ಕೋಲಾರ: ನಿನ್ನೆಯಷ್ಟೇ ರಾಜ್ಯಸಭಾ ಚುನಾವಣೆ ನಡೆದಿದೆ. ಈ ವೇಳೆ ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮ ಶಾಸಕರನ್ನು ಜೋಪಾನವಾಡುವಲ್ಲಿ ಹರಸಾಹಸ ಪಟ್ಟಿದರು. ವಿಪ್ ಜಾರಿ ಮಾಡಿ, ನಿಯಮ ಮೀರದಂತೆ ಎಚ್ಚರಿಕೆಯನ್ನು ನೀಡಿತ್ತು. ಆದರೆ ಈ ಮಧ್ಯೆಯೂ ಕೋಲಾರದ ಜೆಡಿಎಸ್ ಶಾಸಕ ಶ್ರೀನಿವಾಸಗೌಡ ಜೆಡಿಎಸ್ ಬಿಟ್ಟು, ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದಾರೆ. ಹೀಗಾಗಿ ಕೋಲಾರ ಜೆಡಿಎಸ್ ಕಾರ್ಯಕರ್ತರು ಕೆರಳಿ ಕೆಂಡವಾಗಿದ್ದಾರೆ.
ಕೋಲಾರದಲ್ಲಿ ಶ್ರೀನಿವಾಸ ಗೌಡ ಮನೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ ಶಾಸಕರು ಬದುಕಿದ್ದಾಗಲೇ ತಿಥಿ ಕಾರ್ಯ ಮಾಡಲು ತಯಾರಿ ನಡೆಸಿದ್ದಾರೆ. ಜೂನ್ 11 ಅಂದ್ರೆ ಇವತ್ತು ತಿಥಿ ಕಾರ್ಯ ಇಟ್ಟುಕೊಂಡಿದ್ದಾರೆ. ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಕೋಲಾರ ಶಾಸಕ ಶ್ರೀನಿವಾಸ್ ಗೌಡ ಅವರನ್ನು ರಾಜ್ಯಸಭೆ ಚುನಾವಣೆಗೆ ಜೆಡಿಎಸ್ ಗೆ ಮತ ನೀಡಬೇಕೆಂದು ಸಾಕಷ್ಟು ಮನವೊಲಿಕೆ ಮಾಡಲಾಗಿತ್ತು. ಆದರೆ ಕಡೆ ಗಳಿಗೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗೆ ಮೊದಲ ಪ್ರಾಶಸ್ತ್ಯದ ಮತ ಹಾಗೂ ಎರಡನೇ ಪ್ರಾಶಸ್ತ್ಯದ ಮತ ನೀಡಿದ್ದಾರೆ. ಇದನ್ನು ಜೆಡಿಎಸ್ ಕಾರ್ಯಕರ್ತರು ಖಂಡಿಸಿ, ಪ್ರತಿಭಟನೆ ನಡೆಸಿದ್ದಾರೆ. ಇಂದು ತಿಥಿ ಕಾರ್ಯವನ್ನು ಇಟ್ಟುಕೊಂಡಿದ್ದಾರೆ.