ಜನಾರ್ದನ ರೆಡ್ಡಿ ಸದ್ಯ ರಾಜ್ಯ ರಾಜಕಾರಣಕ್ಕೆ ಎಂಟ್ರಿ ಪಡೆಯುವುದಕ್ಕೆ ಸಾಕಷ್ಟು ಶ್ರಮವಹಿಸುತ್ತಿದ್ದಾರೆ. ಬಳ್ಳಾರಿಗೆ ಹೋಗುವಂಗಿಲ್ಲ, ಬಿಜೆಪಿಗೆ ಸೇರುವಂಗಿಲ್ಲ. ಅಡ್ಡಕತ್ತರಿಯಲ್ಲಿ ಸಿಲುಕಿ ಬೇರೆ ಬೇರೆ ದಾರಿ ಹುಡುಕುತ್ತಿದ್ದಾರೆ. ಬಳ್ಳಾರಿಯಿಂದ ದೂರವೇ ಇದ್ದು, ಕೊಪ್ಪಳದಲ್ಲಿ ರಾಜಕೀಯ ವೃತ್ತಿ ಆರಂಭಿಸಲು ಯತ್ನಿಸುತ್ತಿದ್ದಾರೆ. ಇದರ ಜೊತೆಗೆ ಹೊಸ ಪಕ್ಷವನ್ನು ಸ್ಥಾಪನೆ ಮಾಡುತ್ತಾರೆ ಎಂಬ ಊಹಾಪೋಹಗಳು ಇದೆ.
ಆದ್ರೆ ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಮಾಡುವುದು ಸುಲಭದ ಕೆಲಸವಾಗಿಲ್ಲ. ಈ ಹಿಂದೆ ಬಿಜೆಪಿ ಬಗ್ಗೆ ಮನಸ್ತಾಪ ಮಾಡಿಕೊಂಡು ಬಿಎಸ್ಆರ್ ಎಂಬ ಪಕ್ಷವನ್ನು ಸ್ಥಾಪನೆ ಮಾಡಿದ್ದರು. ಆದರೆ ಆ ಪಕ್ಷ ಹೇಳಿಕೊಳ್ಳುವಷ್ಟು ಉದ್ಧಾರ ಆಗಲಿಲ್ಲ. ಬಳಿಕ ಶ್ರೀರಾಮುಲು ವಾಪಾಸ್ ಬಿಜೆಪಿಗೆ ಬಂದರು.
ಇನ್ನು ಜನಾರ್ದನ ರೆಡ್ಡಿ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ವಿಚಾರವೂ ಸದ್ದು ಮಾಡುತ್ತಿದೆ. ಆದರೆ ಕಾಂಗ್ರೆಸ್ ಪಕ್ಷವನ್ನು ಸೇರುವುದು ಸುಲಭವಾಗಿ ಕಾಣುತ್ತಿಲ್ಲ. ಯಾಕಂದ್ರೆ 2013ಕ್ಕೂ ಮುನ್ನ ಮಾಜಿ ಸಿಎಂ ಸಿದ್ದರಾಮಯ್ಯ ಬಳ್ಳಾರಿಯಲ್ಲಿ ಪಾದಯಾತ್ರೆ ಮಾಡಿ, ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದರು. ಆಗ ಇದೇ ರೆಡ್ಡಿಗಳ ವಿರುದ್ದ ತೊಡೆತಟ್ಟಿ ನಿಂತಿದ್ದರು. ಈಗ ಮತ್ತೆ ಅವರನ್ನು ಪಕ್ಷಕ್ಕೆ ಕರೆತರುವುದು ಮುಜುಗರವನ್ನುಂಟು ಮಾಡುವುದರಿಂದ ಕರೆದುಕೊಳ್ಳುವ ಸಾಧ್ಯತೆ ಕಡಿಮೆ.
ಹೀಗಾಗಿ ಈ ಎಲ್ಲಾ ಆಯಾಮಗಳು ರಾಜಕಾರನದ ಎಂಟ್ರಿಗೆ ಸುಲಭವಲ್ಲದ ಕಾರಣ ಜನಾರ್ದನ ರೆಡ್ಡಿ ಅವರು ಆಂಧ್ರ ಸಿಎಂ ಕಡೆಗೆ ವಾಲುತ್ತಿದ್ದಾರೆ ಎನ್ನಲಾಗಿದೆ. ಆಂಧ್ರಪ್ರದೇಶದ ಜಗನ್ ಮೋಹನ್ ರೆಡ್ಡಿ ಅವರ ವೈಎಸ್ ಆರ್ ಪಕ್ಷವನ್ನು ಸೇರಲಿದ್ದಾರೆ ಎಂದು ಕೆಲವು ಮೂಲಗಳು ತಿಳಿಸುತ್ತಿವೆ. ಯಾಕಂದ್ರೆ ಗಣಿಗಾರಿಕೆ ನಡೆಸುತ್ತಿದ್ದಂತ ಸಮಯದಲ್ಲಿ ಜಗನ್ ಮೋಹನ್ ರೆಡ್ಡಿ ಅವರ ತಂದೆಯ ಜೊತೆಗೆ ಜನಾರ್ದನ ರೆಡ್ಡಿ ಅವರು ಆಪ್ತತೆ ಹೊಂದಿದ್ದರು. ಹೀಗಾಗಿ ವೈಎಸ್ ಆರ್ ಕಾಂಗ್ರೆಸ್ ಪಾರ್ಟಿ ಸೇರಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿವೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…