ಶ್ರೀನಗರ: ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಭೇಟಿ ನೀಡಿದ್ದಾರೆ. ಇದೇ ವೇಳೆ ಅಲ್ಲಿನ ಯುವಕರಿಗೆ ನಿಮ್ಮ ಅಜ್ಜ ಅಜ್ಜಿಯಂದಿರು ಅನುಭವಿಸಿದ ಕಷ್ಟಗಳನ್ನು ನೀವೂ ಎಂದಿಗೂ ಅನುಭವಿಸುವುದಿಲ್ಲ. ನಾನು ಭರವಸೆ ನೀಡುತ್ತೇನೆ ಎಂದಿದ್ದಾರೆ.
ಜಮ್ಮುವಿನಲ್ಲಿ 20 ಸಾವಿರ ಕೋಟಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ ಮೋದಿ ಅವರು, ಜಮ್ಮು ಕಾಶ್ಮೀರದಲ್ಲಿ ಈ ಬಾರಿ ಪಂಚಾಯತ್ ರಾಜ್ ಚುನಾವಣೆಯನ್ನು ಆಚರಿಸಲಾಗುತ್ತದೆ. ಇದು ಬಹುದೊಡ್ಡ ಬದಲಾವಣೆಯನ್ನು ಸೂಚಿಸುತ್ತದೆ. ಅದಕ್ಕಾಗಿಯೇ ಇಲ್ಲಿ ಇರುವ ಪಂಚಾಯತ್ ಗಳೊಂದಿಗೆ ಸಭೆ ಸಂವಾದ ನಡೆಸಿದ್ದೇನೆ. ಸ್ವಾತಂತ್ರ್ಯ ಬಂದ ಏಳು ದಶಕಗಳ ಅವಧಿಯಲ್ಲಿ ಜಮ್ಮು ಕಾಶ್ಮೀರಕ್ಕೆ 17 ಸಾವಿರ ಕೋಟಿ ಖಾಸಗಿ ಹೂಡಿಕೆ ಬಂದಿದೆ. ಆದರೆ ಈಗ ಅದು 38 ಸಾವಿರ ಕೋಟಿಗೆ ತಲುಪಿದೆ ಎಂದು ಜನತೆಗೆ ತಮ್ಮ ಭಾಷಣದ ಮೂಲಕ ತಿಳಿಸಿದ್ದಾರೆ.