ಬೆಳಗಾವಿ: ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆ ವಿಚಾರಕ್ಕೇನೆ ಸಾಕಷ್ಟು ಮನಸ್ತಾಪಗಳು ಮೂಡಿವೆ. ಐದು ವರ್ಷದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರು ಸಿಎಂ ಹುದ್ದೆ ನಿರ್ವಹಿಸಲಿದ್ದಾರೆ ಎಂಬ ಮಾತುಕತೆ ನಡೆದಿತ್ತು. ಅದರಂತೆ ಸಾಕಷ್ಟು ಚರ್ಚೆಗಳು ನಡೆದಿವೆ. ಇತ್ತಿಚೆಗೆ ಐದು ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಕೂಡ ಹೇಳಿದ್ದರು. ಆ ಹೇಳಿಕೆ ಬೇರೆ ಬೇರೆ ಆಯಾಮದಲ್ಲಿ ಚರ್ಚೆಯಾಗಿತ್ತು. ಇದೀಗ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಜೈನ ಮುನಿಗಳು ಭವಿಷ್ಯ ನುಡಿದಿದ್ದಾರೆ.
ಜೈನ ಬಸದಿಯ ಪ.ಪೂ ಬಾಲಚಾರ್ಯ ಶ್ರೀ 108 ಸಿದ್ದಸೇನ ಮುನಿ ಮಹಾರಾಜರು ಈ ಭವಿಷ್ಯ ನುಡಿದಿದ್ದಾರೆ. ಡಿಕೆ ಶಿವಕುನಾರ್ ಅವರಿಗೂ ಆಶೀರ್ವಾದ ಕೊಟ್ಟಿದ್ದೇನೆ. ಅವರು ಸಹ ಮುಖ್ಯಮಂತ್ರಿಯಾಗುತ್ತಾರೆ ಎಂದಿದ್ದಾರೆ. ಈ ಭವಿಷ್ಯದ ನುಡಿ ಡಿಕೆ ಶಿವಕುಮಾರ್ ಬೆಂಬಲಿಗರಿಗಂತೂ ಸಂತಸವನ್ನು ನೀಡಿದೆ. ಯಾಕಂದ್ರೆ ನಮ್ಮ ನಾಯಕ ಆದಷ್ಟು ಬೇಗ ಸಿಎಂ ಆಗಲಿ ಎಂದೇ ಬಯಸುತ್ತಿರುವವರು ಅವರು. ಹೀಗಿರುವಾಗ ಜೈನ ಮುನಿಗಳ ಭವಿಷ್ಯ ಆದಷ್ಟು ಬೇಗ ನಿಜವಾಗಲೀ ಎಂದೇ ಬಯಸಿದ್ದಾರೆ.
ಡಿಕೆ ಶಿವಕುಮಾರ್ ಭವಿಷ್ಯ ಮಾತ್ರವಲ್ಲ ಶಾಸಕ ವಿನಯ್ ಕುಲಕರ್ಣಿ ಅವರ ಬಗ್ಗೆಯೂ ಭವಿಷ್ಯ ನುಡಿದಿದ್ದಾರೆ. ವಿನಯ್ ಕುಲಕರ್ಣಿ ಅವರು ಸಚಿವರಾಗ್ತಾರೆ ಎಂದಿದ್ದಾರೆ. ಲೋಕಸಭಾ ಚುನಾವಣೆಯ ಬಳಿಕ ವಿನಯ್ ಕುಲಕರ್ಣಿಗೆ ಸಚಿವರಾಗುವ ಯೋಗವಿದೆ ಎಂದೇ ತಿಳಿಸಿದ್ದಾರೆ. ಈ ಮೂಲಕ ಧಾರವಾಡಕ್ಕೆ ಹೋಗಲು ಆಗದ ಸ್ಥಿತಿಯಲ್ಲಿರುವ ವಿನಯ್ ಕುಲಕರ್ಣಿಗೆ ಸಚಿವ ಸ್ಥಾನ ಸಿಗುತ್ತೆ ಎಂಬ ಆಶೀರ್ವಾದ ಖುಷಿ ತಂದಿರುವುದರಲ್ಲಿ ಅನುಮಾನವೇ ಇಲ್ಲ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











