Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಜಯೇಂದ್ರ ಆಯ್ಕೆ ಗುಟ್ಟು ಬಿಚ್ಚಿಟ್ಟ ಜಗದೀಶ್ ಶೆಟ್ಟರ್..!

---Advertisement---

 

ಹುಬ್ಬಳ್ಳಿ: ಬಿಜೆಪಿಯಲ್ಲಿ ಕೆಲವು ತಿಂಗಳೇ ಆದರೂ ಬಿಜೆಪಿ ರಾಜ್ಯಾಧ್ಯಕ್ಷನ ಪಟ್ಟವಾಗಲಿ, ವಿಪಕ್ಷ ನಾಯಕನ ಆಯ್ಕೆಯಾಗಲಿ ಮಾಡಿರಲಿಲ್ಲ. ಇದೀಗ ರಾಜ್ಯಾಧ್ಯಕ್ಷನ ಆಯ್ಕೆಯಾಗಿದೆ. ಬಿಎಸ್ವೈ ಪುತ್ರನನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ವಿಪಕ್ಷ ನಾಯಕನ ಆಯ್ಕೆಯನ್ನು ಮಾಡಲಾಗುತ್ತದೆ. ಆದರೆ ರಾಜ್ಯಾಧ್ಯಕ್ಷ ಆಯ್ಕೆ ಬಗ್ಗೆ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ.

‘ಏನೋ ಅತ್ತು ಕರೆದು ಮಾಡಿರೋ ಥರ ಕಾಣುತ್ತೆ. ಒಂದು ರಾಜಕೀಯ ಪಕ್ಷವಾಗಿ ತಕ್ಷಣವೇ ರಾಜ್ಯಾಧ್ಯಕ್ಷರ ಆಯ್ಕೆ ಮಾಡಬೇಕಿತ್ತು. ಕಳೆದ ಆರು ತಿಂಗಳಿಂದ ರಾಜ್ಯಾಧ್ಯಕ್ಷ ಆಯ್ಕೆ ಮಾಡಿರಲಿಲ್ಲ. ಈಗ ಯಾಕೆ ಆಯ್ಕೆ ಮಾಡಿದ್ರು..? ಇದನ್ನೆಲ್ಲಾ ನೋಡಿದರೆ, ಬಿಜೆಪಿ ಫೇಲ್ ಆಗಿದೆ ಎಂದೇ ಅರ್ಥ.

ಬಿಜೆಪಿಯವರು ಸಾಕಷ್ಟು ಭ್ರಮೆಯಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲವೂ ಗೊತ್ತಾಗಲಿದೆ. ನಾನು ಈಗ ಕಾಂಗ್ರೆಸ್ ನಲ್ಲಿದ್ದೀನಿ. ಅಧ್ಯಕ್ಷರ ಆಯ್ಕೆ ಅವರಿಗೆ ಬಿಟ್ಟ ವಿಚಾರ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 136 ಸ್ಥಾನ ಬಂದು ಬಲಾಢ್ಯವಾಗಿದೆ. ಈಗಾಗಲೇ ಬೇರೆ ಬೇರೆ ರಾಜ್ಯದಲ್ಲಿ ಆಪರೇಷನ್ ಕಮಲ ಮಾಡಲು ಹೋಗಿ ಕೈ ಸುಟ್ಟುಕೊಂಡಿದ್ದಾರೆ. 50-60 ಶಾಸಕರನ್ನು ಕರೆದುಕೊಂಡು ಬಂದು ಸರ್ಕಾರ ರಚನೆ ಮಾಡ್ತೀನಿ ಅನ್ನೋದು ಭ್ರಮೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment