ಬೆಂಗಳೂರು: ನಿರುದ್ಯೋಗದಲ್ಲಿದ್ದವರಿಗೆ ಸರ್ಕಾರದಿಂದ ಗುಡ್ ನ್ಯೂಸ್ ಕೊಟ್ಟಿದೆ. ಕೆಎಸ್ಆರ್ಟಿಸಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ಬಾನ ಮಾಡಿದ್ದಾರೆ. ಸರ್ಕಾರಿ ಹುದ್ದೆಗೆ ಹೋಗಬೇಕು ಎಂದುಕೊಂಡವರು ಅರ್ಜಿ ಹಾಕಬಹುದು. ಡಿಸೆಂಬರ್ 4 ಕಡೆಯ ದಿನಾಂಕವಾಗಿದೆ. ಅಷ್ಟರೊಳಗೆ ನೀವೂ ಅರ್ಜಿ ಹಾಕಬಹುದು. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವೂ ಸಿಬ್ಬಂದಿಗಳ ಕೊರತೆಯನ್ನು ಎದುರಿಸುತ್ತಿದೆ. ಹೀಗಾಗಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಕಲ್ಯಾಣ ಕರ್ನಾಟಕ ಸಾರಿಗೆ 150 ಬಸ್ ಚಾಲಕ ಹಾಗೂ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕನಿಷ್ಠ ವಿದ್ಯಾರ್ಹತೆ ಇರುವವರು ಈ ಹುದ್ದೆಗೆ ಅರ್ಜಿ ಹಾಕಬಹುದು. ಆಫ್ಲೈನ್ ಮೂಲಕವೇ ಅರ್ಜಿ ಸಲ್ಲಿಕೆ ಮಾಡಬೇಕಿದೆ. ಬೀದರ್ ನಲ್ಲಿ ಕೆಲಸ ಖಾಲಿ ಇದ್ದು, ಡಿಸೆಂಬರ್ 4ರವರೆಗೂ ಅರ್ಜಿ ಆಹ್ವಾನಕ್ಕೆ ಅವಕಾಶವಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವವರು ಶಿಕ್ಷಣ ಮಂಡಳಿಯಿಂದ ಎಸ್ಎಸ್ಎಲ್ಸಿ ಉತ್ತೀರ್ಣರಾಗಿರಬೇಕು. ಈ ಹುದ್ದೆಗೆ ಅರ್ಜಿ ಸಲ್ಲಿಸುವವರ ವಯೋಮಿತಿ 18 ರಿಂದ 24ಕ್ಕೆ ನಿಗದಿಗೊಳಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ನಿಗಮ/ ಸಾರಿಗೆ ಇಲಾಖೆ ಅಧಿಕಾರಿಗಳು ನೇಮಕ ಮಾಡಿಕೊಳ್ಳಲಿದ್ದಾರೆ. ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಚಾಲನಾ ತರಬೇತಿ ಸಹಿತ, ಬೀದರ್ ನಲ್ಲಿ ಪೋಸ್ಟಿಂಗ್ ನೀಡಲಾಗುತ್ತಿದೆ. ಆಯ್ಕೆ ಆಗುವ ಬಸ್ ಚಾಲಕ ಅಭ್ಯರ್ಥಿಗಳಿಗೆ ಮಾಸಿಕವಾಗಿ 16973 ರೂಪಾಯಿವರೆಗೆ ವೇತನ ನೀಡಲಾಗುವುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಜೊತೆಗೆ ಸಲ್ಲಿಸಬೇಕಾದ ದಾಖಲೆಗಳು, ಷರತ್ತುಗಳು ಹಾಗೂ ಪ್ರಮುಖ ಅಂಶಗಳನ್ನು ನಿಗಮವು ಈ ಸರ್ಕಾರದ ವೆಬ್‌ಸೈಟ್ www.bidar.nic.in ನಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಪರಿಶೀಲಿಸಿಕೊಳ್ಳಬೇಕು.
ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…