ಬೆಂಗಳೂರು: ಹಿಂಗಾರು ಮಳೆಯ ಅಬ್ಬರ ರಾಜ್ಯಾದ್ಯಂತ ಜೋರಾಗಿದೆ. ಕಳೆದ ಮೂರು ದಿನದಿಂದ ಅಲ್ಲಲ್ಲಿ ಕೊಂಚ ಮಳೆಯಾಗಿದ್ದು, ನಿನ್ನೆ ಸಂಜೆ ವೇಳೆಗೆ ಜೋರು ಮಳೆಯಾಗಿದೆ. ನಿನ್ನೆ ಬೆಳಗ್ಗೆಯಿಂದಾನು ಮೋಡ ಕವಿದ ವಾತಾವರಣವಿತ್ತು. ಜೊತೆಹೆ ಜಿಟಿ ಜಿಟಿ ಮಳೆಯಾಗುತ್ತಿತ್ತು. ಇಂದು ಕೂಡ ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣವಿದ್ದು, ಇನ್ನು ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಕರ್ನಾಟಕದಲ್ಲೂ ಇನ್ನು ಮೂರು ದಿನ ಮಳೆ ಸುರಿಯಲಿದೆ. ಉತ್ತರ ಭಾಗಗಳಾದ ಚಾಮರಾಜನಗರ, ಮೈಸೂರು, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದಿ, ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗಲಿದೆ.
ಇನ್ನು ಎರಡು ಮೂರು ದಿನ ಇದೇ ರೀತಿ ಮಳೆ ಮುಂದುವರೆಯಲಿದೆ. ಮೊದಲೇ ಚಳಿಗಾಲ ಆರಂಭವಾಗಿದೆ. ಅದರ ಜೊತೆಗೆ ಮಳೆಯಿಂದಾಗಿ ಮತ್ತಷ್ಟು ಚಳಿ ಹೆಚ್ಚಾಗಿದೆ.