ಜವಾಹರ ನವೋದಯ ವಿದ್ಯಾಲಯ 06 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ : ಜನವರಿ 31 ಕೊನೆಯ ದಿನ

1 Min Read

 

ಚಿತ್ರದುರ್ಗ ಜ. 04 : ಭಾರತ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆ ವ್ಯಾಪ್ತಿಯಲ್ಲಿ ಬರುವ ಹಿರಿಯೂರು ತಾಲ್ಲೂಕು ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2023-24ನೇ ಸಾಲಿಗೆ 6ನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜ. 31 ಕೊನೆಯ ದಿನಾಂಕವಾಗಿದ್ದು, ಅರ್ಜಿಯನ್ನು  https://navodaya.gov.in ಮತ್ತು  https://cbseitms.rcil.gov.in/nvs  ವೆಬ್ ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯ ಇರುವ ಜಿಲ್ಲೆಯ ನಿವಾಸಿಯಾಗಿರಬೇಕು, 2022-23ರ ಶೈಕ್ಷಣಿಕ ಅವಧಿಯಲ್ಲಿ 5ನೇ ತರಗತಿಯಲ್ಲಿ ಓದುತ್ತಿರಬೇಕು. ಅಭ್ಯರ್ಥಿಯು 2011 ರ ಮೇ. 01 ರಿಂದ 2013 ರ ಏಪ್ರಿಲ್ 30 ರ ನಡುವೆ ಜನಿಸಿರಬೇಕು.  ಪ್ರವೇಶ ಪರೀಕ್ಷೆಯು 2023 ರ ಏಪ್ರಿಲ್ 29 ರಂದು ನಡೆಯಲಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಉಡುವಳ್ಳಿ ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Share This Article
Leave a Comment

Leave a Reply

Your email address will not be published. Required fields are marked *