ಬೆಂಗಳೂರು: ಬಿರು ಬೇಸಿಗೆಗೆ ತಂಪೆರೆಯಲು ವರುಣ ರಾಜ್ಯಕ್ಕೆ ಅದಾಗಲೇ ಎಂಟ್ರಿ ಕೊಟ್ಟಾಗಿದೆ. ಇವತ್ತು ಮತ್ತು ನಾಳೆ ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಸುರಿಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಲಿಕಲ್ಲು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ವಿಜಯಪುರ, ಯಾದಗಿರಿ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಆಲಿಕಲ್ಲು ಸಮೇತ ಮಳೆಯಾಗಲಿದೆ. ಜೊತೆಗೆ ವಿಜಯಪುರ, ಬಾಗಲಕೋಟೆ, ಬೀದರ್, ಗದಗ, ಕೊಪ್ಪಳ, ರಾಯಚೂರು, ಹಾವೇರಿಯಲ್ಲಿ ಭಾರೀ ಮಳೆಯಾಗುವ ಸೂಚನೆ ನೀಡಿದೆ.
ಇನ್ನು ಏಪ್ರಿಲ್ 12ರಿಂದ 20ರ ತನಕ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗಲಿದೆ. ಉಡುಪಿ ಜಿಲ್ಲರ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ವಾರ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ ಮಧ್ಯಭಾಗದಲ್ಲಿ ತಕ್ಕಮಟ್ಟಿನ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.