ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಪಿಎಂ ಮೋದಿ ಅವರ ಮುಂದೆ ನಾಯಿಮರಿ ಥರ. ಅವರನ್ನು ಕಂಡರೆ ಗಢ..ಗಢ ನಡುಗುತ್ತಾರೆ ಎಂದಿದ್ದರು. ಈ ಹೇಳಿಕೆಯ ಬೆನ್ನಲ್ಲೇ ಬಿಜೆಪಿ ನಾಯಕರು ಆಕ್ರೋಶ ಹೊರ ಹಾಕಿದರು. ಸಿದ್ದರಾಮಯ್ಯ ಅವರು ಕ್ಷಮೆ ಕೇಳಲೇಬೇಕು ಎಂದು ಒತ್ತಾಯಿಸಿದ್ದರು. ಆದರೆ ಸಿದ್ದರಾಮಯ್ಯ ಆ ವಿಚಾರಕ್ಕೆ ಸ್ಪಷ್ಟನೆ ನೀಡಿದ್ದಾರೆ.
ನಾನು ಸದುದ್ದೇಶದಿಂದಾನೇ ಹೇಳಿದ್ದು. ರಾಜ್ಯದ ಹಿತದೃಷ್ಟಿಯಿಂದ ಅವರು ಧೈರ್ಯ ತೋರಿಸಬೇಕೆಂದು ಹೇಳಿದ್ದೇನೆ. ಕೇಂದ್ರ ಸರ್ಕಾರದಿಂದ ಅನುದಾನ ಸರಿಯಾಗಿ ಬಂದಿಲ್ಲ. ಅನುದಾನ ಎಲ್ಲಾ ಕಡಿಮೆಯಾಗಿದೆ. ಆ ಅರ್ಥದಲ್ಲಿ ಹೇಳಿದ್ದೇನೆ ಹೊರತು ಬೇರೆ ಯಾವ ಅರ್ಥದಲ್ಲೂ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಿದ್ದರಾಮಯ್ಯ ಅವರ ನಾಯಿಮರಿ ಹೇಳಿಕೆಗೆ ಸಚಿವ ಬಿಸಿ ಪಾಟೀಲ್, ನಳಿನ್ ಕುಮಾರ್ ಕಟೀಲು ಸೇರಿದಂತೆ ಬಿಜೆಪಿ ನಾಯಕರು ಕೆಂಡಮಂಡಲರಾಗಿದ್ದರು. ಕ್ಷಮೆ ಕೇಳುವಂತೆ ಒತ್ತಾಯ ಕೂಡ ಮಾಡಿದ್ದರು.