೆಲ್ಲರಿಗೂ ಸಂಭ್ರಮವಾಗಿದೆ ಎಂದರು.

ಎರಡು ಬಾರಿ ಸೋತಿದ್ದರೂ ಮೂರನೆ ಬಾರಿಗೆ ಬಿ.ಫಾರಂ ನೀಡಿ ಪಕ್ಷದ ನಾಯಕರುಗಳು ಕೆ.ಎಸ್.ನವೀನ್‍ರನ್ನು ಚುನಾವಣಾ ಕಣಕ್ಕಿಳಿಸಿ ಗೆಲ್ಲಿಸಿಕೊಂಡಿದ್ದಾರೆ. ಗ್ರಾಮ ಪಂಚಾಯಿತಿ ಸದಸ್ಯರು, ನಗರಸಭೆ, ಪುರುಸಭೆ, ಪಟ್ಟಣ ಪಂಚಾಯಿತಿ, ಮಹಾನಗರ ಪಾಲಿಕೆ ಸದಸ್ಯರುಗಳು ಭರ್ಜರಿ ಮತ ನೀಡಿ ಗೆಲ್ಲಿಸಿಕೊಂಡಿದ್ದಾರೆ. ವಿಧಾನಪರಿಷತ್ ಪ್ರವೇಶಿಸಿರುವ ಕೆ.ಎಸ್.ನವೀನ್ ಸದಾ ನಮ್ಮ ಜೊತೆಗಿದ್ದುಕೊಂಡು ಎರಡು ಜಿಲ್ಲೆಗಳ ಅಭಿವೃದ್ದಿ ಪ್ರಾಮಾಣಿಕವಾಗಿ ಶ್ರಮಿಸಲಿದ್ದಾರೆಂದು ತಿಳಿಸಿದರು.

ದಾವಣಗೆರೆ ಜಿಲ್ಲಾ ಬಿಜೆಪಿ.ಅಧ್ಯಕ್ಷ ವೀರೇಶ್ ಹನಗವಾಡಿ ಮಾತನಾಡಿ ಹೊರಗಿನಿಂದ ಬಂದು ಇಲ್ಲಿ ಸುಲಭವಾಗಿ ಗೆದ್ದುಕೊಂಡು ಹೋಗುತ್ತಿದ್ದವರಿಗೆ ಮತದಾರರು ಈ ಬಾರಿಯ ಚುನಾವಣೆಯಲ್ಲಿ ಸರಿಯಾದ ಪಾಠ ಕಲಿಸಿ ಸ್ಥಳೀಯ ಅಭ್ಯರ್ಥಿ ಕೆ.ಎಸ್.ನವೀನ್‍ರನ್ನು ಗೆಲ್ಲಿಸಿಕೊಂಡಿರುವುದು ನಿಜವಾಗಿಯೂ ಕಾರ್ಯಕರ್ತರಿಗೆ ಸಿಕ್ಕ ಬಹುದೊಡ್ಡ ಗೆಲುವು. ಕಾರ್ಯಕರ್ತರ ಶಕ್ತಿ ಇಡಿ ರಾಜ್ಯಕ್ಕೆ ಗೊತ್ತಾಗಿದೆ. ಸಾಮಾನ್ಯ ಕಾರ್ಯಕರ್ತನಾಗಿ ಎರಡು ಬಾರಿ ವಿಧಾನಪರಿಷತ್ ಚುನಾವಣೆಯಲ್ಲಿ ಸೋತರು ವಿಚಲಿತನಾಗದ ಕೆ.ಎಸ್.ನವೀನ್‍ಗೆ ಮೂರನೆ ಬಾರಿ ಟಿಕೆಟ್ ನೀಡಿ ನಾಯಕರುಗಳು ಹೇಗೆ ಬೆನ್ನಿಗೆ ನಿಂತು ಗೆಲುವಿಗಾಗಿ ಕೆಲಸ ಮಾಡುತ್ತಾರೆನ್ನುವುದಕ್ಕೆ ಇದೊಂದು ಉದಾಹರಣೆ ಎಂದು ಸಂತಸ ವ್ಯಕ್ತಪಡಿಸಿದರು.

ಮಾಜಿ ಜಿಲ್ಲಾಧ್ಯಕ್ಷ ಟಿ.ಜಿ.ನರೇಂದ್ರನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜೈಪಾಲ್, ಸುರೇಶ್ ಸಿದ್ದಾಪುರ, ರಾಜೇಶ್ ಬುರುಡೆಕಟ್ಟೆ, ದಾವಣಗೆರೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್, ನಾಗರಾಜ್, ಉಪಾಧ್ಯಕ್ಷ ಶ್ರೀನಿವಾಸ್, ಜಿ.ಎಸ್.ಅನಿತ್‍ಕುಮಾರ್, ಡಾ.ಸಿದ್ದಾರ್ಥ ಗುಂಡಾರ್ಪಿ, ನಾಗರಾಜ್ ಬೇದ್ರೆ, ದಗ್ಗೆಶಿವಪ್ರಕಾಶ್, ಎಸ್.ಆರ್.ಗಿರೀಶ್, ಸಂಪತ್‍ಕುಮಾರ್, ವೆಂಕಟೇಶ್‍ಯಾದವ್, ಶಿವಣ್ಣಾಚಾರ್, ಹೆಚ್.ಬಿ.ನರೇಂದ್ರ, ಜಗದೀಶ್ ನೆಲ್ಲಿಕಟ್ಟೆ, ಸಿದ್ದೇಶ್‍ಕಾಶಿ, ಸೂರನಹಳ್ಳಿ ಶ್ರೀನಿವಾಸ್, ಡಾ.ಮಂಜುನಾಥ್, ಶೈಲೇಶ್, ಜಗದೀಶ್, ನಂದಿ ನಾಗರಾಜ್, ರೇಖ, ಕವನ, ಭಾರ್ಗವಿ ದ್ರಾವಿಡ್, ಚಂದ್ರಿಕಾಲೋಕನಾಥ್, ಶೈಲಜಾರೆಡ್ಡಿ, ವಿಶ್ವನಾಥ್, ನಗರಸಭೆ ಅಧ್ಯಕ್ಷೆ ತಿಪ್ಪಮ್ಮ, ರೂಪ ಸುರೇಶ್, ಚಿತ್ರಳ್ಳಿ ದೇವರಾಜ್, ಕಿರಣ್‍ಕುಮಾರ್, ಶಂಭು, ಶಂಕರಮೂರ್ತಿ ಸೇರಿದಂತೆ ಸಾವಿರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮೆರವಣಿಗೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!