ಮಹಿಳೆಯರು ಒಂದಲ್ಲ ಒಂದು ರೀತಿಯ ದೌರ್ಜನ್ಯಕ್ಕೆ ಒಳಗಾಗುತ್ತಿರುವುದು ನೋವಿನ ಸಂಗತಿ : ಸೌಮ್ಯ ಪುತ್ರನ್

2 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.15 : ಇತ್ತೀಚಿನ ದಿನಗಳಲ್ಲಿ ಸ್ತ್ರೀಯರೆ ಹೆಚ್ಚು ಮನೋರೋಗಕ್ಕೆ ತುತ್ತಾಗುತ್ತಿರುವುದಕ್ಕೆ ಅವರ ಮೇಲೆ ನಡೆಯುತ್ತಿರುವ ಶೋಷಣೆ ಕಾರಣ ಎಂದು ಬರಹಗಾರ್ತಿ ಸೌಮ್ಯ ಪುತ್ರನ್ ವಿಷಾಧಿಸಿದರು.

ನಗರದ ಎಸ್.ಜೆ.ಎಂ. ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಶಿಮುಶ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಮನುಸ್ಮøತಿಯಲ್ಲಿ ಸ್ತೀಯರ ಹಿರಿಮೆ ಬಗ್ಗೆ ಉಲ್ಲೇಖಿಸಲಾಗಿದೆ. ಇಂದಿನ ಕಾಲಘಟ್ಟದಲ್ಲಿ ಹೆಣ್ಣು ಅನೇಕ ಸವಾಲುಗಳನ್ನು ಎದುರಿಸಬೇಕಾಗಿದೆ. ವೇಶ್ಯಾವಾಟಿಕೆ, ಅಪಹರಣ, ಆಸಿಡ್ ದಾಳಿ, ಅತ್ಯಾಚಾರ ಹೀಗೆ ಹತ್ತು ಹಲವಾರು ಸಾಮಾಜಿಕ ಪಿಡುಗುಗಳಿಗೆ ಹೆಣ್ಣು ಬಲಿಯಾಗುತ್ತಿದ್ದಾಳೆ. ನಗರದಲ್ಲಿನ ವಿದ್ಯಾವಂತ ಮಹಿಳೆಯಾಗಲಿ ಅಥವಾ ಗ್ರಾಮೀಣ ಭಾಗದಲ್ಲಿರುವ ಮಹಿಳೆಯರಾಗಲಿ ಒಂದಲ್ಲ ಒಂದು ರೀತಿಯ ದೌರ್ಜನ್ಯಕ್ಕೆ ಒಳಗಾಗುತ್ತಿರುವುದು ನೋವಿನ ಸಂಗತಿ. ಮಹಿಳೆಯರ ಸಬಲೀಕರಣ ಕೇವಲ ಭಾಷಣಗಳಿಂದ ಆಗುವುದಿಲ್ಲ ಎಂದು ಹೇಳಿದರು.

ವಿಮರ್ಶಕಿ ತಾರಿಣಿ ಶುಭದಾಯಿನಿ ಮಾತನಾಡಿ ರಾಜಕೀಯವಾಗಿ ಹೆಣ್ಣು ಮಕ್ಕಳಿಗೆ ವಿಶೇಷವಾದ ಸೌಲಭ್ಯಗಳನ್ನು ನೀಡುವ ಮೂಲಕ ಮಹಿಳೆಯನ್ನು ಓಟ್ ಬ್ಯಾಂಕನ್ನಾಗಿ ಮಾಡಿಕೊಳ್ಳುತ್ತಿರುವುದು ನಿಜವಾಗಿಯೂ ಮಹಿಳಾ ಸಬಲೀಕರಣಕ್ಕೆ ಪೂರಕವಾಗಿದೆಯೇ ಎನ್ನುವುದು ಯಕ್ಷ ಪ್ರಶ್ನೆಯಾಗಿರುವುದರಿಂದ ಮಹಿಳೆಯರು ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ ಎಂದು ತಿಳಿಸಿದರು.

ಮಹಿಳಾ ದಿನಾಚರಣೆಯ ಅಧ್ಯಕ್ಷತೆ ವಹಿಸಿದ್ದ ಎಸ್.ಜೆ.ಎಂ. ದಂತ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಚಾರ್ಯರಾದ ಡಾ.ಆರ್.ಗೌರಮ್ಮ ಮಾತನಾಡಿ ಲಿಂಗ ತಾರತಮ್ಯ, ಸಬಲೀಕರಣ, ಸಮಾನತೆ ಬಗ್ಗೆ ಎಲ್ಲರೂ ಮಾತನಾಡುತ್ತಾರೆ. ಆದರೆ ಮಹಿಳೆಗೆ ಮಹಿಳೆಯೆ ನಿಜವಾದ ಶತ್ರು, ರಾಣಿ ಅಬ್ಬಕ್ಕ, ಕಿತ್ತೂರು ರಾಣಿ ಚೆನ್ನಮ್ಮ, ಕೆಚ್ಚೆದೆಯ ವೀರವನಿತೆ ಒನಕೆ ಓಬವ್ವ ಇವರುಗಳೆಲ್ಲಾ ದೇಶ ರಕ್ಷಣೆಯಲ್ಲಿ ತೊಡಗಿದವರು. ಆಟೋ ಡ್ರೈವರ್‍ನಿಂದ ಹಿಡಿದು ಪೈಲೆಟ್‍ವರಗೆ ಮಹಿಳೆಯರಿದ್ದಾರೆ. ಎಲ್ಲಾ ರಂಗಗಳಲ್ಲಿಯೂ ಹೆಣ್ಣಿನ ಸಾಧನೆಯಿದೆ. ಜಾತಿ ನಿಂದನೆ ಕೇಸಿಗೆ ಕೆಲವು ಮಹಿಳೆಯರೆ ಪ್ರಚೋಧಿಸುತ್ತಿರುವ ಪ್ರಕರಣಗಳು ಸಾಕಷ್ಟಿವೆ. ಕೆಲವೊಮ್ಮೆ ಮಹಿಳೆ ಮೇಲೆ ಭ್ರಷ್ಟಾಚಾರದ ಆರೋಪವೂ ಕೇಳಿ ಬರುತ್ತದೆ. ಎಲ್ಲವನ್ನು ಸಹಿಸಿಕೊಳ್ಳುವ ಶಕ್ತಿ ಮಹಿಳೆಗಿದೆ ಎಂದು ಗುಣಗಾನ ಮಾಡಿದರು.

ಡಾ.ಸುನೀಲ್ ವಡವಡಗಿ, ಡಾ.ಗಜಲ ಯಾಸ್ಮಿನ್, ಡಾ.ಪ್ರಣೀತ, ದಯಾ ಪುತ್ತೂರ್ಕರ್ ವೇದಿಕೆಯಲ್ಲಿದ್ದರು.
ಇದೆ ಸಂದರ್ಭದಲ್ಲಿ ಬರಹಗಾರ್ತಿ ಸೌಮ್ಯ ಪುತ್ರನ್‍ರವರ ವಿಷ ವರ್ತುಲ ಕೃತಿ ಬಿಡುಗಡೆಗೊಳಿಸಲಾಯಿತು.

Share This Article
Leave a Comment

Leave a Reply

Your email address will not be published. Required fields are marked *