KKRTC ನಲ್ಲಿ ಉದ್ಯೋಗ : SSLC ಪಾಸಾದವರಿಗೆ ಇಲ್ಲಿದೆ ಅವಕಾಶ

suddionenews
1 Min Read

ಬೆಂಗಳೂರು: ನಿರುದ್ಯೋಗದಲ್ಲಿದ್ದವರಿಗೆ ಸರ್ಕಾರದಿಂದ ಗುಡ್ ನ್ಯೂಸ್ ಕೊಟ್ಟಿದೆ. ಕೆಎಸ್ಆರ್ಟಿಸಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ಬಾನ ಮಾಡಿದ್ದಾರೆ. ಸರ್ಕಾರಿ ಹುದ್ದೆಗೆ ಹೋಗಬೇಕು ಎಂದುಕೊಂಡವರು ಅರ್ಜಿ ಹಾಕಬಹುದು. ಡಿಸೆಂಬರ್ 4 ಕಡೆಯ ದಿನಾಂಕವಾಗಿದೆ. ಅಷ್ಟರೊಳಗೆ ನೀವೂ ಅರ್ಜಿ ಹಾಕಬಹುದು. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವೂ ಸಿಬ್ಬಂದಿಗಳ ಕೊರತೆಯನ್ನು ಎದುರಿಸುತ್ತಿದೆ. ಹೀಗಾಗಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಕಲ್ಯಾಣ ಕರ್ನಾಟಕ ಸಾರಿಗೆ 150 ಬಸ್ ಚಾಲಕ ಹಾಗೂ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕನಿಷ್ಠ ವಿದ್ಯಾರ್ಹತೆ ಇರುವವರು ಈ ಹುದ್ದೆಗೆ ಅರ್ಜಿ ಹಾಕಬಹುದು. ಆಫ್ಲೈನ್ ಮೂಲಕವೇ ಅರ್ಜಿ ಸಲ್ಲಿಕೆ ಮಾಡಬೇಕಿದೆ. ಬೀದರ್ ನಲ್ಲಿ ಕೆಲಸ ಖಾಲಿ ಇದ್ದು, ಡಿಸೆಂಬರ್ 4ರವರೆಗೂ ಅರ್ಜಿ ಆಹ್ವಾನಕ್ಕೆ ಅವಕಾಶವಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವವರು ಶಿಕ್ಷಣ ಮಂಡಳಿಯಿಂದ ಎಸ್ಎಸ್ಎಲ್ಸಿ ಉತ್ತೀರ್ಣರಾಗಿರಬೇಕು. ಈ ಹುದ್ದೆಗೆ ಅರ್ಜಿ ಸಲ್ಲಿಸುವವರ ವಯೋಮಿತಿ 18 ರಿಂದ 24ಕ್ಕೆ‌ ನಿಗದಿಗೊಳಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ನಿಗಮ/ ಸಾರಿಗೆ ಇಲಾಖೆ ಅಧಿಕಾರಿಗಳು ನೇಮಕ ಮಾಡಿಕೊಳ್ಳಲಿದ್ದಾರೆ. ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಚಾಲನಾ ತರಬೇತಿ ಸಹಿತ, ಬೀದರ್ ನಲ್ಲಿ ಪೋಸ್ಟಿಂಗ್ ನೀಡಲಾಗುತ್ತಿದೆ. ಆಯ್ಕೆ ಆಗುವ ಬಸ್ ಚಾಲಕ ಅಭ್ಯರ್ಥಿಗಳಿಗೆ ಮಾಸಿಕವಾಗಿ 16973 ರೂಪಾಯಿವರೆಗೆ ವೇತನ ನೀಡಲಾಗುವುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಜೊತೆಗೆ ಸಲ್ಲಿಸಬೇಕಾದ ದಾಖಲೆಗಳು, ಷರತ್ತುಗಳು ಹಾಗೂ ಪ್ರಮುಖ ಅಂಶಗಳನ್ನು ನಿಗಮವು ಈ ಸರ್ಕಾರದ ವೆಬ್‌ಸೈಟ್ www.bidar.nic.in ನಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಪರಿಶೀಲಿಸಿಕೊಳ್ಳಬೇಕು.

Share This Article
Leave a Comment

Leave a Reply

Your email address will not be published. Required fields are marked *