ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬಿಜೆಪಿಯಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ಕದ ತಟ್ಟಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್ ಸೇರಿದ ತಕ್ಷಣ ಜಗದೀಶ್ ಶೆಟ್ಟರ್ ಅವರಿಗೆ ಡಿಕೆ ಶಿವಕುಮಾರ್, ಬಿ ಫಾರಂ ನೀಡಿ ಸ್ವಾಗತಿಸಿದ್ದಾರೆ.
ಹುಬ್ಬಳ್ಳಿ – ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಜಗದೀಶ್ ಶೆಟ್ಟರ್ ಕಣಕ್ಕಿಳಿಯಲಿದ್ದಾರೆ. ಬಿಜೆಪಿಯಿಂದ ಕೂಡ ಇದೇ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಸಿಗದ ಕಾರಣ ಬೇಸತ್ತು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.
ಬಿಜೆಪಿಯಲ್ಲಿ ಟಿಕೆಟ್ ಅನೌನ್ಸ್ ಆಗುವುದಕ್ಕೂ ಮುನ್ನವೇ ಜಗದೀಶ್ ಶೆಟ್ಟರ್ ಬೇಸರ ಹೊರ ಹಾಕಿದ್ದರು. ಹೀಗಾಗಿ ಕಾಂಗ್ರೆಸ್ ನಾಯಕರು ಕೂಡ ಕಾದು ನೋಡುವ ತಂತ್ರ ಅನುಸರಿಸಿದ್ದರು. ಜಗದೀಶ್ ಶೆಟ್ಟರ್ ನಡೆಗೆ ಕಾದಿದ್ದರು. ಹೀಗಾಗಿಯೇ ಹುಬ್ಬಳ್ಳಿ ಧಾರವಾಡದ ಕೇಂದ್ರ ವಿಧಾನಸಭಾ ಕ್ಷೇತ್ರದ ಟಿಕೆಟ್ ಅನೌನ್ಸ್ ಮಾಡದೆ ಬಾಕಿ ಉಳಿಸಿಕೊಂಡಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್