ಚಿತ್ರದುರ್ಗ. ಡಿ.20: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ನೇತೃತ್ವದಲ್ಲಿ ಡಿಸೆಂಬರ್ 22 ರಂದು ಚಳ್ಳಕೆರೆಯಲ್ಲಿ ಏರ್ಪಡಿಸಲು ಉದ್ದೇಶಿಸಲಾಗಿದ್ದ ಜಿಲ್ಲಾ ಮಟ್ಟದ ಜನತಾದರ್ಶನವನ್ನು ಡಿ. 27 ಕ್ಕೆ ಮುಂದೂಡಲಾಗಿದ್ದು, ಅಂದು ಬೆಳಿಗ್ಗೆ 10.30 ಗಂಟೆಗೆ ಚಳ್ಳಕೆರೆಯ ಶ್ರೀ ಗುರು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಸಾರ್ವಜನಿಕರ ಕುಂದು ಕೊರತೆಗಳನ್ನು ಸ್ಥಳೀಯ ಮಟ್ಟದಲ್ಲಿ ನಿವಾರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಸೂಚನೆಯಂತೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ಜಿಲ್ಲಾಮಟ್ಟದ ಜನತಾ ದರ್ಶನ ಏರ್ಪಡಿಸಲಾಗುತ್ತಿದ್ದು, ಈ ಬಾರಿಯ ಜಿಲ್ಲಾ ಮಟ್ಟದ ಜನತಾ ದರ್ಶನ ಇದೇ ಡಿಸೆಂಬರ್ 27 ರಂದು ಬೆಳಿಗ್ಗೆ 10.30 ಕ್ಕೆ ಚಳ್ಳಕೆರೆ ಪಟ್ಟಣದ ಶ್ರೀ ಗುರು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ.
ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು, ಜನಪ್ರತಿನಿಧಿಗಳು ಜನತಾ ದರ್ಶನದಲ್ಲಿ ಉಪಸ್ಥಿತರಿರುವರು. ಸಾರ್ವಜನಿಕರಿಂದ ಅರ್ಜಿಗಳನ್ನು ಪಡೆದು ಸ್ವೀಕೃತಿ ನೀಡುವ ಸಲುವಾಗಿ ಸಮರ್ಪಕ ರೀತಿಯಲ್ಲಿ ಕೌಂಟರ್ಗಳ ವ್ಯವಸ್ಥೆ ಮಾಡಲಾಗುವುದು. ಸಾರ್ವಜನಿಕರು ತಮ್ಮ ಕುಂದುಕೊರತೆ ಕುರಿತ ಅಹವಾಲು, ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…