Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವರದಿ ನೋಡದೆ ಅವೈಜ್ಞಾನಿಕ ಎನ್ನುವುದು ಸರಿಯಲ್ಲ : ಜಾತಿಗಣತಿ ವರದಿ ಬಗ್ಗೆ ಕಾಂತರಾಜು ಸ್ಪಷ್ಟನೆ

---Advertisement---

ಬೆಂಗಳೂರು: ಜಾತಿಗಣತಿ ವಿಚಾರದಲ್ಲಿ ಪರ – ವಿರೋಧಗಳು ಕೇಳಿ ಬರುತ್ತಲೆ ಇದೆ. ಅದರಲ್ಲೂ ಬಿಜೆಪಿ ನಾಯಕರು ಈ ಜಾತಿಗಣತಿ ಬಗ್ಗೆ ಸಾಕಷ್ಟು‌ ಗರಂ ಆಗಿದ್ದಾರೆ. ಅದರಲ್ಲಿ ಬೇಕಾದವರ ಸಹಿಯೇ ಇಲ್ಲ‌. ಅದೊಂದು ಫೇಕ್ ಎಂದಿದ್ದಾರೆ. ಜಾತಿಗಣತಿ ವರದಿ ನೀಡಿದ ಆದರೆ ಇದೀಗ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ.

‘ನಾನು ಕೊಟ್ಟ ಜಾತಿ ಗಣತಿ ವರದಿ ನೈಜವಾಗಿದೆ. ವೈಜ್ಞಾನಿಕವಾಗಿಯೆ ಇದೆ. ವರದಿ ನೋಡದೆ, ಸುಮ್ಮನೆ ಅವೈಜ್ಞಾನಿಕವಾಗಿದೆ ಎನ್ನುವುದು ಸರಿಯಲ್ಲ. 40 ದಿನ ಮನೆ ಮನೆಗೆ ಹೋಗಿ ಸಮೀಕ್ಷೆ ಮಾಡಲಾಗಿದೆ. ಜಾತಿ, ಲಿಂಗ, ಧರ್ಮ, ಆಸ್ತಿ – ಪಾಸ್ತಿ ಎಲ್ಲಾ ಸೇರಿ 55 ಪ್ರಶ್ನೆ ಕೇಳಿದ್ದೇವೆ. ಕುಲಂಕುಷವಾಗಿ ಅಂಕಿ – ಅಂಶಗಳ ಸಮೇತ ವರದಿ ಸಿದ್ಧ ಮಾಡಲಾಗಿದೆ. ರಾಜ್ಯ ಸರದಕಾರ ಈ ವರದಿಯನ್ನು ನೋಡಿದ ಬಳಿಕ ತೀರ್ಮಾನ ಮಾಡಲಿ. ಎರಡು ಸಮುದಾಯಗಳು ವಿರೋಧ ಮಾಡಬಹುದು. ಆದರೆ ವರದಿಯನ್ನು ಮೊದಲು ನೋಡಲಿ. ಆ ಬಳಿಕ ಅದು ಸರಿಯಿಲ್ಲ ಎಂದಾದರೇ ವಿರೋಧ ಮಾಡಲಿ.

ಜಾತಿಗಣತಿ ವರದಿಗೆ ಕಾರ್ಯದರ್ಶಿ ಸಹಿ ಇಲ್ಲ ಎನ್ನುವುದು ಸರಿಯಲ್ಲ. ವರದಿಯ ಒಂದು ವಾಲ್ಯೂಮ್ ಗೆ ಸಹಿ ಹಾಕಿಲ್ಲ ಅಷ್ಟೇ. ಮೂಲ ಪ್ರತಿ ಕಾಣೆಯಾಗಿರುವುದು ನಂಗೆ ಗೊತ್ತಿಲ್ಲ. 2019ರಲ್ಲಿ ನಾನು ವರದಿ ಕೊಟ್ಟಿದ್ದು, ನಾನು ಇದ್ದಾಗ ಮೂಲಪ್ರತಿ ಇತ್ತು‌. ಇದು ಜಾತಿ ಗಣತಿ ಅಲ್ಲ. ಸಾಮಾಜಿಕ ಹಾಗೂ ಶೈಕ್ಷಣಿಕ ವರದಿ. ಕುಮಾರಸ್ವಾಮಿ ಅವರಿಗೆ ಸಮಯ ಕೆಳಿದ್ವಿ. ಆದರೆ ಅವರು ಸಮಯ ಕೊಡಲಿಲ್ಲ ಎಂದು ವರದಿ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment