Connect with us

Hi, what are you looking for?

ಪ್ರಮುಖ ಸುದ್ದಿ

ಮೈಸೂರು ಪಾಲಿಕೆಯಲ್ಲಿ ಜೆಡಿಎಸ್ ಕೈ ಹಿಡಿದ ಕಾಂಗ್ರೆಸ್; ವರ್ಕ್ ಆಯ್ತು ಸಿದ್ದರಾಮಯ್ಯ ತಂತ್ರಗಾರಿಕೆ

ಮೈಸೂರು : ತೀವ್ರ ಕುತೂಹಲ ಕೆರಳಿಸಿದ್ಧ ಮೈಸೂರು ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ ಕೊನೆ ಕ್ಷಣದಲ್ಲಿ ಬಿಜೆಪಿ ಹಿಂದೆ ಸರಿದಿದೆ. ಈ ಮೂಲಕ ಕೊನೆಗೆ ಹಳೇ ದೋಸ್ತಿ ಮುಂದುವರೆದಿದ್ದು ಜೆಡಿಎಸ್ ಅಭ್ಯರ್ಥಿ ರುಕ್ಮಿಣಿ ಮಾದೇಗೌಡ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಮತ್ತು ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳದೇ ಸ್ವತಂತ್ರವಾಗಿ ಸ್ಪರ್ಧಿಸಲು ಜೆಡಿಎಸ್ ನಿರ್ಧರಿಸಿ ಅಭ್ಯರ್ಥಿಯನ್ನು ಹಾಕಿತ್ತು. ಮೂರು ಪಕ್ಷಗಳು ಅಭ್ಯರ್ಥಿ ಹಾಕಿದ್ದು ಯಾವ ಪಕ್ಷಕ್ಕೂ ಬಹುಮತ ಇರಲಿಲ್ಲ. ಆದರೆ ಕೊನೆ ಕ್ಷಣದಲ್ಲಿ ಕಾಂಗ್ರೆಸ್-ಜೆಡಿಎಸ್ ಹಳೆ ದೋಸ್ತಿ ಮುಂದುವರೆದಿದ್ದು ಜೆಡಿಎಸ್ ಗೆ ಮೇಯರ್ ಸ್ಥಾನ ಬಿಟ್ಟುಕೊಡಲು ಸ್ಥಳೀಯ ನಾಯಕರು ಸಮ್ಮತಿಸಿದ್ದರು.  ಹೀಗಾಗಿ ಕೊನೆಗೂ ಜೆಡಿಎಸ್ ಮೇಯರ್ ಪಟ್ಟ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ರುಕ್ಮಿಣಿ ಮಾದೇಗೌಡ 43 ಮತಗಳನ್ನ ಪಡೆಯುವ ಮೂಲಕ 23ನೇ ಅವಧಿಗೆ ಮೈಸೂರು ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಇನ್ನು ಉಪ ಮೇಯರ್ ಆಗಿ ಕಾಂಗ್ರೆಸ್ ಅಭ್ಯರ್ಥಿ ಅನ್ವರ್ ಬೇಗ್ ಆಯ್ಕೆಯಾಗಿದ್ದಾರೆ. ಈ ಕುರಿತು  ಚುನಾವಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತ ಪ್ರಕಾಶ್ ಅಧಿಕೃತ ಘೋಷಣೆ ಮಾಡಿದ್ದಾರೆ.

ಬಿಜೆಪಿ ಮೇಯರ್ ಅಭ್ಯರ್ಥಿ ಸುನಂದಾ ಪಾಲನೇತ್ರರಿಗೆ 26, ಕಾಂಗ್ರೆಸ್ ಅಭ್ಯರ್ಥಿ ಎಚ್.ಎಂ. ಶಾಂತಕುಮಾರಿ 00 ಮತ ಪಡೆದಿದ್ದಾರೆ. ಈ ಮೂಲಕ ಮೈಸೂರು ಪಾಲಿಕೆ ಗದ್ದುಗೆಗೇರುವ ಆಸೆ ಇಟ್ಟುಕೊಂಡಿದ್ದ ಬಿಜೆಪಿಗೆ ತೀವ್ರ ನಿರಾಸೆಯಾಗಿದೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಚಿತ್ರದುರ್ಗ, ಸುದ್ದಿಒನ್, (ಏ.12) : ಯುವಕನೊಬ್ಬ ಚಿರತೆಯಿಂದ ತಪ್ಪಿಸಿಕೊಂಡು ಬಚಾವ್ ಆದ ಘಟನೆ ನಗರದ ಕೋಟೆಯ ಕರವತ್ತಿ ಬಳಿ ಇರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಸೋಮವಾರ ರಾತ್ರಿ ನಡೆದಿದೆ. ನಗರದ...

ಪ್ರಮುಖ ಸುದ್ದಿ

ಆ ಕಡೆ ಸತ್ಯ ಕಾರ್ತೀಕ್ ಮೇಲೆ ಅಗಾಧ ಪ್ರೀತಿ ಬೆಳೆಸಿಕೊಳ್ತಾ ಇದ್ದಾಳೆ…ಇತ್ತ ಕಾರ್ತೀಕ್ ದಿವ್ಯಳ ಮದುವೆಗೆ ತಯಾರಿ ನಡೆಸುತ್ತಿದ್ದಾನೆ…ಇದೆಲ್ಲದರ ನಡುವೆ ಇತ್ತೀಚೆಗೆ ಅಮೂಲ್ ಬೇಬಿಯ ನಡವಳಿಕೆ ಸತ್ಯಳಿಗೆ ಇನ್ನಷ್ಟು ಪ್ರೀತಿ ಹುಟ್ಟುವಂತೆ ಮಾಡಿದೆ....

ಪ್ರಮುಖ ಸುದ್ದಿ

ಸಾರಿಗೆ ನೌಕರರ ಮುಷ್ಕರ ಇಂದಿಗೆ ಮುಗಿಯುವಂತೆ ಕಾಣುತ್ತಿಲ್ಲ. ಕಳೆದ ಐದು ದಿನಗಳಿಂದ ನೌಕರರ ಹಠಕ್ಕೆ ಸಂಕಷ್ಟ ಅನುಭವಿಸುತ್ತಿರುವವರು ಜನ. ಬೇಡಿಕೆ ಈಡೇರದ ಹೊರತು ಬಸ್ ಹತ್ತಲ್ಲ, ರಸ್ತೆಗಿಳಿಯಲ್ಲ ಅಂತ ಹಠ ತೊಟ್ಟು ಕುಳಿತಿದ್ದಾರೆ...

ಪ್ರಮುಖ ಸುದ್ದಿ

ಇನ್ನೇನು ಕೆಲವೇ ದಿನಗಳಲ್ಲಿ ಕೃಷ್ಣ ಟಾಕೀಸ್ ಸಿನಿಮಾ ಥಿಯೇಟರ್ ಗೆ ಬರಲಿದೆ. ಇದೇ ತಿಂಗಳ 16 ರಂದು ತೆರೆಗೆ ಬರೋದಕ್ಕೆ ಸಜ್ಜಾಗಿರುವ ಕೃಷ್ಣ ಟಾಕೀಸ್, ತನ್ನ ಟೈಟಲ್ ಮೂಲಕವೇ ಸದ್ದು ಮಾಡಿತ್ತು. ಅದಾದ...

ಪ್ರಮುಖ ಸುದ್ದಿ

ದಾವಣಗೆರೆ : ಜಿಲ್ಲೆಯಾದ್ಯಂತ ಭತ್ತದ ಬೆಳೆಗೆ ದುಂಡಾಣು ಅಂಗಮಾರಿ ರೋಗ ಕಂಡುಬಂದಿದ್ದು, ಇದರ ನಿರ್ವಹಣೆಗೆ ಕೃಷಿ ಇಲಾಖೆ ರೈತರಿಗೆ ಸಲಹೆ ನೀಡಿದೆ. ಭತ್ತದ ಬೆಳೆಯಲ್ಲಿ ಬೆಳವಣಿಗೆಯಿಂದ ತೆನೆ ಒಡೆಯುವ ಹಂತದವರೆಗೆ ತಲುಪಿ ಅಲ್ಲಲ್ಲಿ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಏ.12) : ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಗೆ ಸಂಬಂಧಿಸಿದಂತೆ ಸೋಮವಾರ ಉಮೇದುವಾರಿಕೆ ಹಿಂತೆಗೆದುಕೊಂಡ ನಂತರ ಅಂತಿಮವಾಗಿ 9 ಅಭ್ಯರ್ಥಿಗಳು ಸ್ಪರ್ಧೆಯಲಿದ್ದಾರೆ. ನ.ಕೆಂಚವೀರಪ್ಪ, ಜೆ.ತಿಪ್ಪೇಸ್ವಾಮಿ ಕೊರ್ಲಕುಂಟೆ,...

ಪ್ರಮುಖ ಸುದ್ದಿ

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ನ ಸೋಂಕಿತ ಪ್ರಕರಣಗಳ ಸಂಖ್ಯೆ ಹಾವು ಏಣಿ ಆಟದಂತಾಗಿದೆ. ಆದರೆ ಸೋಮವಾರದ ಗುಣಮುಖಗೊಂಡವರು ಹೆಚ್ಚಾಗಿದ್ದು, ಸಮಾಧಾನ ತಂದಿದೆ. ಸೋಮವಾರದ ವರದಿಯಲ್ಲಿ 11 ಜನರಿಗೆ ಸೋಂಕು ದೃಢಪಟ್ಟಿದ್ದು,...

ಪ್ರಮುಖ ಸುದ್ದಿ

ಚಿತ್ರದುರ್ಗ :  ಕೋವಿಡ್-19 ಹಿನ್ನಲೆಯಲ್ಲಿ ಧಾರ್ಮಿಕ ಹಬ್ಬಗಳಿಗೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮವಾಗಿ ವಿವಿಧ ಜಾತ್ರೆಗಳು, ಮೇಳಗಳಲ್ಲಿ ಗುಂಪು ಸೇರದಂತೆ, ಸಾರ್ವಜನಿಕ ಸ್ಥಳಗಳು, ಮೈದಾನಗಳು, ಉದ್ಯಾನವನಗಳು, ಮಾರುಕಟ್ಟೆ, ಧಾರ್ಮಿಕ ಪ್ರದೇಶ ಇತ್ಯಾದಿ ಸ್ಥಳಗಳಲ್ಲಿ ಸಾರ್ವಜನಿಕ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಏ.12) : ಚಳ್ಳಕೆರೆ ತಾಲ್ಲೂಕಿನ ತಳುಕು ಹೋಬಳಿಯ ರೇಣುಕಾಪುರದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಏ. 17ರಂದು ಗ್ರಾಮ ವಾಸ್ತವ್ಯ ಮಾಡಲಿದ್ದು, ಇದರ ಪೂರ್ವಭಾವಿಯಾಗಿ ಗ್ರಾಮದಲ್ಲಿನ ಕುಂದುಕೊರತೆಗಳ ಬಗ್ಗೆ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಲಾಗಿದೆ....

error: Content is protected !!