ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಮಡೆನೂರು ಮನು ಈಗಷ್ಟೇ ಒಂದು ಸಿನಿಮಾದಲ್ಲಿ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಆದರೆ ಒಂದೇ ಒಂದು ಸಿನಿಮಾಗೇನೆ ಅಹಂಕಾರದ ಮಾತುಗಳನ್ನ ಆಡುವುದಕ್ಕೆ ಶುರು ಮಾಡಿದ್ದಾರೆ. ಅತ್ಯಾ*ರ ಕೇಸಲ್ಲಿ ಜೈಲು ಸೇರಿರುವ ಮಡೆನೂರು ಮನು, ಆಡಿದ ಒಂದೊಂದು ಆಡಿಯೋಗಳು ಸಹ ಸಿಕ್ಕಾಪಟ್ಟೆ ವೈರಲ್ ಆಗ್ತಾ ಇದಾವೆ. ಅದರಲ್ಲೂ ಶಿವಣ್ಣ, ದರ್ಶನ್, ಧ್ರುವ ಸರ್ಜಾ ಬಗ್ಗೆ ಆಡಿದ ಮಾತುಗಳು ಕನ್ನಡಿಗರನ್ನ ಕೆಂಡಾಮಂಡಲವಾಗಿಸಿದೆ.
ಮಡೆನೂರು ಮನು ಆಡಿದ ಮಾತುಗಳು ಎನ್ನಲಾದ ಶಿವಣ್ಣರ ಸಾವು, ದರ್ಶನ್, ಧ್ರುವ ಸರ್ಜಾ ಮೀರಿಸುವ ಮಾತುಗಳಿಗೆ ಫಿಲ್ಮ್ ಚೇಂಬರ್ ಕೂಡ ವಿರೋಧ ವ್ಯಕ್ತಪಡಿಸಿದೆ. ಎಲ್ಲೆಡೆ ಆತನನ್ನು ಬ್ಯಾನ್ ಮಾಡಬೇಕೆಂಬ ಮಾತುಗಳು ಕೇಳಿ ಬರುತ್ತಿವೆ. ಯಾವುದೇ ಕಾರಣಕ್ಕೂ ಇನ್ನ್ಯಾವುದೇ ಶೋನಲ್ಲೂ ಆತ ಕಾಣಿಸಿಕೊಳ್ಳಬಾರದು ಅಂತಾನೇ ಆಗ್ರಹಗಳು ಕೇಳಿ ಬರುತ್ತಿವೆ. ಇದೀಗ ಈ ಸಂಬಂಧ ನವರಸ ನಾಯಕ ಜಗ್ಗೇಶ್ ಅವರು ಕೂಡ ಟ್ವೀಟ್ ಮಾಡಿದ್ದಾರೆ.
ಅಲ್ಪನಿಗೆ ಐಶ್ವರ್ಯ ಬಂದ್ರೆ ಅರ್ಧ ರಾತ್ರೀಲಿ ಕೊಡೆ ಹಿಡಿದಂಗೆ, ಗುರು ಹಿರಿಯರ ಮೇಲೆ ಗೌರವ ತೋರದವನು ಗೆದ್ದ ಇತಿಹಾಸವೇ ಇಲ್ಲ. ಇಂದು ಇದ್ದದ್ದು ನಾಳೆ ಇರದು. ಅಹಂಕಾರ ಬಿಡಿ ಅಂಬೆಗಾಲು ಇಡುತ್ತಿರುವ ಕನಸುಗಳೇ. ಆಯುಷ್ಯ ಬರೆಯೋದು ಬ್ರಹ್ಮ, ಚಿಲ್ಲರೆ ಮನುಷ್ಯರಲ್ಲ. ಇಂದಿನ ಚಿತ್ರರಂಗದ ಅಸಹ್ಯ ಕಂಡು ದುಃಖವಾಯಿತು. ಶಿವರಾಜ್ಕುಮಾರ್ ಚಿತ್ರರಂಗದ ಕಿರೀಟವಿದ್ದಂತೆ. ಎಲ್ಲರನ್ನು ಪ್ರೀತಿಸುವ ಜೀವ. ಅಂಥವರ ಸಾವು ಬಯಸಿದವರಿಗೆ ಕೇಡುಗಾಲ ಕಾದಿದೆ. ನೊಂದುಕೊಳ್ಳದಿರಿ ಶಿವಣ್ಣ. ನೀವೂ ಹಿಮಾಲಯ. ನಿಮಗೆ ದೀರ್ಘಾಯುಷ್ಯ ಪ್ರಾಪ್ತಿ. ನಿಮ್ಮನ್ನ ಹೆತ್ತವರು, ಕನ್ನಡಿಗರ ಆಶೀರ್ವಾದವಿದೆ ಎಂದು ಹೇಳಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್