ಬೆಂಗಳೂರು; ಬಿಜೆಪಿಯಲ್ಲೂ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಕ್ಕಾಪಟ್ಟೆ ಪೈಪೋಟಿ ಹೆಚ್ಚಾಗಿದೆ. ಅದರಲ್ಲೂಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣ ಹೇಗಾದರೂ ಮಾಡಿ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ನಾವೇ ಕೂರಬೇಕು ಎಂಬ ಹಠ ತೊಟ್ಟಿದ್ದಾರೆ. ಅದಕ್ಕಾಗಿ ಸಾಕಷ್ಟು ಪ್ರಯತ್ನವನ್ನು ಮಾಡ್ತಾ ಇದ್ದಾರೆ. ಇದರ ಜೊತೆಗೆ ಗಾಲಿ ಜನಾರ್ದನ ರೆಡ್ಡಿ ಅವರ ಹೆಸರು ಕೂಡ ಮುಂಚೂಣಿಯಲ್ಲಿದೆ. ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆಯ ಚರ್ಚೆಯ ಹೊತ್ತಲ್ಲೇ ಶಾಸಕ ಜನಾರ್ದನ ರೆಡ್ಡಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿದ್ದಾರೆ.
ರಾಜ್ಯಕ್ಕೆ ಇತ್ತೀಚೆಗಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಂದಿದ್ದರು. ಈ ವೇಳೆ ಗಾಲಿ ಜನಾರ್ದನ ರೆಡ್ಡಿ ಅವರು ರಹಸ್ಯವಾಗಿ ಅವರನ್ನ ಭೇಟಿಯಾಗಿದ್ದರು ಎಂದು ಹೇಳಲಾಗುತ್ತಿದ್ದು, ಆ ಸಂಬಂಧ ಜೋರು ಚರ್ಚೆಯಾಗಿದೆ. ಇದೀಗ ಜನಾರ್ದನ ರೆಡ್ಡಿ ಅವರು ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಚರ್ಚೆಯಾಗಿದೆ ಎನ್ನಲಾಗಿದೆ.
ಬಿನೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ಜನಾರ್ದನ ರೆಡ್ಡಿ ಕೂಡ ಇದ್ದಾರೆ. ಆಲ್ಮೋಸ್ಟ್ ಅವರಿಗೇನೆ ರಾಜ್ಯಾಧ್ಯಕ್ಷ ಸ್ಥಾನ ಸಿಗಬಹುದು ಎಂದೇ ಚರ್ಚೆಗಳಾಗುತ್ತಿದ್ದವು. ಆದರೆ ಜನಾರ್ದನ ರೆಡ್ಡಿಗೆ ರಾಜ್ಯಾಧ್ಯಕ್ಷ ಸ್ಥಾನ ಸಿಗೋದು ಅನುಮಾನ ಎನ್ನಲಾಗಿದೆ. ಯಾಕಂದ್ರೆ ರೆಡ್ಡಿ ಬರೋಬ್ಬರಿ 12 ವರ್ಷಗಳ ಕಾಲ ಬಿಜೆಪಿಯಿಂದ ದೂರವೇ ಉಳಿದಿದ್ದರು. ಬಳಿಕ ತಮ್ಮದೇ ಪಕ್ಷ ಶುರು ಮಾಡಿದ್ದರು. ಕಳೆದ ವರ್ಷದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆಯಾದರು. ಹೀಗಾಗಿ ಜನಾರ್ದನ ರೆಡ್ಡಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡುವುದು ಅನುಮಾನವಾಗಿದೆ.
ಸುದ್ದಿಒನ್, ಹಿರಿಯೂರು, ಮಾರ್ಚ್. 14 : ತಾಲ್ಲೂಕಿನ ಜವಗೊಂಡನಹಳ್ಳಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಉಪ ಸಭಾಪತಿ ರುದ್ರಪ್ಪ ಲಮಾಣಿಯವರು…
ಸುದ್ದಿಒನ್, ಜಗಳೂರು, ಮಾರ್ಚ್. 14 : ಶ್ರೀ ಶರಣ ಬಸವೇಶ್ವರ ದಾಸೋಹ ಮಠ, ದೊಣ್ಣೆಹಳ್ಳಿ, ಸರ್ಕಾರಿ ದಂತ ಕಾಲೇಜು…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ಚಿತ್ರದುರ್ಗ. ಮಾ.14: ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರೆಯ ದೊಡ್ಡ ರಥೋತ್ಸವ ಇದೇ ಮಾರ್ಚ್ 16 ರಂದು ಭಾನುವಾರ…
ಸುದ್ದಿಒನ್, ಚಿತ್ರದುರ್ಗ,ಮಾರ್ಚ್. 14: ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)…