Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಸಾಧಕರಿಗೆ ಸನ್ಮಾನ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.25 : ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಸುವರ್ಣ ಕರ್ನಾಟಕ ಸಂಭ್ರಮ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಇತ್ತೀಚೆಗೆ ನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಜಯ ಕರ್ನಾಟಕ ಜನಪರ ವೇದಿಕೆಯ ರಾಜ್ಯ ಮಹಾ ಪ್ರಧಾನ ಸಂಚಾಲಕ ರಾಧಕೃಷ್ಣ ಸಮಾರಂಭ ಉದ್ಗಾಟಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಸಂಘಟನೆಯನ್ನು ಬಲಿಷ್ಟವಾಗಿ ಕಟ್ಟಿ, ಎಲ್ಲಿ ಅನ್ಯಾಯ, ದೌರ್ಜನ್ಯ, ದಬ್ಬಾಳಿಕೆ ನಡೆಯುತ್ತಿದೋ ಅಲ್ಲಿ ನೊಂದವರ ಪರವಾಗಿ ಹೋರಾಡಬೇಕು. ಕನ್ನಡ ನಾಡು, ನುಡಿ, ನೆಲ, ಜಲದ ಉಳಿವಿಗಾಗಿ ಸದಾ ಕಟಿಬದ್ದರಾಗಿರಬೇಕೆಂದು ಹೇಳಿದರು.

ಡಾ.ಸೌಮ್ಯ ಮಂಜುನಾಥಸ್ವಾಮಿ ಮಾತನಾಡುತ್ತ ಬಡವರು, ಶೋಷಿತರು, ದೀನದಲಿತರ ಪರವಾಗಿರಬೇಕು. ದೇಶಾಭಿಮಾನ ಹಾಗೂ ಭಾಷಾಭಿಮಾನವನ್ನು ಬೆಳೆಸಿಕೊಂಡು ಕನ್ನಡ ಭಾಷೆಯ ಉಳಿವಿಗಾಗಿ ಸದಾ ಮುಂದಿರಬೇಕೆಂದು ಜಯ ಕರ್ನಾಟಕ ಜನಪರ ವೇದಿಕೆ ಪದಾಧಿಕಾರಿಗಳಿಗೆ ತಿಳಿಸಿದರು.

ದೇಹಾರ್ಧಾಡ್ಯ ಸ್ಪರ್ಧಿಗಳಾದ ಮಂಜುನಾಥ್ ಬಳೆಗಾರ್, ನೂರ್ ಅಹಮದ್, ದರ್ಶನ್, ಡಾ.ಜಗದೀಶ್ ಇವರುಗಳನ್ನು ಸನ್ಮಾನಿಸಲಾಯಿತು.

ಜಯಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ಬಿ.ಟಿ.ರಾಜೇಂದ್ರ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಉಪಾಧ್ಯಕ್ಷ ಕೆ.ಎನ್.ಜಗದೀಶ್, ಸಂಚಾಲಕ ರಾಜೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಮಾರಸ್ವಾಮಿ, ದೇವರಾಜ್ ಅರಸ್, ಚಂದ್ರಶೇಖರ್, ಸಿದ್ದೇಶ್ವರ, ಗಿರೀಶ್, ಅಭಿಲಾಷ್, ಕೃಷ್ಣ ಮೇಗಳಹಳ್ಳಿ, ತಾಲ್ಲೂಕು ಪದಾಧಿಕಾರಿಗಳಾದ ಅಶೋಕ್, ನಿರಂಜನ್, ರಂಗಸ್ವಾಮಿ, ಪ್ರವೀಣ್, ಶಿವು ಇನ್ನು ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment