Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸಮ್ಮಿಶ್ರ ಸರ್ಕಾರ ಬೀಳಿಸಿದ್ದು ಸಿದ್ದರಾಮಯ್ಯ ಅಲ್ಲ ಡಿಕೆಶಿ : ರಮೇಶ್ ಜಾರಕಿಹೊಳಿ ಬಾಂಬ್

---Advertisement---

 

ಬೆಳಗಾವಿ: ಮೊದಲೇ ರಾಜ್ಯ ರಾಜಕಾರಣದಲ್ಲಿ ಖುರ್ಚಿಯ ಕದನ ಜೋರಾಗಿದೆ. ಸಿಎಂ ಆಗಲೇಬೇಕೆಂದು ಡಿಕೆ ಶಿವಕುಮಾರ್ ಪಣ ತೊಟ್ಟಿದ್ದಾರೆ. ಆ ಕಾರಣಕ್ಕಾಗಿಯೇ ಹಲವು ಸಾಹಸಗಳನ್ನು ಮಾಡ್ತಾ ಇದ್ದಾರೆ. ಅಧಿಕಾರದ ಬೆಳವಣಿಗೆಯ ನಡುವೆಯೇ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಒಂದನ್ನ ಹಾಕಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ ಅವರು, ಅವತ್ತಿನ ಕುಮಾರಸ್ವಾಮಿ ಸಮ್ಮಿಶ್ರ ಬೀಳುವುದಕ್ಕೆ ಮೂಲ ಕಾರಣ ಡಿಕೆ ಶಿವಕುಮಾರ್. ಪ್ರತಿಯೊಬ್ಬ ಸಣ್ಣ ಹುಡುಗರಿಗೂ ಗೊತ್ತಿದೆ. ಇದ್ರಲ್ಲಿ ಪಾಪ ಸಿದ್ದರಾಮಯ್ಯ ಅವರಲ್ಲ. ಯಾಕಂದ್ರೆ ಆ ಸರ್ಕಾರ ತೆಗೆದಾಗ ಬಹಳ ಮುಖ್ಯ ವ್ಯಕ್ತಿ ನಾನೇ ಇದ್ದೆ. ಮಿತ್ರಮಂಡಳಿ ಇತ್ತು. ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಅದಕ್ಕೂ ಸಂಬಂಧವಿಲ್ಲ. ದೇವೇಗೌಡ ಅವರು ಯಾವ ರೀತಿ ಹೇಳ್ತಾ ಇದ್ದಾರೆ ಎಂಬುದು ಗೊತ್ತಿಲ್ಲ. ಡಿಕೆ ಅವರಿಂದ ಸರ್ಕಾರ ಬಿತ್ತು ಎಂದಿದ್ದಾರೆ.

ಹಾಗಾದ್ರೆ ಈಗಲೂ ಡಿಕೆ ಶಿವಕುಮಾರ್ ಅವರಿಂದ ಕಾಂಗ್ರೆಸ್ ಪಥನವಾಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಜಾರಕಿಹೊಳಿ ಅವರು, ಅದರ ಬಗ್ಗೆ ನನಗೆ ಗೊತ್ತಿಲ್ಲ. ನಾನು ಬಿಜೆಪಿ ಪಕ್ಷದ ನಾಯಕ. ಅದಕ್ಕೆ ಬದ್ಧವಾಗಿದ್ದೇನೆ. ಆದರೆ ನಾವೂ ಕಾಯೋಣಾ. ಅವರು ಬಡಿದಾಡಲಿ ಏನಾದರೂ ಮಾಡಿಕೊಳ್ಳಲಿ ಅದಕ್ಕೆ ಹೋಗಬಾರದು. ಚುನಾವಣೆಗೆ ಹೋಗುವುದು ಒಳ್ಳೆಯದು ಎಂದಿದ್ದಾರೆ. ಸಮ್ಮಿಶ್ರ ಸರ್ಕಾರವಿದ್ದಾಗ ಬಾಂಬೆ ಬಾಯ್ಸ್ ಅಂತಾನೇ ರಮೇಶ್ ಜಾರಕಿಹೊಳಿ ಸೇರಿದಂತೆ ಹಲವರು ಫೇಮಸ್ ಆಗಿದ್ದರು. ಅಂದು ಬಿದ್ದ ಸಮ್ಮಿಶ್ರ ಸರ್ಕಾರಕ್ಕೆ ಹಲವು ಊಹಾಪೋಹಗಳು ಹರಿದಾಡಿದ್ದವು. ಈಗ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗುವ ಹಂಬಲದಲ್ಲಿದ್ದರೆ ಅಂದಿನ ಸರ್ಕಾರ ಬೀಳೋದಕ್ಕೆ ಅವರೇ ಕಾರಣ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...