ಕೆರಗೋಡು ಹನುಮ ಧ್ವಜ ಪ್ರಕರಣ | ಇಷ್ಟೆಲ್ಲಾ ರಾದ್ದಾಂತ ಮಾಡಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ? 

1 Min Read

 

ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ಶಾಂತಿಯ ಸಂದೇಶ ಸಾರಿದ ರಾಷ್ಟ್ರಪಿತ ಮಹಾತ್ಮಗಾಂಧಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿಯ ಗುಡಿ ಕಟ್ಟುವ ಹುನ್ನಾರ ನಡೆಯುತ್ತಿರುವುದು ಅಪಾಯಕಾರಿ ಎಂದು ಚಿಂತಕ ಜೆ.ಯಾದವರೆಡ್ಡಿ ವಿಷಾಧಿಸಿದರು.

ಜಿಲ್ಲೆಯ ವಿವಿಧ ಸಂಘಟನೆಗಳು ಸೇರಿಕೊಂಡು ನಗರದ ಒನಕೆ ಓಬವ್ವ ವೃತ್ತದಲ್ಲಿ ಮಂಗಳವಾರ ಆಚರಿಸಿದ ಸೌಹಾರ್ಧ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು.

ಜಾಗತೀಕವಾಗಿ ಭಾರತ ಬಹುತ್ವಕ್ಕೆ ಹೆಸರಾಗಿದೆ. ವೈವಿದ್ಯಮಯ ಸಂಸ್ಕøತಿ ನಮ್ಮದು, ಎಲ್ಲಾ ಜಾತಿ, ಧರ್ಮದವರು ಸಮಾನವಾಗಿ ಬದುಕಲು ಸಂವಿಧಾನ ರಕ್ಷಣೆ ನೀಡಿದೆ. ಬಹುತ್ವವನ್ನು ವಿರೋಧಿಸಿದರೆ ಸಂವಿಧಾನವನ್ನು ವಿರೋಧಿಸಿದಂತೆ. ಆದರೆ ಕೆಲವು ಶಕ್ತಿಗಳು ಭಾರತದಲ್ಲಿ ಏಕ ಸಂಸ್ಕøತಿ, ಏಕ ಭಾಷೆ, ಏಕ ಧರ್ಮ ತರಲು ಹೊರಟಿದೆ. ಇದರಿಂದ ವೈವಿದ್ಯಮಯ ಸಂಸ್ಕøತಿ ನಾಶವಾಗಿ ಸಂಘರ್ಷಕ್ಕೆ ಎಡೆಮಾಡಿಕೊಟ್ಟಂತಾಗುತ್ತದೆ.

ಸಹಿಷ್ಣುತೆ, ಸಹ ಬಾಳ್ವೆಯಿಂದ ಎಲ್ಲರೂ ಬದುಕಬೇಕು. ರಾಜ್ಯದಲ್ಲಿ ಬರಗಾಲ ತಲೆದೋರಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಧರ್ಮದ ಅಮಲನ್ನು ತಲೆಗೇರಿಸಿಕೊಂಡಿರುವ ಕೋಮುವಾದಿ ಬಿಜೆಪಿಯವರು ಮಂಡ್ಯ ಜಿಲ್ಲೆ ಕೆರಗೋಡಿನಲ್ಲಿ ಹನುಮ ಧ್ವಜವನ್ನು ಇಳಿಸಿದ್ದಾರೆನ್ನುವುದನ್ನೇ ದೊಡ್ಡ ರಾದ್ದಾಂತವನ್ನಾಗಿ ಮಾಡಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.?

ಸಿ.ಐ.ಟಿ.ಯು. ಜಿಲ್ಲಾ ಸಹ ಸಂಚಾಲಕ ಸಿ.ಕೆ.ಗೌಸ್‍ಪೀರ್, ಕರ್ನಾಟಕ ಜನಶಕ್ತಿಯ ಟಿ.ಶಫಿವುಲ್ಲಾ ಸೇರಿದಂತೆ ವಿವಿಧ ಸಂಘಟನೆಗಳು ಸೌಹಾರ್ಧ ಸಮಾವೇಶದಲ್ಲಿ ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *