ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್,ಚಿತ್ರದುರ್ಗ : ಪಕ್ಷದಲ್ಲಿ ಯಾರು ಲೀಡರ್ ಗಳಲ್ಲ, ಎಲ್ಲರೂ ಒಟ್ಟಾಗಿ ಸೇರಿ ಕೆಲಸ ಮಾಡಿದಾಗ ಮಾತ್ರ ಚುನಾವಣೆಯಲ್ಲಿ ಜಯಗಳಿಸಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ಎ.ಐ.ಸಿ.ಸಿ. ಯುವ ನೇತಾರ ರಾಹುಲ್‍ಗಾಂಧಿ ಕಳೆದ ವರ್ಷ ಸೆಪ್ಟಂಬರ್ 7 ರಂದು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ನಡೆಸಿದ ಭಾರತ್ ಜೋಡೋ ಪಾದಯಾತ್ರೆಗೆ ಒಂದು ವರ್ಷವಾಗಿರುವುದರಿಂದ ಜಿಲ್ಲಾ ಕಾಂಗ್ರೆಸ್ ವತಿಯಿಂದ ಭಾನುವಾರ ನಗರದಲ್ಲಿ ನಡೆದ ಪ್ರಥಮ ವಾರ್ಷಿಕೋತ್ಸವ ಮೆರವಣಿಗೆಯನ್ನುದ್ದೇಶಿಸಿ ಮಾತನಾಡಿದರು.
ಐದು ವರ್ಷಗಳ ಕಾಲ ರಾಜ್ಯದಲ್ಲಿ ಅಧಿಕಾರ ನಡೆಸಿದ ಬಿಜೆಪಿ ಭ್ರಷ್ಟಾಚಾರದಲ್ಲಿ ಮುಳುಗಿತ್ತು. ವಿಧಾನಸಭೆ ಚುನಾವಣೆಗೂ ಮುನ್ನ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಇವರುಗಳು ಐದು ಉಚಿತ ಗ್ಯಾರೆಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದ ಮೇಲೆ ನಾಲ್ಕು ಗ್ಯಾರೆಂಟಿಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದಾರೆ.
ಭಾರತ್ ಜೋಡೋ ಯಾತ್ರೆ ಮೂಲಕ ಪಕ್ಷಕ್ಕೆ ಶಕ್ತಿ ತುಂಬಿರುವುದರಿಂದ ದೇಶ ಆಳುವ ಸಾಮರ್ಥ್ಯ ರಾಹುಲ್‍ಗಾಂಧಿಗೆ ಇದೆ ಎಂದು ಜನ ಅರ್ಥಮಾಡಿಕೊಂಡಿದ್ದಾರೆ. ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚಿನ ಸೀಟುಗಳನ್ನು ಗೆಲ್ಲಬೇಕಾಗಿರುವುದರಿಂದ ಪಕ್ಷದ ಕಾರ್ಯಕರ್ತರು ಈಗಿನಿಂದಲೆ ಸಂಘಟನೆಯಲ್ಲಿ ತೊಡಗಬೇಕು. ಜೆಡಿಎಸ್. ಸೋಲಿನ ಭಯದಿಂದ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಹರಸಾಹಸ ನಡೆಸುತ್ತಿದೆ ಎಂದು ಟೀಕಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್.ಮೈಲಾರಪ್ಪ, ಸಂಪತ್‍ಕುಮಾರ್, ಉಪಾಧ್ಯಕ್ಷರುಗಳಾದ ಜಿ.ಎಸ್.ಕುಮಾರ್‍ಗೌಡ, ಡಿ.ಟಿ.ವೆಂಕಟೇಶ್, ನಜ್ಮತಾಜ್, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎನ್.ಡಿ.ಕುಮಾರ್, ಕೆ.ಪಿ.ಸಿ.ಸಿ. ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್, ಮೆಹಬೂಬ್ ಖಾತೂನ್, ಸೇವಾದಳದ ಇಂದಿರಾ, ನಗರಸಭೆ ಮಾಜಿ ಉಪಾಧ್ಯಕ್ಷ ಎಂ.ಹನೀಫ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಿಕಾಂತ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಕಾಶ್, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಅಬ್ದುಲ್ಲಾ, ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಭಾರತ್ ಜೋಡೋ ಯಾತ್ರೆ ಪ್ರಥಮ ವಾರ್ಷಿಕೋತ್ಸವ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಹೊಳಲ್ಕೆರೆ ರಸ್ತೆಯಲ್ಲಿರುವ ಕನಕ ವೃತ್ತದಿಂದ ಆರಂಭಗೊಂಡ ಮೆರವಣಿಗೆ ಸಂಗೊಳ್ಳಿರಾಯಣ್ಣ ವೃತ್ತ, ಗಾಂಧಿ ವೃತ್ತ, ಎಸ್.ಬಿ.ಎಂ.ಸರ್ಕಲ್, ಅಂಬೇಡ್ಕರ್ ಪ್ರತಿಮೆ ಮುಂಭಾಗದಿಂದ ಮದಕರಿ ವೃತ್ತ, ಒನಕೆ ಓಬವ್ವ ವೃತ್ತದ ಮೂಲಕ ಕಾಂಗ್ರೆಸ್ ಕಚೇರಿಗೆ ತಲುಪಿತು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…