Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜಗದೀಶ್ ಶೆಟ್ಟರ್ ಮೂವರು ಅಭ್ಯರ್ಥಿಗಳ ಅವಿರೋಧ ಆಯ್ಕೆ…!

---Advertisement---

 

ಬೆಂಗಳೂರು: ಜೂನ್ 30ರಂದು ವಿಧಾನಪರಿಷತ್ ಚುನಾವಣೆ ನಡೆಯಬೇಕಿತ್ತು. ಆದರೆ ಕಾಂಗ್ರೆಸ್ ಪಕ್ಷದಿಂದ ಮೂವರು ಅಭ್ಯರ್ಥಿಗಳು ಮಾತ್ರ ಕಣದಲ್ಲಿದ್ದರು. ಹೀಗಾಗಿ ಮೂವರು ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಜಗದೀಶ್ ಶೆಟ್ಟರ್, ಎನ್ ಎಸ್ ಬೋಸರಾಜ್ ಹಾಗೂ ತಿಪ್ಪಣ್ಣ ಕಮಕನೂರ್ ಆಯ್ಕೆಯಾಗಿದ್ದಾರೆ. ಅವಿರೋಧವಾಗಿ ಆಯ್ಕೆಯಾದ ಫಲಿತಾಂಶವನ್ನು ಚುನಾವಣಾಧಿಕಾರಿ ವಿಶಾಲಾಕ್ಷಿ ಫಲಿತಾಂಶ ಪ್ರಕಟಿಸಿದ್ದಾರೆ.

ವಿಧಾನಪರಿಷತ್ ಚುನಾವಣೆಯ ಉಪಚುನಾವಣೆಗೆ ಬಿಜೆಪಿ ಯಾವುದೇ ಅಭ್ಯರ್ಥಿಯನ್ನು ಹಾಕಿರಲಿಲ್ಲ. ಪಕ್ಷೇತರವಾಗಿ ಸ್ಪರ್ಧಿಸಿದ್ದ ಅಭ್ಯರ್ಥಿಯ ನಾಮಪತ್ರ ತಿರಸ್ಕಾರಗೊಂಡಿತ್ತು. ಹೀಗಾಗಿ ಕಾಂಗ್ರೆಸ್ ನ ಮೂವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಲಕ್ಷ್ಮಣ ಸವದಿ, ಬಾಬುರಾವ್ ಚಿಂಚನಸೂರು, ಆರ್.ಶಂಕರ್‌ನಿಂದ ತೆರವಾಗಿದ್ದ ಎಂಎಲ್‌ಸಿ ಸ್ಥಾನಗಳಿಗೆ ಜೂನ್ 30ರಂದು ಉಪಚುನಾವಣೆ ನಿಗದಿಯಾಗಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...