ಹುಬ್ಬಳ್ಳಿ: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದೆ. ಈ ಬಾರಿ ಕೆಲವೊಂದು ಕ್ಷೇತ್ರಗಳು ಸಾಕಷ್ಟು ಗಮನ ಸೆಳೆಯುತ್ತಿವೆ. ಅದರಲ್ಲಿ ಹುಬ್ಬಳ್ಳಿ ಕೂಡ ಒಂದು. ಜಗದೀಶ್ ಶೆಟ್ಟರ್ ಅದ್ಯಾವಾಗ ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಬಂದರೋ, ಅಂದಿನಿಂದ ಬಿಜೆಪಿಯಲ್ಲಿ ಅವರ ಸೋಲಿಗಾಗಿ ಟಾರ್ಗೆಟ್ ಶುರುವಾಗಿದೆ. ಇತ್ತ ಕಡೆ ಕಾಂಗ್ರೆಸ್ ನಲ್ಲಿ ಅವರ ಗೆಲುವಿಗಾಗಿ ಹಣಾಹಣಿ ನಡೆಯುತ್ತಿದೆ.
ಹುಬ್ಬಳ್ಳಿಯಲ್ಲಿ ಎರಡು ಪಕ್ಷದ ನಾಯಕರು ರಹಸ್ಯ ಸಭೆ ನಡೆಸುತ್ತಿದ್ದಾರೆ. ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಒಂದು ಕಡೆ ಸಭೆ ನಡೆಯುತ್ತಿದ್ದರೆ, ಮತ್ತೊಂದು ಕಡೆ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಈ ಮಧ್ಯೆ ಬಿಎಸ್ವೈ ಅವರು ಕಾರ್ಯಕರ್ತರಿಗೆ ಸಲಹೆ ಸೂಚನೆಯೊಂದನ್ನು ನೀಡಿದ್ದಾರೆ. ಜಗದೀಶ್ ಶೆಟ್ಟರ್ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ ಎಂಬ ಅಭಿಪ್ರಾಯವನ್ನು ಸೃಷ್ಟಿ ಮಾಡಬೇಕೆಂಬುದನ್ನು ಕಾರ್ಯಕರ್ತರಿಗೆ ತಿಳಿಸಿದ್ದಾರೆ.
ಹುಬ್ಬಳ್ಳಿಗೆ ಹತ್ತು ದಿನದ ಅವಧಿಯಲ್ಲಿ 9 ನಾಯಕರು ಬಂದು ಹೋಗಿದ್ದಾರೆ. ಅಮಿತ್ ಶಾ, ಜೆಪಿ ನಡ್ಡಾ, ಬಿಎಸ್ವೈ ಸೇರಿದಂತೆ ಹಲವರು ಬಂದಯ ಸಭೆ ನಡೆಸಿ ಹೋಗಿದ್ದಾರೆ. ಜಗದೀಶ್ ಶೆಟ್ಟರ್ ಆತ್ಮೀಯರು ಎನಿಸಿಕೊಂಡಿರುವ ಕಾಂಗ್ರೆಸ್ ನಾಯಕರನ್ನು ಬಿಜೆಪಿಗೆ ಸೆಳೆಯುವ ಪ್ರಯತ್ನ ನಡೆಯುತ್ತಿದೆ. ಈ ಬಾರಿ ಜಗದೀಶ್ ಶೆಟ್ಟರ್ ಮೇಲೆ ಹುಬ್ಬಳ್ಳಿ ಕೇಂದ್ರ ಕೇಂದ್ರಿಕೃತವಾಗಿದೆ.