Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಂಥ ಪರಿಸ್ಥಿತಿಯಲ್ಲಿ ಅವರನ್ನು ನೋಡಿದ್ದು ನೋವು ತಂದಿದೆ : ಬಿಎಸ್ ಯಡಿಯೂರಪ್ಪ

---Advertisement---

 

ಬೆಂಗಳೂರು: ನಟ, ರಾಜಕಾರಣಿ ಹಾಗೂ ಮಾಜಿ ಐಎಎಸ್ ಅಧಿಕಾರಿ ಕೆ ಶಿವರಾಮ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ವಿಚಾರಿಸಲು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರ ಸ್ಥಿತಿ ಕಂಡು ಬಿಎಸ್ವೈ ಬೇಸರ ವ್ಯಕ್ತಪಡಿಸಿದ್ದಾರೆ.

ಶಿವರಾಮ್ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿ, ಶಿವರಾಮ್ ಅವರಿಗೆ 70 ವರ್ಷ ವಯಸ್ಸಾಗಿದೆ. ಅವರು ನಮ್ಮ ಪಕಗಷದ ಹಿರಿಯ ಮುಖಂಡರು. ಈಗ ಅವರನ್ನು ನೋಡಿಕೊಂಡು ಬಂದೆ. ಆದರೆ ಇಂಥ ಪರಿಸ್ಥಿತಿಯಲ್ಲಿ ಅವರನ್ನು ನೋಡಿದ್ದು ನೋವು ತಂದಿದೆ. ಈಗ ಮಾತನಾಡುವ ಸ್ಥಿತಿಯಲ್ಲಿ ಅವರಿಲ್ಲ. ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ಇನ್ನು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕೆ ಶಿವರಾಮ್ ಅವರನ್ನು ಕಳೆದ 20 ದಿನಗಳ ಹಿಂದೆಯೇ ಆಸ್ಪತ್ರೆಗೆ ದಾಖಲಾಗಿದೆ. ಹೆಚ್ ಸಿ ಜಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಸ್ಥಿತಿ ತುಂಬಾ ಚಿಂತಾಜನಕವಾಗಿದೆ. ಬಹು ಅಂಗಾಂಗ ವೈಫಲ್ಯ ಹಾಗೂ ಹಾರ್ಟ್ ಅಟ್ಯಾಕ್ ಆಗಿದೆ ಎಂದಿದ್ದಾರೆ. ಡಾ.ಶೇಖರ್ ಪಾಟೀಲ್ ಅವರ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment