ಚಿತ್ರದುರ್ಗದಲ್ಲಿ ಡಿಸೆಂಬರ್ 23ರಂದು ಉದ್ಯೋಗ ಮೇಳ

suddionenews
1 Min Read

ಚಿತ್ರದುರ್ಗ(ಡಿ.19) : ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಇದೇ ಡಿಸೆಂಬರ್ 23ರಂದು ಬೆಳಿಗ್ಗೆ 9ಕ್ಕೆ ಚಿತ್ರದುರ್ಗ ನಗರದ ಗಾಯಿತ್ರಿ ಕಲ್ಯಾಣ ಮಂಟಪದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಉದ್ಯೋಗ ಮೇಳದಲ್ಲಿ ವಿವಿಧ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದು, ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಇ, ಬಿಬಿಎಂ, ಎಂಬಿಎ, ಸ್ನಾತಕೋತ್ತರ ಪದವಿ ಇತರೆ ಪದವಿ ಹೊಂದಿದ ಪಾಸ್/ಫೇಲ್ ವಿದ್ಯಾರ್ಹತೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಎಲ್ಲಾ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ನೇರ ಸಂದರ್ಶನದ ಪ್ರಯೋಜನ ಪಡೆಯಬಹುದಾಗಿದೆ.

ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಮುಂಚಿತವಾಗಿಯೇ ಈ ಗೂಗಲ್ ಫಾರಂ ಲಿಂಕ್ ಮೂಲಕ https://skillconnect.kaushalkar.com/candidatereg ಅಥವಾ ಕ್ಯೂಆರ್ ಕೋಡ್ ಮೂಲಕ ನೊಂದಾಯಿಸಿಕೊಳ್ಳಬಹುದು.

ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ ನಕಲು, ಆಧಾರ ಕಾರ್ಡ್, ಕನಿಷ್ಟ 10 ಬಯೋಡಟ ಪ್ರತಿಗಳು ಹಾಗೂ ಫೋಟೋಗಳೊಂದಿಗೆ ಉದ್ಯೋಗ ಮೇಳದಲ್ಲಿ ಹಾಜರಾಗುವುದು. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ  ಸಂಪೂರ್ಣ ಉಚಿತವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ 08194-234050, 9008591970, 9901273756, 9972604772, 9972343909 ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ, ಸರಸ್ವತಿಪುರಂ, 3ನೇ ಮುಖ್ಯರಸ್ತೆ, ಚಿತ್ರದುರ್ಗ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯ ಮಿಷನ್ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕೆ.ಗೋಪಾಲರೆಡ್ಡಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *