Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜನವರಿ 30 ರಂದು ಉದ್ಯೋಗ ಮೇಳ : ಸಿಇಒ ಡಾ.ಎಸ್.ಆಕಾಶ್

---Advertisement---

ಚಿತ್ರದುರ್ಗ. ಡಿ.30: ಯುವ ಜನತೆಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಚಿತ್ರದುರ್ಗ ನಗರದ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಆವರಣದಲ್ಲಿ 2026 ರ ಜನವರಿ 30 ರಂದು ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಮಂಗಳವಾರ ಉದ್ಯೋಗ ಮೇಳ ಆಯೋಜಿಸುವ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಂಜೀವಿನಿ-ಕೆಎಸ್‍ಆರ್‍ಎಲ್‍ಪಿಎಸ್-ಡಿಡಿಯುಜಿಕೆವೈ ಯೋಜನೆ, ಜಿಲ್ಲಾ ಪಂಚಾಯಿತಿಯ ಎನ್.ಆರ್.ಎಲ್.ಎಂ ಹಾಗೂ ಜಿಲ್ಲಾ  ಕೌಶಲ್ಯಾಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗುತ್ತಿದ್ದು, ಮೇಳದ ಯಶಸ್ವಿಗೆ ಉಪಸಮಿತಿಗಳನ್ನು ರಚಿಸಲಾಗಿದೆ. ಸಮಿತಿಯ ಮುಖ್ಯಸ್ಥರು ಈಗಿನಿಂದಲೇ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ನಡೆಯುವ ಉದ್ಯೋಗ ಮೇಳ ಆಯೋಜನೆ ಕುರಿತು ಕಾಲೇಜುಗಳಲ್ಲಿ ಹಾಗೂ ವೃತಿಪರ ಶಿಕ್ಷಣ ಸಂಸ್ಥೆಗಳಿಗೆ ಹಾಗೂ ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಉದ್ಯೋಗದ ಮೇಳದ ಬಗ್ಗೆ ಮಾಹಿತಿ ನೀಡಬೇಕು. ಉದ್ಯೋಗದಾತರು ಹಾಗೂ ಉದ್ಯೋಗಾಕಾಂಕ್ಷಿಗಳ ನೋಂದಣಿಗೆ ಪ್ರತ್ಯೇಕ ವೆಬ್ ಲಿಂಕ್ ರಚಿಸಿ ವ್ಯಾಪಕ ಪ್ರಚಾರ ನೀಡುವಂತೆ ಜಿ.ಪಂ. ಸಿಇಓ ಡಾ.ಎಸ್.ಆಕಾಶ್ ಸೂಚಿಸಿದರು.

ಸಭೆಯಲ್ಲಿ ಜಿ.ಪಂ. ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ, ಯೋಜನಾ ನಿರ್ದೇಶಕಿ ಕೆ.ಜಯಲಕ್ಷ್ಮಿ, ಮುಖ್ಯ ಲೆಕ್ಕಾಧಿಕಾರಿ ಡಿ.ಆರ್.ಮಧು, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ವೇಮಣ್ಣ, ಜಿಲ್ಲಾ ಉದ್ಯೋಗಾಧಿಕಾರಿ ರವಿಚಂದ್ರ, ಜಿ.ಟಿ.ಟಿ.ಸಿ ಪ್ರಾಂಶುಪಾಲ ಸುಹಾಸ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಪದವಿ, ಐಟಿಐ, ಇಂಜಿನಿಯರಿಂಗ್ ಕಾಲೇಜುಗಳ ಪ್ರತಿನಿಧಿಗಳು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...