ಬಳ್ಳಾರಿ (ಮಾ.09): ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ “ಅಜಾದಿ ಕಾ ಅಮೃತ ಮಹೋತ್ಸವ’’ ನಿಮಿತ್ತ ಬಳ್ಳಾರಿ ಜಿಲ್ಲೆಯಲ್ಲಿ ಮಿನಿ ಉದ್ಯೋಗ ಮೇಳ ಮಾ.11 ರಂದು ಬೆ.10 ರಿಂದ ಸಂಜೆ 5ರವರೆಗೆ ಬಳ್ಳಾರಿ ತಾಲೂಕು ಕಚೇರಿ ಆವರಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ ಎಂದು ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಮೇಳದಲ್ಲಿ ಸುಮಾರು ಆರು ಕಂಪನಿಗಳು ಭಾಗವಹಿಸಿ ತಮ್ಮಲ್ಲಿರುವ ಖಾಲಿ ಹುದ್ದೆಗಳನ್ನು ನೇರ ಸಂದರ್ಶನ ಮೂಲಕ ನೇಮಕ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಎಸ್ಸೆಸ್ಸೆಲ್ಸಿಕ್ಕಿಂತ ಕಡಿಮೆ, ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ,ಎಎನ್‍ಎಂ, ಡಿಜಿಎನ್‍ಎಂ, ಬಿಎಸ್ಸಿ ನರ್ಸಿಂಗ್, ಬಿ.ಇ(ಮೆಕ್ಯಾನಿಕಲ್),ಪದವಿ ಮತ್ತು ಸ್ನಾತಕೋತ್ತರ ಪದವಿ ಸೇರಿದಂತೆ ವಿವಿಧ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ಸ್ವಯಂ ವಿವರಗಳೊಂದಿಗೆ ಈ ಮೇಳದಲ್ಲಿ ಭಾಗವಹಿಸಿ ಉದ್ಯೋಗವನ್ನು ನೆರವಾಗಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಮೊ :9844444958/ದೂ:08392 -27398 ಸಂಪರ್ಕಿಸಬಹುದು .


