Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಜನವರಿ 02 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹೊಳಲ್ಕೆರೆಯಲ್ಲಿ ಜನತಾದರ್ಶನ

---Advertisement---

ಚಿತ್ರದುರ್ಗ ಡಿ. 28 : ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ನೇತೃತ್ವದಲ್ಲಿ ಜ. 02 ರಂದು ಬೆ. 10.30 ಕ್ಕೆ ಹೊಳಲ್ಕೆರೆಯ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಒಳಾಂಗಣ ಆಡಿಟೋರಿಯಂ (ಸಂವಿಧಾನ ಸೌಧ) ನಲ್ಲಿ ಜನತಾ ದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಸಾರ್ವಜನಿಕರ ಕುಂದು ಕೊರತೆಗಳನ್ನು ಸ್ಥಳೀಯ ಮಟ್ಟದಲ್ಲಿ ನಿವಾರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಸೂಚನೆಯಂತೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ಜನತಾ ದರ್ಶನ ಏರ್ಪಡಿಸಲಾಗುತ್ತಿದ್ದು, ಅದರನ್ವಯ ಜನತಾ ದರ್ಶನ ಇದೇ ಜ. 02 ರಂದು ಬೆಳಿಗ್ಗೆ 10.30 ಕ್ಕೆ ಹೊಳಲ್ಕೆರೆಯ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಒಳಾಂಗಣ ಆಡಿಟೋರಿಯಂ (ಸಂವಿಧಾನ ಸೌಧ) ನಲ್ಲಿ  ಏರ್ಪಡಿಸಲಾಗಿದೆ.

ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು, ಜನಪ್ರತಿನಿಧಿಗಳು ಜನತಾ ದರ್ಶನದಲ್ಲಿ ಉಪಸ್ಥಿತರಿರುವರು. ಸಾರ್ವಜನಿಕರಿಂದ ಅರ್ಜಿಗಳನ್ನು ಪಡೆದು ಸ್ವೀಕೃತಿ ನೀಡುವ ಸಲುವಾಗಿ ಸಮರ್ಪಕ ರೀತಿಯಲ್ಲಿ ಕೌಂಟರ್‍ಗಳ ವ್ಯವಸ್ಥೆ ಮಾಡಲಾಗುವುದು. ಸಾರ್ವಜನಿಕರು ತಮ್ಮ ಕುಂದುಕೊರತೆ ಕುರಿತ ಅಹವಾಲು, ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...