ನವದೆಹಲಿ : ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರ ಅವಧಿಯನ್ನು ಜೂನ್ 2024 ರವರೆಗೆ ವಿಸ್ತರಿಸಲು ಸರ್ವಾನುಮತದಿಂದ ನಿರ್ಧರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಹೇಳಿದ್ದಾರೆ.
ನವದೆಹಲಿಯಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಎರಡನೇ ದಿನದಂದು ಈ ಘೋಷಣೆ ಹೊರಬಿದ್ದಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನಡ್ಡಾ ಅವರ ಅಧಿಕಾರಾವಧಿಯನ್ನು ವಿಸ್ತರಿಸುವ ಪ್ರಸ್ತಾಪವನ್ನು ಮುಂದಿಟ್ಟರು ಎಂದು ಶಾ ಹೇಳಿದರು.
ಸಭೆಯ ಮೊದಲ ದಿನದಂದು, ನಡ್ಡಾ ಅವರು ಈ ವರ್ಷ ನಡೆಯಲಿರುವ ಎಲ್ಲಾ ಒಂಬತ್ತು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವಂತೆ ಪಕ್ಷದ ನಾಯಕರಿಗೆ ಸೂಚಿಸಿದ್ದರು.
ಮೋದಿ ನೇತೃತ್ವದ ಸರ್ಕಾರವು ಭಾರತದ ಸರ್ವತೋಮುಖ ಪ್ರಗತಿಯನ್ನು ಸಾಧಿಸಿದೆ ಮತ್ತು ಲೋಕಸಭೆ ಚುನಾವಣೆ ಸೇರಿದಂತೆ ಎಲ್ಲಾ ಚುನಾವಣೆಯಲ್ಲಿ ಪಕ್ಷದ ಗೆಲುವಿನ ನಿರೀಕ್ಷೆಯ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.
ನಡ್ಡಾ ಅವರು 2020 ರ ಜನವರಿಯಲ್ಲಿ
ಅಮಿತ್ ಶಾ ಅವರಿಂದ ಅಧಿಕಾರ ವಹಿಸಿಕೊಂಡು, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.