ಜನಕಲ್ಯಾಣ ಗ್ಯಾರೆಂಟಿ ಬಜೆಟ್ : ಎಚ್.ಆಂಜನೇಯ

ಚಿತ್ರದುರ್ಗ: ಮಾ. 07 : ಗ್ಯಾರೆಂಟಿ ಯೋಜನೆಗಳಿಂದ ರಾಜ್ಯ ಆರ್ಥಿಕವಾಗಿ ದಿವಾಳಿ ಆಗಲಿದೆ ಎಂಬ ಸುಳ್ಳು ಆರೋಪಗಳಿಗೆ ಸಿದ್ದರಾಮಯ್ಯ ಬಜೆಟ್‍ನಲ್ಲಿ ತಕ್ಕ, ಯೋಜನಾತ್ಮಕ ಉತ್ತರ ನೀಡಿದ್ದಾರೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ.

 

ತಮ್ಮ ಧೀರ್ಘ ರಾಜಕೀಯ ಅನುಭವ, ಬಡಜನರ ನೋವು ಕಣ್ಣಾರೆ ಕಂಡಿರುವ ಸಿದ್ದರಾಮಯ್ಯ ರಾಜ್ಯದ 6 ಕೋಟಿಗೂ ಹೆಚ್ಚು ಜನರ ಪ್ರಗತಿಗೆ ಬಜೆಟ್‍ನಲ್ಲಿ ಅನೇಕ ಯೋಜನೆಗಳನ್ನು ರೂಪಿಸುವ ಮೂಲಕ ಸಮೃದ್ಧ ನಾಡು ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದ್ದಾರೆ. ಪಂಚ ಗ್ಯಾರೆಂಟಿ ಯೋಜನೆಗಳಿಗೆ ಹಣ ಇಲ್ಲ, ಇವುಗಳು ನಿಲ್ಲುತ್ತವೆ ಎಂಬ ಅಪಪ್ರಚಾರಕ್ಕೆ ಸಾವಿರಾರು ಕೋಟಿ ರೂಪಾಯಿ ಮೀಸಲಿಟ್ಟು ನುಡಿದಂತೆ ನಡೆಯುವುದು ನಮ್ಮ ಬದ್ಧತೆ ಎಂಬುದನ್ನು ಪ್ರದರ್ಶಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಎಸ್‍ಸಿಎಸ್‍ಪಿ, ಟಿಎಸ್‍ಪಿ ಜನರ ಕಲ್ಯಾಣಕ್ಕಾಗಿ ಬರೋಬ್ಬರಿ 42 ಸಾವಿರ ಕೋಟಿ ರೂ. ಮೀಸಲಿಟ್ಟಿರುವುದು, ಎಸ್ಸಿ, ಎಸ್ಟಿ, ಒಬಿಸಿ ವರ್ಗದವರಿಗೆ ಗುತ್ತಿಗೆ ಪದ್ಧತಿಯಲ್ಲಿ ಮೀಸಲಾತಿ ಜಾರಿಗೊಳಿಸಿರುವುದು ದೇಶದಲ್ಲಿಯೇ ಮೊದಲ ಕ್ರಾಂತಿಕಾರಕ ನಡೆ ಆಗಿದೆ. ವಿಜ್ಞಾನ, ಕೃಷಿ, ಆರೋಗ್ಯ, ಶಿಕ್ಷಣ ಸೇರಿದಂತೆ ಅನೇಕ ಕ್ಷೇತ್ರದಲ್ಲಿ ಸಮಗ್ರ ಅಭಿವೃದ್ಧಿ ಮೂಲಕ ನಾಡನ್ನು ಸಮೃದ್ಧವಾಗಿ ಕಟ್ಟುವ ಕೆಲಸ ಈ ಬಾರಿಯ ಬಜೆಟ್‍ನಲ್ಲಿ ಸಿದ್ದರಾಮಯ್ಯ ಸಮರ್ಥವಾಗಿ ಮಾಡಿದ್ದಾರೆ.

ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಜಿಲ್ಲೆಯ ಜನರ ಬಹುದಿನಗಳ ಕನಸಾದ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ತಾನೇ ಘೋಷಿಸಿದ 5,300 ಕೋಟಿ ರೂ. ಬಿಡುಗಡೆ ಮಾಡದೆ ಅಸಹಕಾರ ತೋರುತ್ತಿರುವ ಸಂದರ್ಭ, ರಾಜ್ಯ ಸರ್ಕಾರದಿಂದ 2,611 ಕೋಟಿ ರೂ. ಅನುದಾನ ನೀಡುವ ಮೂಲಕ ಬಯಲುಸೀಮೆ ಪ್ರದೇಶದ ಭೂಮಿಗೆ ನೀರುಣಿಸುವುದು ಹಾಗೂ ಜನರ ಬಾಯಾರಿಕೆ ತಣಿಸುವ ಕೆಲಸ ಮಾಡಲಾಗಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಅನೇಕ ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗುತ್ತಿದ್ದು, ಅಪಘಾತಗಳು ಸಾಮಾನ್ಯವಾಗಿವೆ. ಅಪಘಾತ ಸಂದರ್ಭದಲ್ಲಿ ಜಿಲ್ಲಾ ಕೇಂದ್ರದಲ್ಲಿ ಅಗತ್ಯ ಚಿಕಿತ್ಸೆ ದೊರೆಯದೆ ಪ್ರಾಣ ಬಿಟ್ಟವರು ಅನೇಕರು. ಇದನ್ನು ಮನಗಂಡು ಜನರ ಪ್ರಾಣ ರಕ್ಷಣೆಗೆ ಜಿಲ್ಲಾ ಕೇಂದ್ರದಲ್ಲಿ ಟ್ರಾಮಾ ಕೇರ್ ಸೆಂಟರ್ ಸ್ಥಾಪನೆ, ಮೊಳಕಾಲ್ಮೂರಲ್ಲಿ 200 ಹಾಸಿಗೆ ಸಾಮಾರ್ಥ್ಯವುಳ್ಳ ದೊಡ್ಡ ಆಸ್ಪತ್ರೆ ನಿರ್ಮಾಣ, ತೊಗರಿ ಬೆಳೆಗೆ ಪ್ರತಿ ಕ್ವಿಂಟಾಲ್‍ಗೆ 450 ರೂ. ಪ್ರೋತ್ಸಾಹಧನ, ರಸ್ತೆ ಸಂಚಾರ ಸುಗಮಗೊಳಿಸಲು ಯೋಜನೆ ಹೀಗೆ ಅನೇಕ ಯೋಜನೆಗಳ ಮೂಲಕ ಕನ್ನಡ ನಾಡನ್ನು ಸಮೃದ್ಧಗೊಳಿಸಲು, ಜನರ ಜೀವನಮಟ್ಟ ಉತ್ತಮಗೊಳಿಸಲು ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‍ನಲ್ಲಿ ರಾಜ್ಯದ ಎಲ್ಲ ವರ್ಗದ ಜನರ ಹಿತ ಅಡಗಿದ್ದು, ಅತ್ಯುತ್ತಮ ಅಯವ್ಯಯವಾಗಿದೆ ಎಂದು ಎಚ್.ಆಂಜನೇಯ ತಿಳಿಸಿದ್ದಾರೆ.

suddionenews

Recent Posts

ಇಫ್ತಿಯಾರ್ ಕೂಟದಲ್ಲಿ ಭಾಗವಹಿಸಿ ಶುಭಕೋರಿದ ಎಸ್.ಪಿ. ರಂಜಿತ್‍ಕುಮಾರ್ ಬಂಡಾರು

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552   ಸುದ್ದಿಒನ್, ಚಿತ್ರದುರ್ಗ,…

4 minutes ago

ಚಿತ್ರದುರ್ಗ | ಮಾರ್ಚ್ 24ರಂದು ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

ಚಿತ್ರದುರ್ಗ. ಮಾರ್ಚ್15: ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇದೇ ಮಾರ್ಚ್ 24ರಂದು ಬೆಳಿಗ್ಗೆ 11ಕ್ಕೆ ಕೆಡಿಪಿ ತ್ರೈಮಾಸಿಕ ಪ್ರಗತಿ…

46 minutes ago

ಕೆಎಂಎಸ್ ಪ್ರಥಮ ದರ್ಜೆ ಕಾಲೇಜಿಗೆ ಉತ್ತಮ ಫಲಿತಾಂಶ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 15 : 2024-25ನೇ ಸಾಲಿನ ದಾವಣಗೆರೆ ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಬರುವ ಕೆಎಂಎಸ್ ಪ್ರಥಮ ದರ್ಜೆ ಕಾಲೇಜು…

52 minutes ago

ರಾಮಲಿಂಗಾರೆಡ್ಡಿ ತಮ್ಮ ಖಾತೆ ಬದಲಾವಣೆಗೆ ಬಯಸಿದ್ದಾರಾ..?

ಕಾಂಗ್ರೆಸ್ ಸರ್ಕಾರದಲ್ಲಿ ಬಜೆಟ್ ಮುಗಿದ ಮೇಲೆ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಇದೀಗ ಖಾತೆ ಬದಲಾವಣೆಗೆ…

57 minutes ago

ಪ್ರಾಣಿ ಬಲಿ ತಡೆ : ನಾಯಕನಹಟ್ಟಿ ಜಾತ್ರೆಯಲ್ಲಿ ಅಹಿಂಸೆ ಪಾಲಿಸುವ ಸಂದೇಶ ಯಾತ್ರೆಗೆ ಚಾಲನೆ

ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಪ್ರಾಣಿ ಬಲಿ ಕೈಬಿಟ್ಟು, ಅಹಿಂಸಾತ್ಮಕವಾಗಿ ಸಾತ್ವಿಕ ಪೂಜೆ ಸಲ್ಲಿಸಲು ಭಕ್ತರಲ್ಲಿ ಜಾಗೃತಿ ಮೂಡಿಸಲು,…

1 hour ago

ಅಪೌಷ್ಠಿಕತೆಯಿಂದ ಶಿಶು ಮರಣ, ತಾಯಿ ಮರಣ ಆಗಬಾರದು : ಡಾ.ಬಿ.ವಿ.ಗಿರೀಶ್

ಚಿತ್ರದುರ್ಗ. ಮಾ.15: ಅಪೌಷ್ಟಿಕತೆಯ ಕಾರಣದಿಂದ ಶಿಶು ಮರಣ, ತಾಯಿ ಮರಣ ಆಗಬಾರದು ಎಂದು ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು.…

1 hour ago