ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಜೂ. 19 : ದೇಶದಲ್ಲಿ ಯಾವುದೇ ಸಂಘ ಸಂಸ್ಥೆಗಳಾಗಲಿ ನೋಂದಣಿ ಮಾಡಿಸಿಕೊಳ್ಳುವುದು ಅತ್ಯವಶ್ಯಕವಾಗಿದೆ. ಆದರೆ ಆರ್.ಎಸ್.ಎಸ್ ಯಾವುದೇ ನೋಂದಣಿ ಮಾಡಿಸಿಕೊಳ್ಳದೇ ಕಾರ್ಯ ಮಾಡುತ್ತಿದೆ ಇದು ಸರಿಯಲ್ಲ ಎಂದು ಜಿಲ್ಲಾ ಕಾಂಗ್ರೆಸ್ನ ಜಿಲ್ಲಾ ಒಬಿಸಿ ಘಟಕದ ಅಧ್ಯಕ್ಷರಾದ ಎನ್.ಡಿ.ಕುಮಾರ್ ತಿಳಿಸಿದರು.

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಸೇರಿದಂತೆ ನಮ್ಮ ಪಕ್ಷದ ಹಲವಾರು ಮುಖಂಡರು ಆರ್.ಎಸ್.ಎಸ್ ನೊಂದಣಿ ಮಾಡಿಕೊಳ್ಳಬೇಕೆಂದು ಹೇಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಆರ್.ಎಸ್.ಎಸ್ಗೆ ಈಗ ನೊಂದಣಿಗೆ ಅವಕಾಶವನ್ನು ನೀಡಲಾಗಿದೆ. ಈ ಅವಕಾಶವನ್ನು ಆರ್.ಎಸ್.ಎಸ್ ಬಳಸಿಕೊಂಡು ನೋಂದಣಿ ಮಾಡಿಸಿ ಕೊಂಡು ಪ್ರತಿವರ್ಷ ಸರ್ಕಾರಕ್ಕೆ ಲೆಕ್ಕಪತ್ರ ಸೇರಿದಂತೆ ಇತರೆ ಮಾಹಿತಿ ನೀಡಲು ಮುಂದಾಗಬೇಕಿದೆ ಎಂದರು.
ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರ ಜನ್ಮದಿನವನ್ನು ಸಾಮಾಜಿಕ ನ್ಯಾಯ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ.ರಾಹುಲ್ ಗಾಂಧಿಯವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ ಜೋಡೋ ಪಾದಯಾತ್ರೆಯನ್ನು ಮಾಡುವುದರ ಮೂಲಕ ಜನತೆಯ ಸಮಸ್ಯೆಗಳನ್ನು ಸ್ವಯಂ ಆಗಿ ಅರಿತಿದ್ದಾರೆ.ಅವುಗಳ ನಿವಾರಣೆಗಾಗಿ ಪರಿಶ್ರಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಜನ್ಮದಿನ ವನ್ನು ಸಾಮಾಜಿಕ ನ್ಯಾಯ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ.ನಮ್ಮ ದೇಶವಲ್ಲದೇ ಹೊರದೇಶ ದಲ್ಲಿಯೂ ಸಹ ರಾಹುಲ್ ಗಾಂಧಿಯವರ ಜನಪ್ರಿಯತೆ ಹೆಚ್ಚಾಗಿದೆ. 2029ರ ಲೋಕಸಭಾ ಚುನಾವಣೆ ಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು ರಾಹುಲ್ ಗಾಂಧಿಯವರು ಪ್ರಧಾನಮಂತ್ರಿ ಆಗಲಿದ್ದಾರೆ.ಈ ಹಿನ್ನಲೆಯಲ್ಲಿ ಎಲ್ಲಾ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಪದಾಧಿಕಾರಿಗಳು ಶ್ರಮಿಸುತ್ತಿದ್ದಾರೆ. ಎಂದರು.
ದೇಶದಲ್ಲಿ ಯಾವುದೇ ಸಂಘ ಸಂಸ್ಥೆಗಳಾಗಲಿ ನೋಂದಣಿ ಮಾಡಿಸಿಕೊಳ್ಳುವುದು ಅತ್ಯವಶ್ಯಕವಾಗಿದೆ.. ಆದರೆ ಆರ್.ಎಸ್.ಎಸ್ ಯಾವುದೇ ನೋಂದಣಿ ಮಾಡಿಸಿಕೊಳ್ಳದೇ ಕಾರ್ಯ ಮಾಡುತ್ತಿದೆ ಇದು ಸರಿಯಲ್ಲ ಎಂದು ಕುಮಾರ್ ತಿಳಿಸಿದರು.
