ಸುದ್ದಿಒನ್, ಚಿತ್ರದುರ್ಗ,(ಜೂನ್.21) : ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯಕ್ಕೆ 2024-25ನೇ ಸಾಲಿಗೆ 6ನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಜಿಯನ್ನು https://navodaya.gov.in ಮತ್ತು https://cbseitms.rcil.gov.in/nvs ವೆಬ್‍ಸೈಟ್‍ನಲ್ಲಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯ ಇರುವ ಜಿಲ್ಲೆಯ ನಿವಾಸಿಯಾಗಿರಬೇಕು. 2023-24ರ ಶೈಕ್ಷಣಿಕ ಅವಧಿಯಲ್ಲಿ 5ನೇ ತರಗತಿಯಲ್ಲಿ ಓದುತ್ತಿರಬೇಕು.
ಅಭ್ಯರ್ಥಿಯು 01-05-2012 ರಿಂದ 30-07-2014 ರ ನಡುವೆ ಜನಿಸಿರಬೇಕು. 2024ರ ಜನವರಿ 20ರಂದು ಪರೀಕ್ಷೆ ನಡೆಯಲಿದೆ ಎಂದು ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















