ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 19 : ಗುತ್ತಿಗೆದಾರ ಲಂಚ ನೀಡಲಿಲ್ಲ ಎನ್ನುವ ಕಾರಣಕ್ಕಾಗಿ ಮನೆಗೆ ಕರೆಸಿಕೊಂಡು ಅವಾಚ್ಯ ಶಬ್ಬಗಳಿಂದ ನಿಂದಿಸಿ ಜೈಲು ಪಾಲಾಗಿರುವ ಆರ್.ಆರ್.ನಗರ ಶಾಸಕ ಮುನಿರತ್ನನಿಗೆ ಜಾಮೀನು ನೀಡಬಾರದೆಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಎಸ್.ಜಯಣ್ಣ ಒತ್ತಾಯಿಸಿದ್ದಾರೆ.
ಬಿಜೆಪಿ. ಪಕ್ಷ ಅಧಿಕಾರದಲ್ಲಿದ್ದಾಗ ನಲವತ್ತು ಪರ್ಸೆಂಟ್ ಕಮಿಷನ್ ಪಡೆಯುತ್ತಿದ್ದುದನ್ನು ಸಾಬೀತುಪಡಿಸಿರುವ ಶಾಸಕ ಮುನಿರತ್ನ ಒಲೆಯರಿಗೆ ಅವಮಾನವಾಗುವ ರೀತಿಯಲ್ಲಿ ಗುತ್ತಿಗೆದಾರನನ್ನು ಬೈದಿರುವುದಲ್ಲದೆ ಜಾತಿ ನಿಂದನೆ ಮಾಡಿರುವುದರಿಂದ ಅಟ್ರಾಸಿಟಿ ಕೇಸು ದಾಖಲಿಸಿ ಜೈಲಿನಿಂದ ಹೊರಗೆ ಬರಲು ಅವಕಾಶ ನೀಡಬಾರದು.
ಒಕ್ಕಲಿಗ ಜನಾಂಗಕ್ಕೆ ಸೇರಿದ ಗುತ್ತಿಗೆದಾರನಿಗೆ ಮೂವತ್ತು ಪರ್ಸೆಂಟ್ ಲಂಚ ನೀಡುವಂತೆ ಬೆದರಿಸಿ ಕೊಲೆ ಮಾಡುವುದಾಗಿ ಧಮ್ಕಿ ಹಾಕಿರುವುದು ಯಾವ ನ್ಯಾಯ ?ಇಂತಹ ಶಾಸಕನನ್ನು ಬಿಜೆಪಿ ಯಿಂದ ಉಚ್ಚಾಟಿಸಬೇಕೆಂದು ಜಯಣ್ಣ ಮೊಗಲಹಳ್ಳಿ ಆಗ್ರಹಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