ಒಬಿಸಿ ಘಟಕದ ರಾಜ್ಯ ಉಪಾಧ್ಯಕ್ಷರಾದ ಶಿವಣ್ಣ ಮಾತನಾಡಿ, ಜೂನ್-21 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಹಾಗೂ ಹಾಲಿ ಮತ್ತು ಮಾಜಿ ಮುಖ್ಯ ಮಂತ್ರಿಗಳಿಗೆ ಅಭಿನಂದನಾ ಕಾರ್ಯಕ್ರಮಕ್ಕೆ ಚಿತ್ರದುರ್ಗ ಜಿಲ್ಲೆಯಿಂದ ಸುಮಾರು 5 ಸಾವಿರ ಜನ ಕಾರ್ಯ ಕರ್ತರು ಭಾಗವಹಿಸಲಿದ್ದಾರೆ.ಇದಕ್ಕೆ ಬೇಕಾದ ಸಾರಿಗೆ ವ್ಯವಸ್ಥೆಯನ್ನು ಕ್ಷೇತ್ರವಾರು ಪಕ್ಷದ ಪ್ರತಿನಿಧಿಗಳು ಮಾಡಲಿದ್ದಾರೆ ಎಂದ ಅವರು ರಾಹುಲ್ ಗಾಂಧಿಯವರು ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ 3000 ಕೀ.ಮೀ.ಪಾದಯಾತ್ರೆಯನ್ನು ಮಾಡುವುದರ ಮೂಲಕ ಸಾಮಾಜಕವಾಗಿ ಜನತೆಯ ಜೊತೆಯಲ್ಲಿ ಬೆರತಿದ್ದಾರೆ, ಇದು ಸ್ವಾತಂತ್ರ್ಯ ಪೂರ್ವಹ ಹೋರಾಟವನ್ನು ನೆನಪಿಸುತ್ತದೆ, ಆಗ ದೇಶ ಸ್ವಾತಂತ್ರ್ಯಕ್ಕಾಗಿ ಹೋರಾಟವನ್ನು ಮಾಡಿದರೆ ರಾಹುಲ್ ಗಾಂಧಿಯವರು ಬಾರತ್ ಜೋಡೋ ಎಂದು ಪಾದಯಾತ್ರೆಯನ್ನು ನಡೆಸಿದರು ಎಂದರು.
ನಿನ್ನೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಯಾವ ಪಕ್ಷ ಗಟ್ಟಿಯಾಗಿದೆ ಯಾವ ಪಕ್ಷ ಟೊಳ್ಳಾಗಿದೆ ಎಂಬುದು ಗೊತ್ತಾಗಿದೆ, ಪಕ್ಷದಲ್ಲಿರುವವರೇ ತಮ್ಮ ಅಭ್ಯರ್ಥಿಗಳಿಗೆ ಮೋಸವನ್ನು ಮಾಡಿದ್ದಾರೆ. ತಮ್ಮ ಮತವನ್ನು ಬೇರೆಯವರಿಗೆ ಹಾಕಿದ್ದಾರೆ, ಆದರೆ ಈ ರೀತಿಯಾಗಿ ನಮ್ಮ ಪಕ್ಷದಲ್ಲಿ ಆಗಿಲ್ಲ ಎಲ್ಲರು ಸಹಾ ನಿಷ್ಠೆಯಿಂದ ಮತದಾನವನ್ನು ಮಾಡಿದ್ದಾರೆ, ಚಿತ್ರದುರ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಗಟ್ಟಿಯಾಗಿದೆ, ಮುಂದಿನ ದಿನದಲ್ಲಿ ಜಿಲ್ಲೆಯ ಆತರು ಕ್ಷೇತ್ರಗಳಲ್ಲಿ ಆರನ್ನು ಸಹಾ ಗೆಲ್ಲಲಿದೆ, ಇದ್ದಲ್ಲದೆ2029ರ ಲೋಕಸಬಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಮತ್ತೋರ್ವ ಉಪಾಧ್ಯಕ್ಷರಾದ ಕೃಷ್ಣಮೂರ್ತಿ ಮಾತನಾಡಿ, ಜೂ.21ರಂದು ನಡೆಯಲಿರುವ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಹಾಗೂ ಮಾಜಿ ಮತ್ತು ಹಾಲಿ ಮುಖ್ಯಮಂತ್ರಿಗಳ ಸನ್ಮಾನ ಕಾರ್ಯಕ್ರಮಕ್ಕೆ ಚಿತ್ರದುರ್ಗದಿಂದ ಅಧಿಕ ಸಂಖ್ಯೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಬೇಕಿದೆ, ಕೇಂದ್ರ ಸರ್ಕಾರ ನಡೆಸುತ್ತಿರುವ ಎಸ್.ಐ.ಆರ್,ನಲ್ಲಿ ಸಕ್ರಿಯವಾಗಿ ಭಾಗವಹಿಸುವುದರ ಮೂಲಕ ಎಲ್ಲರು ಸಹಾ ಮತದಾನದ ಹಕ್ಕನ್ನು ಉಳಿಸಿಕೊಳ್ಳಿ ಎಂದು ಕರೆ ನೀಡಿದರು. ಗೋಷ್ಟಿಯಲ್ಲಿ ಟಿ. ಸ್ವಾಮಿ, ಸಂದೀಪ ಭಾಗವಹಿಸಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















