ಚಿತ್ರದುರ್ಗ. ಆಗಸ್ಟ್. 16: ಹಿರಿಯೂರು ತಾಲ್ಲೂಕಿನ ಉಡುವಳ್ಳಿ ಗ್ರಾಮದ ಜವಾಹರ್ ನವೋದಯ ವಿದ್ಯಾಲಯದಲ್ಲಿ ಪ್ರಶಕ್ತ ಸಾಲಿಗೆ 6ನೇ ತರಗತಿಯ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಇದೇ ಆಗಸ್ಟ್ 27 ಕೊನೆಯ ದಿನವಾಗಿದೆ.
ಆವಾಹರ್ ನವೋದಯ ವಿದ್ಯಾಲಯದ ಆಡಳಿತಾತ್ಮಕ ಕಾರಣಗಳಿಂದ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 27ರ ಅವಧಿವರೆಗೆ ವಿಸ್ತರಿಸಿದ್ದು,
ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಉಚಿತವಾಗಿ ನವೋದಯ ವಿದ್ಯಾಲಯ ಸಮಿತಿಯ ವೆಬ್ಸೈಟ್ https://cbseitms.rcil.gov.in./nvs/index/registration ನಲ್ಲಿ ಸಲ್ಲಿಸಬಹುದು ಎಂದು ಉಡುವಳ್ಳಿ ಜವಾಹರ್ ನವೋದಯ ವಿದ್ಯಾಲಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ :
ಚಿತ್ರದುರ್ಗ ಜವಾಹರ ನವೋದಯ ವಿದ್ಯಾಲಯದಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಖಾಲಿ ಇರುವ ಸೀಟುಗಳ ಪೈಕಿ 11ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಅವಧಿಯನ್ನು ಆಗಸ್ಟ್ 20 ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ www.navodaya.gov.in ವೆಬ್ಸೈಟ್ಗೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















