ಬೆಂಗಳೂರು (ನ 15): ತುಮಕೂರು ಗ್ರಾಮಾಂತರ ಕ್ಷೇತ್ರದ ಗೌರಿಶಂಕರ್ ಮತ್ತು ದಾಸರಹಳ್ಳಿ ಮಂಜುನಾಥ್ ಅವರು ಜೆಡಿಎಸ್ ತೊರೆದು ಇಂದು ಕಾಂಗ್ರೆಸ್ ಸೇರಿದ್ದಾರೆ. KPCC ಕಚೇರಿಯಲ್ಲಿ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಾವಿದ್ದಾಗ ಜನತಾದಳ ಸೆಕ್ಯುಲರ್ ಆಗಿತ್ತು. ಈಗ ಎಸ್ ಕಿತ್ತೋಗಿ ಕೇವಲ ಜನತಾದಳ ಆಗಿ ಉಳಿದಿದೆ. ಹಿಂದೆಯೂ ಬಿಜೆಪಿ ಜತೆ ಕೈ ಜೋಡಿಸಿದ್ದ ಕಾರಣಕ್ಕೆ ಜನತಾ ಪರಿವಾರದಲ್ಕಿ ಸೆಕ್ಯುಲರ್ ಸಿದ್ದಾಂತದವರೆಲ್ಲಾ ಪ್ರತ್ಯೇಕವಾಗಿ ಉಳಿದೆವು. ಈಗ ಜೆಡಿಎಸ್ ಮತ್ತೆ ಬಿಜೆಪಿ ಜತೆ ಬೆರೆಯುತ್ತಿದೆ. ನಾನು ಈ ಜೆಡಿಎಸ್ ಅನ್ನು ಬಿಜೆಪಿಯ “ಬಿ” ಟೀಮ್ ಅಂದಿದ್ದಕ್ಕೆ ಸಿಟ್ಟಾಗಿದ್ದರು. ಅಂದು ನಾನು ಹೇಳಿದ್ದನ್ನು ಇಂದು ಅವರೇ ಸಾಬೀತುಪಡಿಸಿದ್ದಾರೆ ಎಂದು ವಿವರಿಸಿದರು.
ಜೆಡಿಎಸ್ ಈಗ ತನ್ನ ಸ್ವರೂಪದಲ್ಲಿ ಜನಸಮುದಾಯದ ರಾಜಕೀಯ ಪಕ್ಷ ಆಗಿ ಉಳಿದಿಲ್ಲ. ಕೇವಲ ಕುಟುಂಬದ ಪಕ್ಷ ಆಗಿಯಷ್ಟೆ ಸೀಮಿತವಾಗಿದೆ. ಜೆಡಿಎಸ್ ನ ಡಬ್ಬಲ್ ಗೇಮ್ ಅನ್ನು ಸರಿಯಾಗಿ ಅರ್ಥ ಮಾಡಿಕೊಂಡಿರುವ ಗೌರಿಶಂಕರ್ ಮತ್ತು ಮಂಜುನಾಥ್ ಜತೆಗೆ ಇನ್ನೂ ಬಹಳ ಮಂದಿ ಕಾಂಗ್ರೆಸ್ ಸೇರುತ್ತಿದ್ದಾರೆ. ಆ ಮೂಲಕ ತಮ್ಮ ರಾಜಕೀಯ ಜೀವನವನ್ನು ಭದ್ರ ಮಾಡಿಕೊಳ್ಳುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.
ನಾವು ಗ್ಯಾರಂಟಿ ಕಾರ್ಯಕ್ರಮಗಳನ್ನು ಕೊಟ್ಟಾಗ ಅವನ್ನು ಟೀಕಿಸಿದ್ದ ಪ್ರಧಾನಿಗಳು ಈಗ ಮೋದಿ ಗ್ಯಾರಂಟಿ ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂದು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು ಪ್ರಧಾನಿ ಮೋದಿಯವರೇ , ನಿಮಗೆ ನಾಚಿಕೆ ಆಗತ್ತೋ ಇಲ್ವೋ ಎಂದು ಪ್ರಶ್ನಿಸಿದರು. ರಾಜ್ಯದ, ಕನ್ನಡ ನಾಡಿನ ಜನತೆಯ ಹಣ ಇರುವ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಧಾನಿ ಮೋದಿಯವರು ತಮ್ಮ ಕಾರ್ಯಕ್ರಮ ಎಂದು ಬಿಂಬಿಸಿ ಪ್ರಚಾರ ಪಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ. ಇದಕ್ಕೆ ರಾಜ್ಯದ ಜನತೆಯ ಮತ್ತು ನಮ್ಮಗಳ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿದರು.
ಈ ರಾಶಿಯವರಿಗೆ ಹಣಕಾಸಿನ ವಿಚಾರಕ್ಕಾಗಿ ಟೆನ್ಷನ್, ಈ ರಾಶಿಯವರ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಜೊತೆ ಪದೇ ಪದೇ ಕಿರಿಕಿರಿ, ಬುಧವಾರದ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ. ಫೆ. 25 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…