ಫೆ.12ರಂದು ಕಲಬುರಗಿಯಲ್ಲಿ ಬೃಹತ್ ಉದ್ಯೋಗ ಮೇಳ

suddionenews
1 Min Read

ಬಳ್ಳಾರಿ, (ಫೆ.11): ಕಲಬುರಗಿ ಜಿಲ್ಲೆಯಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ “ಬೃಹತ್ ಉದ್ಯೋಗ ಮೇಳ’’ವನ್ನು ಫೆ.12 ರಂದು ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ಐವಾನ್ ಶಾಹಿ ರಸ್ತೆಯಲ್ಲಿರುವ  ಪೂಜ್ಯ ದೊಡ್ಡಪ್ಪ ಅಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿಯ ಅಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಕಂಪನಿಗಳು ಸುಮಾರು 5 ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಬರಲಿವೆ ಮತ್ತು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅಭ್ಯರ್ಥಿಗಳು ಬಿ.ಇ, ಬಿಕಾಂ, ಬಿ.ಎಸ್.ಸಿ, ಬಿಎ, ಬಿಸಿಎ, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಡಿಪ್ಲೊಮಾ ಹಾಗೂ ಐಟಿಐ ವಿದ್ಯಾರ್ಹತೆಯನ್ನು ಹೊಂದಿರಬೇಕಾಗಿರುತ್ತದೆ.

ತರಬೇಕಾದ ದಾಖಲೆಗಳು:ವಿದ್ಯಾಭ್ಯಾಸದ ಪ್ರಮಾಣಪತ್ರ ಅಥವಾ ಅಂಕಪಟ್ಟಿಯ ನಕಲು ಪ್ರತಿ, 02 ಭಾವಚಿತ್ರ, ಆಧಾರ್ ಕಾರ್ಡ್ ಹಾಗೂ ರೆಸ್ಯುಮ್ 5 ಪ್ರತಿಗಳು.
ಹೆಚ್ಚಿನ ಮಾಹಿತಿಗಾಗಿ ದೂ.8277895931 ಗೆ ಸಂಪರ್ಕಿಸಬಹುದು.

Share This Article
Leave a Comment

Leave a Reply

Your email address will not be published. Required fields are marked *