Connect with us

Hi, what are you looking for?

ಪ್ರಮುಖ ಸುದ್ದಿ

ಜೆಡಿಎಸ್ ಯುವ ಮೋರ್ಚ ರಾಜ್ಯ ಉಪಾಧ್ಯಕ್ಷ ಬಿಜೆಪಿ ಸೇರ್ಪಡೆ

ಸುದ್ದಿಒನ್ ನ್ಯೂಸ್ | ಚಿತ್ರದುರ್ಗ, (ಜು.19): ಜೆಡಿಎಸ್ ಯುವ ಮೋರ್ಚ ರಾಜ್ಯ ಉಪಾಧ್ಯಕ್ಷ ವಿ.ಎಲ್.ಪ್ರಶಾಂತ್ ತಮ್ಮ ಕುಟುಂಬ ಹಾಗೂ ಬೆಂಬಲಿಗರೊಂದಿಗೆ ಸೋಮವಾರ ಚಳ್ಳಕೆರೆ ಟೋಲ್‍ಗೇಟ್‍ನಲ್ಲಿರುವ ಎಸ್.ಎಸ್.ಕೆ.ಎಸ್. ಸಮುದಾಯ ಭವನದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ವಿ.ಎಲ್.ಪ್ರಶಾಂತ್ ಮತ್ತು ಕುಟುಂಬದವರನ್ನು ಪಕ್ಷಕ್ಕೆ ಬರಮಾಡಿಕೊಂಡು ನಂತರ ಮಾತನಾಡಿದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ವಿ.ಎಲ್.ಪ್ರಶಾಂತ್‍ರವರ ತಂದೆ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ವೆಂಕಟೇಶ್ ಕಾಂಗ್ರೆಸ್ ವಿರುದ್ದ ಹೋರಾಡಿ ಸರಳ ಸಜ್ಜನ ರಾಜಕಾರಣಿ ಎನಿಸಿಕೊಂಡಿದ್ದರು.

ಅವರ ಪುತ್ರ ವಿ.ಎಲ್.ಪ್ರಶಾಂತ್ ಕೂಡ ತಂದೆಯ ಮಾರ್ಗದರ್ಶನದಲ್ಲಿ ನಡೆದು ಬಂದು ಜೆಡಿಎಸ್.ನ ಕುಟುಂಬ ರಾಜಕಾರಣಕ್ಕೆ ಬೇಸತ್ತು ಪ್ರಧಾನಿ ಮೋದಿರವರಲ್ಲಿರುವ ದೇಶಾಭಿಮಾನ, ನಾಯಕತ್ವ, ರಾಜ್ಯದ ಮುಖ್ಯಮಂತ್ರಿಯವರ ಆಡಳಿತ ಮೆಚ್ಚಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆಂದು ಸಂತಸ ವ್ಯಕ್ತಪಡಿಸಿದರು.

ಶ್ಯಾಂ ಪ್ರಸಾದ್ ಮುಖರ್ಜಿ, ಪಂಡಿತ್ ದೀನ್ ದಯಾಳ್ ಇವರು ಕಟ್ಟಿದ ಪಕ್ಷ ಬಿಜೆಪಿ.ಎಂದಿಗೂ ಅಧಿಕಾರಕ್ಕಾಗಿ ಹೋರಾಡಲಿಲ್ಲ. ದೇಶ ಮೊದಲು ನಂತರ ಅಧಿಕಾರ ಎನ್ನುವ ಸಿದ್ದಾಂತ ಮುಖ್ಯ. ಪಕ್ಷದಲ್ಲಿ ಕ್ರಿಯಾಶೀಲರಾಗಿ ಕೆಲಸ ಮಾಡುವವರನ್ನು ವರಿಷ್ಠರು ಹುಡುಕಿಕೊಂಡು ಬಂದು ಅಧಿಕಾರ ನೀಡುವ ಸಂಪ್ರದಾಯವಿರುವುದು ಬಿಜೆಪಿ.ಯಲ್ಲಿ ಮಾತ್ರ. ದೇಶ ಕಟ್ಟುವಲ್ಲಿ ಪಕ್ಷ ಎಂದಿಗೂ ಹಿಂದೆ ಬಿದ್ದಿಲ್ಲ ಎಂದು ಹೇಳಿದರು.

ವಿಧಾನಪರಿಷತ್ ಸದಸ್ಯ ಬಿಜೆಪಿ.ರಾಜ್ಯ ಕಾರ್ಯದರ್ಶಿ ತುಳಸಿ ಮುನಿರಾಜ್‍ಗೌಡ ಮಾತನಾಡಿ ಬಿಜೆಪಿ.ಯ ಸಿದ್ದಾಂತ ಒಪ್ಪಿ ವಿ.ಎಲ್.ಪ್ರಶಾಂತ್ ತಮ್ಮ ಕುಟುಂಬ ಹಾಗೂ ಐವತ್ತು ಯುವಕರ ತಂಡದೊಂದಿಗೆ ಪಕ್ಷ ಸೇರಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಕಾರ್ಯಕರ್ತರು, ಚುನಾಯಿತ ಪ್ರತಿನಿಧಿಗಳಿಗೆ ಕೊರತೆಯಿಲ್ಲ. ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ಐದು ಕಡೆ ಪಕ್ಷದ ಧ್ವಜ ಹಾರಾಡುತ್ತಿದೆ. ಇನ್ನು ಮುಗಿಲೆತ್ತರಕ್ಕೆ ಹಾರಬೇಕು. ಪಕ್ಷವನ್ನು ವಿಭಜಿಸುವ ಕೆಲಸ ಬಿಜೆಪಿ.ಯಲ್ಲಿಲ್ಲ ಎಂದರು.

ಹಣ ಬಲ, ಜಾತಿ ಬಲ, ಒಬ್ಬ ವ್ಯಕ್ತಿಯ ಕೈಯಲ್ಲಿ ಬಿಜೆಪಿ.ಇಲ್ಲ. ಪ್ರತಿ ತಿಂಗಳಿಗೊಮ್ಮೆ ರಾಜ್ಯ ಪದಾಧಿಕಾರಿಗಳ ಸಭೆ. ಮೂರು ತಿಂಗಳಿಗೊಮ್ಮೆ ವಿಶೇಷ ಕಾರ್ಯಕಾರಿಣಿ ಸಭ ನಡೆಸಲಾಗುವುದು. ರಾಜ್ಯದ 58 ಸಾವಿರ ಬೂತ್ ಅಧ್ಯಕ್ಷರುಗಳ ಮನೆಗಳ ಮೇಲೆ ಪಕ್ಷದ ಭಾವುಟ, ನಾಮಫಲಕವಿರಬೇಕು. ಪ್ರಬಂಧಕರು ತಮಗೆ ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿ. ಅದರಂತೆ ಪಕ್ಷಕ್ಕೆ ಸೇರ್ಪಡೆಯಾಗಿರುವ ವಿ.ಎಲ್.ಪ್ರಶಾಂತ್ ಮತ್ತು ತಂಡದವರು ಪಕ್ಷದ ಕೆಲಸವನ್ನು ನಿಷ್ಟೆಯಿಂದ ಮಾಡಬೇಕೆಂದು ಕಿವಿಮಾತು ಹೇಳಿದರು.

ಬಿಜೆಪಿ.ರಾಜ್ಯ ಕಾರ್ಯದರ್ಶಿ ಕೆ.ಎಸ್.ನವೀನ್ ಮಾತನಾಡುತ್ತ ಪಕ್ಷದಲ್ಲಿ ಪ್ರಮುಖರು ಕಾರ್ಯಕರ್ತರನ್ನು ಕೈಹಿಡಿದು ಬೆಳೆಸುತ್ತಾರೆ. ಅಧಿಕಾರಕ್ಕಿಂತ ದೇಶ ಮೊದಲು ಎನ್ನುವ ಸಂಘಟನೆ ಯಾವುದಾದರೂ ಇದ್ದರೆ ಅದು ಬಿಜೆಪಿ.ಯಲ್ಲಿ ಮಾತ್ರ, ಸೃಜನಶೀಲತೆ, ವ್ಯಕ್ತಿತ್ವ ಬೆಳೆಸಿಕೊಳ್ಳಲು ಇಲ್ಲಿ ಸಾಕಷ್ಟು ಅವಕಾಶವಿದೆ. ಜೆಡಿಎಸ್.ಯುವ ಘಟಕದ ರಾಜ್ಯ ಉಪಾಧ್ಯಕ್ಷರಾಗಿದ್ದ ವಿ.ಎಲ್.ಪ್ರಶಾಂತ್ ಅಲ್ಲಿನ ಉಸಿರುಗಟ್ಟುವ ವಾತಾವರಣಕ್ಕೆ ಬೇಸತ್ತು ಬಿಜೆಪಿ.ಗೆ ಸೇರ್ಪಡೆಯಾಗಿದ್ದಾರೆ. ಹತ್ತು ವರ್ಷಗಳ ಹಿಂದೆಯೇ ಬಿಜೆಪಿ.ಸೇರಬೇಕಿತ್ತು. ಎಲ್ಲದಕ್ಕೂ ಕಾಲ ಕೂಡಿ ಬರಬೇಕು ಎಂದರು.

ಬಿಜೆಪಿ.ಸೇರ್ಪಡೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ ಮಾತನಾಡಿ ಬಿಜೆಪಿ.ಸಿದ್ದಾಂತ, ದೇಶಾಭಿಮಾನ, ದೇಶ ರಕ್ಷಣೆ, ಸುರಕ್ಷಿತವಾಗಿರಬೇಕೆಂಬ ಮಹದಾಸೆಯಿಂದ ವಿ.ಎಲ್.ಪ್ರಶಾಂತ್ ಮತ್ತು ತಂಡದವರು ಬಿಜೆಪಿ.ಗೆ ಸೇರಿರುವುದು ಅತ್ಯಮೂಲವಾದ ನಿರ್ಧಾರ. ನೂರಾರು ಕಾರ್ಯಕರ್ತರ ತ್ಯಾಗ ಬಲಿದಾನಗಳಿಂದ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ.ಅಧಿಕಾರಕ್ಕೆ ಬಂದಿದೆ. ನೂರಾರು ಸಾಧು, ಸಂತರು ಪಕ್ಕಕ್ಕೆ ಒಳ್ಳೆ ಕಾಲ ಬರಲಿ ಎಂದು ತಪಸ್ಸು ಮಾಡಿದ್ದರ ಫಲವಾಗಿ ನಾವುಗಳು ಇಂದು ಸುವರ್ಣಯುಗದಲ್ಲಿದ್ದೇವೆ. ಎಪ್ಪತ್ತು ವರ್ಷಗಳ ಕಾಲ ಅಧಿಕಾರ ನಡೆಸಿದ ಕಾಂಗ್ರೆಸ್ ಪಕ್ಷ ದೇಶವನ್ನು ವಿನಾಶ ಮಾಡಿದೆ. ದೇಶವನ್ನು ಸುಭದ್ರಗೊಳಿಸಬೇಕಿರುವುದರಿಂದ ಪ್ರತಿಯೊಬ್ಬ ಕಾರ್ಯಕರ್ತನು ಪ್ರಾಮಾಣಿಕವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುವಂತೆ ಮನವಿ ಮಾಡಿದರು.

ಬಿಜೆಪಿ.ಗೆ ಸೇರ್ಪಡೆಯಾಗಿ ಮಾತನಾಡಿದ ವಿ.ಎಲ್.ಪ್ರಶಾಂತ್ ನಮ್ಮ ತಂದೆ ವೆಂಕಟೇಶ್ ಜೆಡಿಯು.ನಲ್ಲಿ ಸಕ್ರಿಯ ಕಾರ್ಯಕರ್ತರಾಗಿ, ಜೆಡಿಎಸ್.ನಿಂದ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಪಕ್ಷಕ್ಕೆ ನಿಷ್ಟರಾಗಿದ್ದರು. ಅವರ ನಿಧನದ ನಂತರ ನಾನೂ ಕೂಡ ಜೆಡಿಎಸ್.ನಲ್ಲಿ ಯಾವುದೇ ಅಧಿಕಾರ ಬಯಸದೆ ಪಕ್ಷಕ್ಕಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿಕೊಂಡು ಬಂದೆ. ಕ್ರಮೇಣ ಅದೊಂದು ಮನೆತನದ ಪಕ್ಷ ಎಂದು ಗೊತ್ತಾದಾಗ ಹಿಂದುತ್ವದ ಮೇಲೆ ಅಪಾರ ಅಭಿಮಾನವುಳ್ಳವನಾಗಿರುವ ನಾನು ಪ್ರಧಾನಿ ಮೋದಿರವರ ಪಾರದರ್ಶಕ ಆಡಳಿತ, ನಡ್ಡರವರ ಮುಂದಾಳತ್ವ, ರಾಜ್ಯಾಧ್ಯಕ್ಷರ ಸಾರಥ್ಯ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನಿಸ್ವಾರ್ಥ ಸೇವೆ, ಬಿಜೆಪಿ.ಸಿದ್ದಾಂತವನ್ನು ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾಗಿರುವುದಾಗಿ ಅಂತರಾಳದ ಇಂಗಿತ ವ್ಯಕ್ತಪಡಿಸಿದರು.

ಕೆಟ್ಟದಾರಿಗೆ ಹೋಗುವವರನ್ನು ಸರಿದಾರಿಗೆ ತರುವ ಕೆಲಸವನ್ನು ಹಿಂದಿನಿಂದಲೂ ಬಿಜೆಪಿ, ಆರ್‍ಎಸ್‍ಎಸ್, ಭಜರಂಗದಳ ಮಾಡಿಕೊಂಡು ಬರುತ್ತಿದೆ. ಆದ್ದರಿಂದ ನನ್ನ ಕುಟುಂಬ ಹಾಗೂ ಬೆಂಬಲಿಗರೊಂದಿಗೆ ಸಂತೋಷವಾಗಿ ಬಿಜೆಪಿ.ಸೇರಿದ್ದೇನೆಂದು ಹೇಳಿದರು.
ದಾವಣಗೆರೆ ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿ ಜೇಷ್ಟ ಪಡಿವಾಳ್‍ಜಿ, ಬಿಜೆಪಿ.ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷ ಸಿದ್ದೇಶ್ ಯಾದವ್, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಭದ್ರಿನಾಥ್, ಮಾಜಿ ಅಧ್ಯಕ್ಷ ತಿಪ್ಪೇಸ್ವಾಮಿ, ಭೀಮಸಮುದ್ರದ ಜಿ.ಎಸ್.ಅನಿತ್, ರಘುಚಂದನ್, ರೈತ ಮೋರ್ಚ ಜಿಲ್ಲಾಧ್ಯಕ್ಷ ವೆಂಕಟೇಶ್‍ಯಾದವ್, ನಗರಸಭೆ ಸದಸ್ಯ ಶಶಿ, ಗ್ರಾಮಾಂತರ ಮಂಡಲ ಅಧ್ಯಕ್ಷ ನಂದಿನಾಗರಾಜ್ ವೇದಿಕೆಯಲ್ಲಿದ್ದರು.

ವಕ್ತಾರ ನಾಗರಾಜ್‍ಬೇದ್ರೆ, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ಜಿಲ್ಲಾ ಪಂಚಾಯಿತಿ ಸದಸ್ಯ ಗುರುಮೂರ್ತಿ, ನಗರಸಭೆ ಸದಸ್ಯ ಶ್ರೀನಿವಾಸ್, ನಾಮನಿರ್ದೇಶಿತ ಸದಸ್ಯ ತಿಮ್ಮಣ್ಣ, ಎಲ್ಲಾ ಮಂಡಲ ಮೋರ್ಚ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

Click to comment

Leave a Reply

Your email address will not be published. Required fields are marked *

Latest

ಚಿತ್ರದುರ್ಗ

upper bhadra meeting in DS Hally, chitradurga ಡಿಎಸ್ ಹಳ್ಳಿಯಲ್ಲಿ ಭದ್ರಾ ಮೇಲ್ದಂಡೆ ಸಭೆ; ಗ್ರಾಮಸ್ಥರು ಭಾಗಿ ಸುದ್ದಿಒನ್, ಚಿತ್ರದುರ್ಗ, (ಆ.03) : ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಶಾಲೆ ಆವರಣದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.03) : ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್ ಜೆ ಎಮ್ ಸಿ ಬಿ ಎಸ್ ಇ ರೆಸಿಡೆನ್ಷಿಯಲ್ ಶಾಲೆಯು 2020-21 ನೇ ಸಾಲಿನ ಸಿ ಬಿ ಎಸ್ ಇ...

ಪ್ರಮುಖ ಸುದ್ದಿ

ಬೆಂಗಳೂರು: ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸೋದಕ್ಕಾಗಿಯೇ ಸಿಎಂ ಮೂರು ದಿನದಿಂದ ದೆಹಲಿಯಲ್ಲಿದ್ದಾರೆ. ಈಗಾಗಲೇ ಹೈಕಮಾಂಡ್ ಜೊತೆ ಈ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಅಷ್ಟೇ ಅಲ್ಲ ಸಂಪುಟದಲ್ಲಿ ಯಾರೆಲ್ಲಾ ಇರ್ಬೇಕು...

ಪ್ರಮುಖ ಸುದ್ದಿ

ಮುಂಬೈ: ಶಿಲ್ಲಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಎಷ್ಟು ಆ್ಯಕ್ಟೀವ್ ಆಗಿದ್ರೋ ಮಗ ವಿಹಾನ್ ಕುಂದ್ರಾ ಕೂಡ ಅಷ್ಟೇ ಆ್ಯಕ್ಟೀವ್ ಆಗಿದ್ದ. ಸದಾ ಸೋಷಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ಪೋಸ್ಟ್ ಹಾಕ್ತಾ ಇದ್ದ. ಆದ್ರೆ ರಾಜ್...

ಪ್ರಮುಖ ಸುದ್ದಿ

ರಾಜಸ್ಥಾನ : ಹಿಂದಿನ ಕಾಲದಿಂದಲೂ ಪಾರಿವಾಳ ಸಂದೇಶ ರವಾನಿಸುವ, ಬೇಹುಗಾರಿಕೆಯಲ್ಲೂ ತನ್ನ ಚಾಣಾಕ್ಯತನ ತೋರಿದೆ. ತಂತ್ರಜ್ಞಾನ ಮುಂದುವರೆದ ಕಾಲದಲ್ಲೂ ಪಾಕಿಸ್ತಾನದಿಂದ ಪತ್ರವೊಂದನ್ನ ಹೊತ್ತು ತಂದಿದೆ ಪಾರಿವಾಳ. ಹೌದು, ಈ ಘಟನೆ ನಡೆದಿರೋದು ರಾಜಸ್ಥಾನದ...

ಪ್ರಮುಖ ಸುದ್ದಿ

ಬೆಂಗಳೂರು :ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕೊನೆ ಕ್ಷಣದಲ್ಲಿ ತನ್ನ ಪಾಳಯದ ಬಸವರಾಜ್ ಬೊಮ್ಮಾಯಿ ಅವರಿಗೆ ಪಟ್ಟ ಕಟ್ಟಿ ಇದೀಗ ರಾಜ್ಯ ಪ್ರವಾಸಕ್ಕೆ ಮುಂದಾಗಿದ್ದಾರೆ ಬಿ.ಎಸ್.ಯಡಿಯೂರಪ್ಪ. ದೆಹಲಿಯಲ್ಲಿ ಸಚಿವ ಸಂಪುಟ ಕಸರತ್ತು...

You May Also Like

ಚಿತ್ರದುರ್ಗ

ಚಿತ್ರದುರ್ಗ, (ಜು.31): ಕೋಟೆನಾಡಿನಲ್ಲಿ ಮತ್ತೆ ಸರಗಳ್ಳತ ಹಾವಳಿ ಶುರುವಾಗಿದೆ. ಬೆಳಗಿ ಹೊತ್ತು ವಾಯು ವಿಹಾರಕ್ಕೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡುವ ಕಳ್ಳರು ಬೈಕ್ ನಲ್ಲಿ ಬಂದು ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಶನಿವಾರ ಬೆಳಗ್ಗೆ...

ಪ್ರಮುಖ ಸುದ್ದಿ

ಅಭಿಮಾನಿಗಳು ತಮ್ಮ ಅಭಿಮಾನವನ್ನ ಒಂದೊಂದು ಬಾರಿ ಒಂದೊಂದು ರೀತಿಯಲ್ಲಿ ಅಭಿಮಾನ ತೋರಿಸ್ತಾರೆ. ಅದರಲ್ಲೂ ಅಭಿಮಾನಿಗಳು ತಮ್ಮ ನೆಚ್ಚಿನ ನಟ ನಟಿಯರ ಫೋಟೋಗಳಿಗೆ ಹಾರ ಹಾಕಿ, ಅಭಿಷೇಕ‌ ಮಾಡಿ ಎಂಜಾಯ್ ಮಾಡ್ತಾರೆ. ಇನ್ನು ಒಂದೆಜ್ಜೆ...

ಆರೋಗ್ಯ

ರಾಗಿ ತಿಂದೋನಿಗೆ ರೋಗವಿಲ್ಲ ಅನ್ನೋ ಮಾತು ಕೇಳಿರ್ತೀರಿ. ಆದ್ರೆ ಈ ಮಾತು ಯಾಕೆ ಹೇಳ್ತಾರೆ ಅಂತ ಗೊತ್ತಾಗ್ಬೇಕಂದ್ರೆ ರಾಗಿಯಿಂದ ಆರೋಗ್ಯಕ್ಕೆ ಅದೆಷ್ಟೆಲ್ಲ ಲಾಭಗಳಿವೆ ಎಂದು ತಿಳ್ಕೋಬೇಕು. ರಾಗಿಯಲ್ಲಿ ಸಾಕಷ್ಟು ಕ್ಯಾಲ್ಶಿಯಂ ಇದೆ. ಆಸ್ಟಿಯೋಪೋರೋಸಿಸ್...

ಆರೋಗ್ಯ

ಅರಳಿ ಮರ ಸಾಮಾನ್ಯವಾಗಿ ಎಲ್ಲೆಡೆ ಇರುತ್ತೆ. ಅದಕ್ಕೆ ನಗರ, ಗ್ರಾಮೀಣ ಅಂತೆಲ್ಲಾ ಏನಿಲ್ಲ. ನಗರ ಪ್ರದೇಶದಲ್ಲೂ ದೇವಾಲಯದ ಮುಂದೆ ಅರಳಿಮರವನ್ನ ಕಾಣಬಹುದು. ಈ ಅರಳಿ‌ಮರದ ಎಲೆಗಳಿಂದ ಸಾಕಷ್ಟು ಲಾಭಗಳಿವೆ. ಅದು ಅಷ್ಟಾಗಿ ಯಾರಿಗೂ...

Copyright © 2021 Suddione. Kannada online news portal

error: Content is protected !!