Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

78 ವರ್ಷವಾಗ್ತಾ ಇದೆ : ರಾಜಕಾರಣಕ್ಕೆ ಗುಡ್ ಬೈ ಹೇಳಿದ ಕೆ.ಎನ್.ರಾಜಣ್ಣ..!

---Advertisement---

ಮೈಸೂರು; ಸಚಿವ, ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೆ.ಎನ್.ರಾಜಣ್ಣ ಅವರು ಇದೀಗ ನಿವೃತ್ತಿಯ ಮಾತನ್ನ ಆಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ರಾಜಣ್ಣ ಅವರು, ಮುಂದಿನ ಚುನಾವಣೆ ವೇಳೆಗೆ 78 ವರ್ಷ ವಯಸ್ಸಾಗುತ್ತದೆ. ಹೀಗಾಗಿ ಚುನಾವಣಾ ರಾಜಕಾರಣಕ್ಕೆ ಗುಡ್ ಬೈ ಹೇಳುತ್ತೇನೆ. ಮುಂದಿನ ಚುನಾವಣೆಗೆ ಸ್ಪರ್ಧಿಸಲ್ಲ. ಒಂದು ವೇಳೆ ಸ್ಪರ್ಧಿಸಿ ಗೆದ್ದರೂ ಜನರ ಸೇವೆ ಮಾಡುವುದು ಕಷ್ಟ. ಆರೋಗ್ಯದ ದೃಷ್ಟಿಯಿಂದ ಅದು ಕಷ್ಟಸಾಧ್ಯ. ಹಾಗಾಗಿ ಚುನಾವಣೆಗೆ ಸ್ಪರ್ಧಿಸಲ್ಲ. ಆದರೆ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಎಂದಿದ್ದಾರೆ.

ಇನ್ನು ಇಂದು ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ಹೊಸಪೇಟೆಯಲ್ಲಿ ನಡೆಯುತ್ತಿದೆ. ವಿರೋಧ ಪಕ್ಷದ ನಾಯಕರು ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ರಾಜಣ್ಣ ಅವರು, ವಿರೋಧ ಪಕ್ಷವಾಗಿ ಟೀಕೆ ಮಾಡಬೇಕೆಂದು ಅವರು ಟೀಕಿಸುತ್ತಾರೆ. ಬಿಜೆಪಿಗರ ಟೀಕೆಗಳಿಗೆ ಪ್ರತಿಕ್ರಿಯಿಸುವ ಅವಶ್ಯಕತೆ ಇಲ್ಲ ಎಂದಿದ್ದಾರೆ. ಇದೇ ವೇಳೆ ಮೈಸೂರು ಅಂದ್ರೆ ನನಗೆ ಬಹಳ ಇಷ್ಟ. ಮೈಸೂರಿ ವಿವಿಯಲ್ಲೇ ನಾನು ವ್ಯಾಸಂಗ ಮಾಡಿದ್ದೇನೆ. ಇಲ್ಲಿಯೇ ಗಣಿತದಲ್ಲಿ ಮಾಸ್ಟರ್ಸ್ ಮಾಡಿದ್ದೇನೆ. ಆಗ ನಾನು ವಿದ್ಯಾರ್ಥಿ ನಾಯಕನಾಗಿದ್ದೆ. ಮೈಸೂರಿನ ವಾತಾವರಣ ಆಹ್ಲಾದಕರವಾಗಿದೆ ಎಂದಿದ್ದಾರೆ.

ಬೆಂಗಳೂರು ಮಳೆ ಹಾಗೂ ಪ್ರವಾಹ ಪರಿಸ್ಥಿತಿಯನ್ನು ಡಿಸಿಎಂ ಡಿಕೆ ಶಿವಕುಮಾರ್ ಚೆನ್ನಾಗಿ ನಿಭಾಯಿಸುತ್ತಿದ್ದಾರೆ. ಅವರು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಬೆಂಗಳೂರು ಭಾರೀ ಮಳೆಯಿಂದಾಗಿ ಹಲವೆಡೆ ಹಾನಿಯಾಗಿರುವುದರಿಂದ ನಮ್ಮ ಸ್ವಯಂಕೃತ ಅಪರಾಧದ ಪ್ರತಿಫಲ. ಕೆರೆ, ಕಾಲುವೆ, ಚರಂಡಿ ಒತ್ತುವರಿಯಿಂದ ಈ ಪರಿಸ್ಥಿತಿ ಬಂದಿದೆ. ಹೀಗೆ ಹರಿಯಬೇಕು ಎಂದು ನಾವೂ ಹೇಳಲು ಸಾಧ್ಯವಿಲ್ಲ. ಅದಕ್ಕೆ ಅದರ ದಾರಿ ಗೊತ್ತಿದೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment