Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜನಾರ್ದನ ರೆಡ್ಡಿಗೆ ಮತ್ತೆ 7 ವರ್ಷ ಜೈಲು ಶಿಕ್ಷೆ..!

---Advertisement---

 

ಬೆಂಗಳೂರು; ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜನಾರ್ದನ ರೆಡ್ಡಿ ಅವರನ್ನ ಮತ್ತೆ ಬಂಧಿಸಿದ್ದಾರೆ. ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆಯಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರನ್ನು ಅಪರಾಧಿ ಎಂದು ಸಿಬಿಐ ಕೋರ್ಟ್ ಘೋಷಿಸಿದೆ. ಓಬಳಾಪುರಂ ಮೈನಿಂಗ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕನಾಗಿದ್ದ ಬಿ.ವಿ.ಶ್ರೀನಿವಾಸರೆಡ್ಡಿ ಮತ್ತು ಓಬಳಾಪುರಂ ಮೈನಿಂಗ್ ಕಂಪನಿಯ ಮುಖ್ಯಸ್ಥನಾಗಿದ್ದ ಜನಾರ್ದನ ರೆಡ್ಡಿ ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಲಿ ಜನಾರ್ದನ ರೆಡ್ಡಿಗೆ ಕೋರ್ಟ್ ಏಳು ವರ್ಷಗಳ ಕಾಲ ಶಿಕ್ಷೆಯನ್ನು ಪ್ರಕಟಿಸಿದೆ. ಈಗ ಏಳು ವರ್ಷ ಶಿಕ್ಷೆಯಾಗಿರುವ ಕಾರಣ ಶಾಸಕ ಸ್ಥಾನಕ್ಕೂ ಕುತ್ತು ಬರುವ ಸಾಧ್ಯತೆ ಇದೆ. ಜಾಸ್ತಿ ವರ್ಷ ಜೈಲು ಶಿಕ್ಷೆಯಾದಾಗ ಅವರಿಗೆ ಶಾಸಕರಾಗಿ ಇರುವ ಅರ್ಹತೆ ಇರುವುದಿಲ್ಲ.

ಜನಾರ್ದನ ರೆಡ್ಡಿ ಜೊತೆಗೆ ವಿ.ಡಿ.ರಾಜಗೋಪಾಲ್, ದಿ. ರಾವ್ ಲಿಂಗಾರೆಡ್ಡಿ, ಕೆ.ಮೆಹಫೂಸ್ ಅಲಿ ಖಾನ್, ಬಿವಿ ಶ್ರೀನಿವಾಸ್ ರೆಡ್ಡಿ (ಜನಾರ್ದನ್​ ರೆಡ್ಡಿ ಸಂಬಂಧಿ) ಮತ್ತು ಓಎಂಸಿ ಕಂಪನಿ ಕೂಡ ಅಪರಾಧಿ ಎಂದು ಕೋರ್ಟ್​​ ತೀರ್ಪು ನೀಡಿದೆ. ಈ ಅಪರಾಧವು ಐಪಿಸಿಯ ಸೆಕ್ಷನ್ 120B ಜೊತೆಗೆ 420, 409, 468, 471 ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 13 (2) ಜೊತೆಗೆ 13 (1)(d) ಅಡಿಯಲ್ಲಿ ಸಾಬೀತಾಗಿದೆ. ಈಗ ರೆಡ್ಡಿ ಅವರು ಜಾಮೀನು ಬೇಕೆಂದರೆ ಹೈದರಬಾದ್ ಕೋರ್ಟ್ ಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಇದೇ ಕೇಸಲ್ಲಿ ಜೈಲು ವಾಸ ಅನುಭವಿಸಿದ್ದ ಜಾನರ್ದನ ರೆಡ್ಡಿ ಅವರಿಗೆ ಬಳ್ಳಾರಿ ಪ್ರವೇಶವನ್ನು ನಿಷೇಧಿಸಲಾಗಿತ್ತು. ಇತ್ತೀಚೆಗೆ ಆ ನಿಷೇಧವನ್ನು ತೆರವು ಮಾಡಲಾಗಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment