Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜೆಡಿಎಸ್ ಸೋಲಿನ ಭಯದಿಂದ ಬಿಜೆಪಿ ಜೊತೆ ಹೊಂದಾಣಿಕೆಗೆ ಹರಸಾಹಸ ಪಡುತ್ತಿದೆ : ಸಚಿವ ಡಿ.ಸುಧಾಕರ್

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್,ಚಿತ್ರದುರ್ಗ : ಪಕ್ಷದಲ್ಲಿ ಯಾರು ಲೀಡರ್ ಗಳಲ್ಲ, ಎಲ್ಲರೂ ಒಟ್ಟಾಗಿ ಸೇರಿ ಕೆಲಸ ಮಾಡಿದಾಗ ಮಾತ್ರ ಚುನಾವಣೆಯಲ್ಲಿ ಜಯಗಳಿಸಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಎ.ಐ.ಸಿ.ಸಿ. ಯುವ ನೇತಾರ ರಾಹುಲ್‍ಗಾಂಧಿ ಕಳೆದ ವರ್ಷ ಸೆಪ್ಟಂಬರ್ 7 ರಂದು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ನಡೆಸಿದ ಭಾರತ್ ಜೋಡೋ ಪಾದಯಾತ್ರೆಗೆ ಒಂದು ವರ್ಷವಾಗಿರುವುದರಿಂದ ಜಿಲ್ಲಾ ಕಾಂಗ್ರೆಸ್ ವತಿಯಿಂದ ಭಾನುವಾರ ನಗರದಲ್ಲಿ ನಡೆದ ಪ್ರಥಮ ವಾರ್ಷಿಕೋತ್ಸವ ಮೆರವಣಿಗೆಯನ್ನುದ್ದೇಶಿಸಿ ಮಾತನಾಡಿದರು.

ಐದು ವರ್ಷಗಳ ಕಾಲ ರಾಜ್ಯದಲ್ಲಿ ಅಧಿಕಾರ ನಡೆಸಿದ ಬಿಜೆಪಿ ಭ್ರಷ್ಟಾಚಾರದಲ್ಲಿ ಮುಳುಗಿತ್ತು. ವಿಧಾನಸಭೆ ಚುನಾವಣೆಗೂ ಮುನ್ನ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಇವರುಗಳು ಐದು ಉಚಿತ ಗ್ಯಾರೆಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದ ಮೇಲೆ ನಾಲ್ಕು ಗ್ಯಾರೆಂಟಿಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದಾರೆ.

ಭಾರತ್ ಜೋಡೋ ಯಾತ್ರೆ ಮೂಲಕ ಪಕ್ಷಕ್ಕೆ ಶಕ್ತಿ ತುಂಬಿರುವುದರಿಂದ ದೇಶ ಆಳುವ ಸಾಮರ್ಥ್ಯ ರಾಹುಲ್‍ಗಾಂಧಿಗೆ ಇದೆ ಎಂದು ಜನ ಅರ್ಥಮಾಡಿಕೊಂಡಿದ್ದಾರೆ. ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚಿನ ಸೀಟುಗಳನ್ನು ಗೆಲ್ಲಬೇಕಾಗಿರುವುದರಿಂದ ಪಕ್ಷದ ಕಾರ್ಯಕರ್ತರು ಈಗಿನಿಂದಲೆ ಸಂಘಟನೆಯಲ್ಲಿ ತೊಡಗಬೇಕು. ಜೆಡಿಎಸ್. ಸೋಲಿನ ಭಯದಿಂದ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಹರಸಾಹಸ ನಡೆಸುತ್ತಿದೆ ಎಂದು ಟೀಕಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್.ಮೈಲಾರಪ್ಪ, ಸಂಪತ್‍ಕುಮಾರ್, ಉಪಾಧ್ಯಕ್ಷರುಗಳಾದ ಜಿ.ಎಸ್.ಕುಮಾರ್‍ಗೌಡ, ಡಿ.ಟಿ.ವೆಂಕಟೇಶ್, ನಜ್ಮತಾಜ್, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎನ್.ಡಿ.ಕುಮಾರ್, ಕೆ.ಪಿ.ಸಿ.ಸಿ. ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್, ಮೆಹಬೂಬ್ ಖಾತೂನ್, ಸೇವಾದಳದ ಇಂದಿರಾ, ನಗರಸಭೆ ಮಾಜಿ ಉಪಾಧ್ಯಕ್ಷ ಎಂ.ಹನೀಫ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಿಕಾಂತ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಕಾಶ್, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಅಬ್ದುಲ್ಲಾ, ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಭಾರತ್ ಜೋಡೋ ಯಾತ್ರೆ ಪ್ರಥಮ ವಾರ್ಷಿಕೋತ್ಸವ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಹೊಳಲ್ಕೆರೆ ರಸ್ತೆಯಲ್ಲಿರುವ ಕನಕ ವೃತ್ತದಿಂದ ಆರಂಭಗೊಂಡ ಮೆರವಣಿಗೆ ಸಂಗೊಳ್ಳಿರಾಯಣ್ಣ ವೃತ್ತ, ಗಾಂಧಿ ವೃತ್ತ, ಎಸ್.ಬಿ.ಎಂ.ಸರ್ಕಲ್, ಅಂಬೇಡ್ಕರ್ ಪ್ರತಿಮೆ ಮುಂಭಾಗದಿಂದ ಮದಕರಿ ವೃತ್ತ, ಒನಕೆ ಓಬವ್ವ ವೃತ್ತದ ಮೂಲಕ ಕಾಂಗ್ರೆಸ್ ಕಚೇರಿಗೆ ತಲುಪಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...