Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತ್ರಿಭಾಷ ಶಿಕ್ಷಣ ನೀತಿಯನ್ನು, ರಾಜ್ಯದಲ್ಲೂ ಅಳವಡಿಸಿದರೆ ವಿದ್ಯಾರ್ಥಿಗಳಿಗೆ ಅನುಕೂಲ : ಗೋವಿಂದ ಎಂ ಕಾರಜೋಳ

---Advertisement---

 

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 30 : ರಾಷ್ಟ್ರಮಟ್ಟದಲ್ಲಿ ಅಳವಡಿಸಿರುವ NEP ತ್ರಿಭಾಷ ಶಿಕ್ಷಣ ನೀತಿಯನ್ನು, ರಾಜ್ಯದಲ್ಲೂ ಅಳವಡಿಸಿದರೆ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗುವುದರ ಜೊತೆಗೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ರಾಜ್ಯದ ಮಕ್ಕಳು ರಾಷ್ಟ್ರಮಟ್ಟದಲ್ಲಿ ಪೈಪೋಟಿ ನಡೆಸಲು ಅನುಕೂಲವಾಗುತ್ತದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಗೋವಿಂದ ಎಂ ಕಾರಜೋಳ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಎಸ್‌ ಆರ್‌ ಎಸ್‌ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ “ಎಸ್‌ ಆರ್‌ ಎಸ್‌ ಯುವತರಂಗ-2025” ರ “ಸಾಂಸ್ಕೃತಿಕ ಮಹಾ ಸಮ್ಮೇಳನದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಈ ಅದ್ದೂರಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ನವೆಂಬರ್‌ 27, 28, 29ರಂದು ಈ ಮೂರು ದಿನಗಳ ಕಾಲ ಅದ್ದೂರಿಯಾಗಿ, ವಿಜೃಂಭಣೆಯಿಂದ ನಡೆಯಿತು. ನಾಲ್ಕನೆಯ ಹಾಗೂ ಕೊನೆಯ ದಿನದ ಕಾರ್ಯವನ್ನು ಪಿಯು ವಿಭಾಗದಿಂದ ಆಯೋಜಿಸಲಾಗಿತ್ತು.

ಇದೇ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮತ್ತೋರ್ವ ಮುಖ್ಯ ಅತಿಥಿ ಬಿಜೆಪಿ ಯುವ ಮುಖಂಡರಾದ ಅನಿತ್‌ ಕುಮಾರ್‌ ಜಿ ಎಸ್‌, ಇವರು ಮಾತನಾಡಿ ಕಾರ್ಯಕ್ರಮದಲ್ಲಿ ಪುರಾಣ ಮಹಾಕಾವ್ಯವಾದ ರಾಮಾಯಣವನ್ನು ವಿದ್ಯಾರ್ಥಿಗಳಿಂದ ಪ್ರಸ್ತುತ ಪಡಿಸಿ ಇಂದಿನ ಯುವ ಪಿಳಿಗೆ ಮರೆತಿರುವ ನಮ್ಮ ಸಂಸ್ಕೃತಿಯನ್ನು ಪರಿಚಯಿಸುವ ಕಾರ್ಯವನ್ನು ಸಂಸ್ಥೆಯ ಅಧ್ಯಕ್ಷರಾದ ಬಿ. ಎ. ಲಿಂಗಾರೆಡ್ಡಿಯವರ ಮಾಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಹೇಳಿದರು.

ಕಾರ್ಯಕ್ರದಲ್ಲಿ ಭಾಗವಹಿಸಿದ ಖ್ಯಾತ ಹೃದಯರೋಗ ಹಾಗೂ ಶ್ವಾಸಕೋಶ ತಜ್ಞರಾದ ಡಾ. ಸುಜಯ್‌ ಜೆ, ಇವರು, ಪ್ರತಿಯೊಬ್ಬ ವಿದ್ಯಾರ್ಥಿಯು ಯಾವುದೇ ಕ್ಷೇತ್ರದಲ್ಲಿ ಯಶಸ್ಸನ್ನು ಪಡೆಯಲು ಆತ್ಮವಿಶ್ವಾಸ, ಸವಾಲು, ಗುರಿ ಈ ಮೂರು ತತ್ವಗಳನ್ನು ಅಳವಡಿಸಿಕೊಂಡರೆ ಗೆಲುವು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ಬಿ. ಎ. ಲಿಂಗಾರೆಡ್ಡಿ ರವರು, ಮರೆತುಹೋಗಿರುವ ಗತವೈಭವವನ್ನು ನಾವು ಸ್ಮರಿಸಬೇಕು, ಹಿಂದಿನ ಮೌಲ್ಯಗಳನ್ನು ಇಂದಿನ ಮಕ್ಕಳಿಗೆ ವಿದ್ಯಾಭ್ಯಾಸದ ಜೊತೆಗೆ ಪರಿಚಯಿಸುವ ಕಾರ್ಯವನ್ನು ಮಾಡುತ್ತ ಬಂದಿದ್ದೇವೆ.  ಮುಂದಿನ ದಿನಗಳಲ್ಲಿ ಈ ಕಾರ್ಯವನ್ನು ಮುಂದುವರಿಸುತ್ತೇವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಮತಿ ಸುಜಾತ ಲಿಂಗಾರೆಡ್ಡಿ, ಉಪಾಧ್ಯಕ್ಷರಾದ ಬಿ ಎಲ್‌ ಅಮೋಘ್‌, ಆಡಳಿತಾಧಿಕಾರಿಗಳಾದ ಡಾ. ರವಿ ಟಿ ಎಸ್‌, ಎಲ್ಲಾ ವಿಭಾಗಗಳ ಪ್ರಾಂಶುಪಾಲರುಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...