ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ,(ಜುಲೈ27) : ಹಿರಿಯೂರಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯಲ್ಲಿ ಎರಡು ದಿನಗಳ ಕಾಲ ನಡೆಯುವ ನವೋದಯ ವಿದ್ಯಾಲಯ ಸಮಿತಿ ಹೈದರಬಾದ್ ವಲಯದ ಅಂತರ ಜಿಲ್ಲಾ ವಿಭಾಗೀಯ ಕ್ರೀಡಾಕೂಟಕ್ಕೆ ಗುರುವಾರ ಚಾಲನೆ ನೀಡಲಾಯಿತು.
ಅಂತರ ಜಿಲ್ಲಾ ವಿಭಾಗೀಯ ಕ್ರೀಡಾಕೂಟಕ್ಕೆ ಚಿತ್ರದುರ್ಗ, ಚಿಕ್ಕಮಗಳೂರು, ಉಡುಪಿ, ಹಾವೇರಿ, ಧಾರಾವಾಡ, ದಾವಣಗೆರೆ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ವಿದ್ಯಾಲಯ ಸೇರಿದಂತೆ ಒಟ್ಟು 10 ಜಿಲ್ಲೆಯ ನವೋದಯ ವಿದ್ಯಾಲಯಗಳ 200 ಬಾಲಕರು, 168 ಬಾಲಕಿಯರು ಮತ್ತು 24 ಜನ ಶಿಕ್ಷಕರು ಮತ್ತು ಶಿಕ್ಷಕಿಯರು ಭಾಗವಹಿಸಿದ್ದರು.
ಈ ಕ್ರೀಡಾಕೂಟದಲ್ಲಿ ಕಬ್ಬಡಿ, ಖೋ-ಖೋ, ಯೋಗ, ಚೆಸ್, ಬ್ಯಾಟ್‍ಮಿಟನ್ ಮತ್ತು ಟೆಬಲ್ ಟೆನ್ನಿಸ್ ಪಂದ್ಯಾವಳಿಗಳನ್ನು ಹಮ್ಮಿಕೊಳ್ಳಲಾಗಿದ್ದು. ಈ ಪಂದ್ಯಾವಳಿಯಲ್ಲಿ ಅಯ್ಕೆಯಾದ ಕ್ರೀಡಾಪಟುಗಳನ್ನು ಪ್ರಾದೇಶಿಕ ಮತ್ತು ರಾಷ್ಟ್ರೀಯ ಮಟ್ಟಕ್ಕೆ ಕಳುಹಿಸಲಾಗುವುದು. ಈ ಮಕ್ಕಳಿಗೆ ಕ್ರೀಡೆಯಲ್ಲಿ ಉತ್ತಮ ಭವಿಷ್ಯ ಲಭಿಸುವುದು.
ಹಿರಿಯೂರಿನ ಪವರ್ ಗ್ರಿಡ್ ಜನರಲ್ ಮ್ಯಾನೇಜರ್ ಹರೀಶ್ ಕುಮಾರ್ ನಾಯರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಹಿರಿಯೂರಿನ ಪವರ್ ಗ್ರಿಡ್ ಜನರಲ್ ಮ್ಯಾನೇಜರ್ ಹರೀಶ್ ಕುಮಾರ್ ನಾಯರ್, ಮಕ್ಕಳಿಗೆ ಶಿಕ್ಷಣದ ಜೊತೆಗೆ ಶಿಸ್ತು, ಸಮಯ ಪ್ರಜ್ಞೆ, ಗುರು ಹಿರಿಯರಿಗೆ ಗೌರವ, ಶಾರೀರಿಕ ಶಿಕ್ಷಣದ ಮಹತ್ವ ಮತ್ತು ನವೋದಯ ವಿದ್ಯಾಲಯದ ಮಹತ್ವದ ಬಗ್ಗೆ ಹಿತ ವಚನ ನೀಡಿದರು.
ನವೋದಯ ವಿದ್ಯಾಲಯದ ಮಕ್ಕಳ ಪಥ ಸಂಚಲನ, ಮಕ್ಕಳ ಶಿಸ್ತು, ಮಕ್ಕಳ ವಿವಿಧ ಚಟುವಟಿಕೆಗಳನ್ನು ಮನತುಂಬಿ ಹೊಗಳಿದರು.
ಹಿರಿಯೂರಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯ ಪ್ರಾಚಾರ್ಯ ಡ್ಯಾನಿಯಲ್ ರತನ್ ಕುಮಾರ್ ಅವರ ಪೂರ್ವ ಯೋಜನೆ ಮತ್ತು ಮಾರ್ಗದರ್ಶನ ಹಾಗೂ ಶಿಕ್ಷಕರ ಪ್ರೋತ್ಸಾಹದೊಂದಿಗೆ ವಿಭಾಗೀಯ ಕ್ರೀಡಾಕೂಟವನ್ನು ಸುಗಮವಾಗಿ ಆಯೋಜಿಸಲಾಯಿತು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…