Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉದ್ಯೋಗ ಮೇಳ : ಹೊಸ ಕ್ಯೂ.ಆರ್.ಕೋಡ್ ಬಳಸಿ ನೊಂದಣಿ ಮನವಿ

---Advertisement---

 

ಚಿತ್ರದುರ್ಗ. ಜ.30: ಫೆಬ್ರವರಿ 1 ರಂದು ಭಾನುವಾರ ನಡೆಯಲಿರುವ ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳು ನೊಂದಣಿ ಮಾಡಿಕೊಳ್ಳುವ ನೀಡಿದ್ದ ಕ್ಯೂ.ಆರ್.ಕೋಡ್‌ನಲ್ಲಿ ತಾಂತ್ರಿಕ ಸಮಸ್ಯೆಯಾಗಿದೆ. ಈ ಹಿನ್ನಲೆಯಲ್ಲಿ ಹೊಸ ಕ್ಯೂ.ಆರ್.ಕೋಡ್ ಸೃಜಿಸಲಾಗಿದೆ.

 

ಅಭ್ಯರ್ಥಿಗಳು ಜಿಲ್ಲಾ ಅಧಿಕೃತ ವೆಬ್ ಸೈಟ್  https://chitradurga.nic.in/en/    ಮೂಲಕ ಗೂಗಲ್ ಫಾರಂ ಲಿಂಕ್  https://forms.gle/hHQmNYk4uBRSV9FeA   ಅಥವಾ ಹೊಸ ಕ್ಯೂ ಆರ್ ಕೋಡ್ ಬಳಸಿ ನೊಂದಣಿ ಮಾಡಿಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

ಫೆ.1 ರಂದು ನಗರದ ಸರ್ಕಾರಿ ಕಲಾ ಕಾಲೇಜು ಆವರಣದಲ್ಲಿ ಬೆಳಿಗ್ಗೆ 9:30 ರಿಂದ ಪ್ರಾರಂಭವಾಗುವ ಉದ್ಯೋಗ ಮೇಳದಲ್ಲಿ ರಾಜ್ಯದ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ. ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಬಿ.ಇ. ಹಾಗೂ ಯಾವುದೇ ಪದವಿ ಹೊಂದಿರುವ 18 ರಿಂದ 35 ವರ್ಷದೊಳಗಿನ ಪುರುಷ, ಮಹಿಳಾ ಹಾಗೂ ವಿಕಲಚೇತನ ಅಭ್ಯರ್ಥಿಗಳು ಭಾಗವಹಿಸಬಹುದು. ನೊಂದಣಿಗೆ ಯಾವುದೇ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ಕನಿಷ್ಠ 5 ಬಯೋಡೇಟಾ  ಪ್ರತಿ ಆಧಾರ್ ಕಾರ್ಡ್ನ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ತರತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಚಿತ್ರದುರ್ಗದ ಜಿಲ್ಲಾ ಪಂಚಾಯತ್ ಎನ್.ಆರ್.ಎಲ್.ಎಂ ಘಟಕ, ತಾಲ್ಲೂಕು ಪಂಚಾಯತ್ ಕಚೇರಿ ಅಥವಾ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now