Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜೆಡಿಎಸ್ ಮುಖಂಡ ಭೀಮಪ್ಪ ಮೀರಾಸಾಬಿಹಳ್ಳಿ ನಿಧನ

---Advertisement---

 

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.14 : ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಮೀರಾಸಾಬಿಹಳ್ಳಿ ಎನ್.ಭೀಮಪ್ಪ(85) ಗುರುವಾರ ನಿಧನರಾಗಿದ್ದಾರೆ.

ಸರಳ, ಸಜ್ಜನ ರಾಜಕಾರಣಿಯಾಗಿದ್ದ ಎನ್.ಭೀಮಪ್ಪ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಮೀರಾಸಾಬಿಹಳ್ಳಿಯ ತೋಟದಲ್ಲಿ ಗುರುವಾರ ನಡೆಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.

ಸಂತಾಪ : ಎನ್.ಭೀಮಪ್ಪನವರ ನಿಧನಕ್ಕೆ ಜೆಡಿಎಸ್ ರಾಷ್ಟ್ರಾಧ್ಯಕ್ಷ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಉಪಾಧ್ಯಕ್ಷ ಬಿ.ಕಾಂತರಾಜ್, ಜೆಡಿಎಸ್.ಜಿಲ್ಲಾಧ್ಯಕ್ಷ ಎನ್.ಜಯಣ್ಣ, ಮಾಜಿ ಜಿಲ್ಲಾಧ್ಯಕ್ಷ ಡಿ.ಯಶೋಧರ, ಜಿಲ್ಲಾ ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್, ಮಹಾ ಪ್ರಧಾನ ಕಾರ್ಯದರ್ಶಿ ಡಿ.ಗೋಪಾಲಸ್ವಾಮಿ ನಾಯಕ, ತಾಲ್ಲೂಕು ಅಧ್ಯಕ್ಷ ಸಣ್ಣತಿಮ್ಮಣ್ಣ ಇವರುಗಳು ಸಂತಾಪ ಸೂಚಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment