Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ आध्यात्मिक अन्य

---Advertisement---

ಮದಕರಿಪುರದಲ್ಲಿ ಕೊಲ್ಲಾಪುರದಮ್ಮ ಜಾತ್ರೆ | ಕೋಣ ಗುದ್ದಿ ಓರ್ವ ಮೃತ

---Advertisement---

 

ಸುದ್ದಿಒನ್, ಚಿತ್ರದುರ್ಗ, ಮೇ. 01 : ಜಾತ್ರೆಯಲ್ಲಿ ದೇವಿಗೆ ಕೋಣ ಬಲಿ ಕೊಡುವ ವೇಳೆ ಕೊಣ ಗುದ್ದಿ ಕೊಲ್ಲಪ್ಪ (53 ವರ್ಷ) ಎಂಬಾತ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಮದಕರಿ ಪುರ ಗ್ರಾಮದಲ್ಲಿ ಇಂದು (ಬುಧವಾರ) ಬೆಳಿಗ್ಗೆ 5 ಗಂಟೆ ಸುಮಾರಿಗೆ ನಡೆದಿದೆ.

ಮದಕರಿಪುರದಲ್ಲಿ ಪ್ರತಿವರ್ಷವೂ ವಿಜೃಂಭಣೆಯಿಂದ ಶ್ರೀ ಕೊಲ್ಲಾಪುರದ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವ ನಡೆಯುತ್ತದೆ. ಅದರಂತೆ ಈ ವರ್ಷವೂ ಅದ್ದೂರಿಯಾಗಿ ನಡೆಯುತ್ತಿತ್ತು. ಇಂದು ದೇವಿಗೆ ಕೋಣ ಬಲಿ ಕೊಡುವ ವೇಳೆ ದೇವಾಲಯ ಸಮಿತಿಯ ಸದಸ್ಯರೂ ಆಗಿದ್ದ ಕೊಲ್ಲಪ್ಪ ಅವರಿಗೆ ಆಕಸ್ಮಿಕವಾಗಿ ಕೋಣ ಗುದ್ದಿದ್ದು‌ ತೀವ್ರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಆದರೆ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ‌.

ಸ್ಥಳಕ್ಕೆ ಬಡಾವಣೆ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join WhatsApp

Join Now

Join Telegram

Join Now

Leave a Comment