ಬೆಂಗಳೂರು : ಮಣಿಪಾಲ್ ಸಮೂಹ ಸಂಸ್ಥೆಗಳು ಸೇರಿದಂತೆ ದೇಶದಾದ್ಯಂತ ಸುಮಾರು 22 ಕಡೆಗಳಲ್ಲಿ ಐಟಿ ಅಧಿಕಾರಿಗಳು ಇಂದು (ಬುಧವಾರ) ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಐಟಿ ದಾಳಿ ನಡೆಸಿದ ನಂತರ ಉಡುಪಿ ಜಿಲ್ಲೆ ಮಣಿಪಾಲದಲ್ಲೂ ಸಹಾ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಅಧಿಕಾರಿಗಳು ಪೂರ್ವ ಸಿದ್ದತೆ ಮಾಡಿಕೊಂಡು ಬೆಂಗಳೂರು ಮತ್ತು ಮಂಗಳೂರು ನಿಂದ ಬಂದು ಮಣಿಪಾಲ ಗ್ರೂಪ್ ನ ಫೈನಾನ್ಸ್ ವಿಭಾಗದಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.