ಚಿತ್ರದುರ್ಗದಲ್ಲಿ ಜನವರಿ 7 ರಂದು ಉದ್ಯೋಗ ಮೇಳ

1 Min Read

 

ಚಿತ್ರದುರ್ಗ,(ಜನವರಿ 02) : ರಾಷ್ಟ್ರೀಯ ವೃತ್ತಿ ಸೇವಾ ಯೋಜನೆ ಅಡಿಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಚಳ್ಳಕೆರೆ ಎಸ್‍ಜೆಎಂ ಪಾಲಿಟೆಕ್ನಿಕ್ ಇವರ ಸಂಯುಕ್ತಾಶ್ರಯದಲ್ಲಿ ಚಳ್ಳಕೆರೆಯ ಎಸ್.ಜೆ.ಎಂ ಪಾಲಿಟೆಕ್ನಿಕ್‍ನಲ್ಲಿ ಇದೇ ಜನವರಿ 7ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

ಮೇಳದಲ್ಲಿ 20ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳುವ ಸಂಬಂಧ ಭಾಗವಹಿಸಲಿವೆ.

ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲಮಾ, ಬಿ.ಇ, ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎಂ , ನರ್ಸಿಂಗ್ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು. 18 ರಿಂದ 30 ವರ್ಷ ವರ್ಷದೊಳಗಿಬೇಕು. ಅಗತ್ಯ ದಾಖಲೆಗಳಾದ ಬಯೋಡಾಟಾ-10 ಪ್ರತಿ, ವಿದ್ಯಾರ್ಹತೆಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪೋಟೋಸ್ ತೆಗೆದುಕೊಂಡು ಬರಬೇಕು. ಈ ಸಂಸ್ಥೆಗಳು ಖಾಸಗಿ ಸಂಸ್ಥೆಯಾಗಿರುತ್ತವೆ. ಈ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 7022459064, 8105619020, 9945587060 ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *