Breaking: ನದಿಗೆ ಬಿದ್ದ ಪೊಲೀಸ್ ಸಿಬ್ಬಂದಿ ಹೊತ್ತೊಯ್ಯುತ್ತಿದ್ದ ಬಸ್.. 6 ಮಂದಿ ಸಾವು..!

 

ಶ್ರೀನಗರ: ಭೀಕರ ಅಪಘಾತದಲ್ಲಿ 37 ಐಟಿಬಿಪಿ ಸಿಬ್ಬಂದಿ ಮತ್ತು ಇಬ್ಬರು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ ಇಂದು ಪಹಲ್ಗಾಮ್‌ನಲ್ಲಿ ನದಿಯ ತಳಕ್ಕೆ ಬಿದ್ದಿದೆ. ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದಾರೆ.

“ಆರು ಐಟಿಬಿಪಿ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ, ಹಲವಾರು ಇತರ ಸಿಬ್ಬಂದಿ ಗಾಯಗೊಂಡಿದ್ದಾರೆ, ಅವರನ್ನು ಚಿಕಿತ್ಸೆಗಾಗಿ ಶ್ರೀನಗರದ ಸೇನಾ ಆಸ್ಪತ್ರೆಗೆ ಸಾಗಿಸಲಾಗುತ್ತಿದೆ” ಎಂದು ಪೊಲೀಸರು ಎಎನ್‌ಐಗೆ ತಿಳಿಸಿದ್ದಾರೆ.

37 ITBP ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ಸು J&K ನ ಪಹಲ್ಗಾಮ್‌ನಲ್ಲಿ ನದಿಪಾತ್ರಕ್ಕೆ ಬಿದ್ದ ಪರಿಣಾಮ ಕನಿಷ್ಠ 6 ಮಂದಿ ಸಾವನ್ನಪ್ಪಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *